ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ: ಇಂದು ದಕ್ಷಿಣ ಕನ್ನಡ ಬಂದ್, ಮಂಗಳೂರಿನಲ್ಲಿ ನಿಷೇಧಾಜ್ಞೆ

ಮಂಗಳೂರು:ಬಜ್ಪೆಯಲ್ಲಿ ನಡೆದ ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್‌ ದಕ್ಷಿಣ ಕನ್ನಡ ಜಿಲ್ಲಾ ಬಂದ್ಗೆ ಕರೆ ನೀಡಿದೆ. ಶುಕ್ರವಾರ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೂ ದಕ್ಷಿಣ ಕನ್ನಡ ಜಿಲ್ಲೆ ಬಂದ್ಗೆ ಕರೆ ನೀಡಲಾಗಿದ್ದು ಹೋಟೆಲ್, ಅಂಗಡಿ ಮುಂಗಟ್ಟುಗಳು ಬಂದ್ ಆಗಿರಲಿವೆ. ಅದೇ ರೀತಿ, ಖಾಸಗಿ ಬಸ್ ಸಂಚಾರ ಕೂಡ ಸ್ಥಗಿತಗೊಳ್ಳಲಿದೆ ಎನ್ನಲಾಗಿದೆ.

ಬಜರಂಗದಳ ಗೋರಕ್ಷಾ ವಿಭಾಗದ ಸದಸ್ಯ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಘಟನೆ ನಡೆದ ಹಿನ್ನೆಲೆಯಲ್ಲಿ ಸದ್ಯ ದ.ಕ ಜಿಲ್ಲೆಯಲ್ಲಿ ಬಂದ್ ಗೆ ಕರೆ ನೀಡಲಾಗಿದೆ. ಇದೇ ನಡುವೆ ಮಂಗಳೂರಿನ ಹಂಪನಕಟ್ಟೆಯಲ್ಲಿ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕಲ್ಲು ತೂರಾಟದಿಂದ ಮೂರು ಬಸ್ ಗಳಿಗೆ ಹಾನಿ ಉಂಟಾಗಿದೆ ಎನ್ನಲಾಗಿದೆ.

ಸದ್ಯ ಮುಂಜಾನೆ ಮಂಗಳೂರಿಗೆ ಆಗಮಿಸಿರುವ ನಾಗರಿಕರು ಸದ್ಯ ಹಠಾತ್ ಬಂದ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನು ಘಟನೆ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಸೆಕ್ಷನ್‌ ಬಿಎನ್‌ಎಸ್ ಸೆಕ್ಷನ್‌ 163 ಅನ್ವಯ ಸೆಕ್ಷನ್‌ ಜಾರಿಗೊಳಿಸಿ ಮಂಗಳೂರು ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್‌ ಆದೇಶಿಸಿದ್ದಾರೆ. ಮೇ 6ರ ವರೆಗೆ ನಿಷೇಧಾಜ್ಞೆ ಮುಂದುವರೆಯಲಿದೆ.

Comments

Leave a Reply

Your email address will not be published. Required fields are marked *