ಬ್ರಹ್ಮಾವರ: ಎಸ್‌ಎಸ್‌ಎಲ್‌ಸಿ ಯಲ್ಲಿ ಉತ್ತೀರ್ಣ; ಹಾರಾಡಿ ಗ್ರಾಮ ಪಂಚಾಯಿತಿ ವತಿಯಿಂದ ಕು. ಪ್ರತೀಕ್ಷಾಗೆ ಸನ್ಮಾನ

ಬ್ರಹ್ಮಾವರ: ತಾಲೂಕಿನ ಹಾರಾಡಿಯಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಶೈಕ್ಷಣಿಕ ಸಾಧನೆಯನ್ನು ಗುರುತಿಸುವ ಸಮಾರಂಭವೊಂದು ಇತ್ತೀಚೆಗೆ ನಡೆಯಿತು. ಈ ಸಂದರ್ಭದಲ್ಲಿ, ಅರಿವು ಕೇಂದ್ರ ಹಾರಾಡಿಯ ಸೌಲಭ್ಯಗಳನ್ನು ಪಡೆದು ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ 91.84 ಅಂಕಗಳೊಂದಿಗೆ ಉತ್ತೀರ್ಣರಾದ ಕು. ಪ್ರತೀಕ್ಷಾ ಅವರನ್ನು ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು, ಸ್ಥಳೀಯ ಮುಖಂಡರು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

Comments

Leave a Reply

Your email address will not be published. Required fields are marked *