ಕುಂದಾಪುರ, ಮಾರ್ಚ್ 12, 2025: ಕುಂದಾಪುರದ ಶಾಸ್ತ್ರಿ ಸರ್ಕಲ್‌ನಲ್ಲಿ ಆಕಸ್ಮಿಕವಾಗಿ ಭೇಟಿಯಾದ ವ್ಯಕ್ತಿಯೊಬ್ಬ ಎಲ್‌ಇಡಿ ಅಳವಡಿಕೆಯ ಕಾರಣಕ್ಕೆಂದು ಹೇಳಿ, 68 ವರ್ಷದ ಕೃಷ್ಣಯ್ಯ ಎಂಬುವವರಿಂದ 75,000 ರೂ. ವಂಚಿಸಿದ ಘಟನೆ ನಡೆದಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 420ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಮೂಡಲಕಟ್ಟೆಯ ಕೃಷ್ಣಯ್ಯ ಎಂಬುವವರು ದಿನಾಂಕ 12 ಮಾರ್ಚ್ 2024ರಂದು ಮಧ್ಯಾಹ್ನ 12:00 ಗಂಟೆಯ ಸುಮಾರಿಗೆ ಶಾಸ್ತ್ರಿ ಸರ್ಕಲ್‌ನಲ್ಲಿ ಆರೋಪಿ ಕಿರಣ್ ಎಂಬಾತನನ್ನು ಭೇಟಿಯಾಗಿದ್ದಾರೆ. ಆರೋಪಿಯು ಎಲ್‌ಇಡಿ ಅಳವಡಿಕೆಗೆ ಕುಂದಾಪುರಕ್ಕೆ ಬಂದಿರುವುದಾಗಿ ಹೇಳಿ, ಪಿರ್ಯಾದಿದಾರರ ಮೊಬೈಲ್‌ನಿಂದ ಫೋನ್‌ಪೇ ಮೂಲಕ 75,000 ರೂ.ಗಳನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡು ವಂಚನೆ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕೃಷ್ಣಯ್ಯ ಅವರು ನೀಡಿದ ಖಾಸಗಿ ದೂರಿನ ಆಧಾರದ ಮೇಲೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 94/2025ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಆರಂಭವಾಗಿದೆ. ಸಾರ್ವಜನಿಕರು ಇಂತಹ ವಂಚನೆಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕೆಂದು ಪೊಲೀಸರು ಸೂಚಿಸಿದ್ದಾರೆ.
Leave a Reply