ಉಡುಪಿ: ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಹೆಡ್ ಕಾನ್ಸ್ಟೇಬಲ್ ಶ್ರೀ ಅರುಣ್ ಅವರು ಏಪ್ರಿಲ್ 29 ರಂದು ಸ್ವಯಂ ಇಚ್ಛೆಯಿಂದ ನಿವೃತ್ತಿ ಹೊಂದಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಆಯೋಜಿಸಲಾದ ಸಮಾರಂಭದಲ್ಲಿ ಅವರನ್ನು ಸನ್ಮಾನಿಸಲಾಯಿತು.


ಶ್ರೀ ಅರುಣ್ ಅವರ ಸಮರ್ಪಣೆ ಮತ್ತು ಕರ್ತವ್ಯ ನಿಷ್ಠೆಯನ್ನು ಶ್ಲಾಘಿಸಿದ ಪೊಲೀಸ್ ಇಲಾಖೆ, ಅವರ ನಿವೃತ್ತ ಜೀವನ ಸುಖಕರವಾಗಿರಲಿ ಎಂದು ಹಾರೈಸಿದೆ. ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
Leave a Reply