ಕುಂದಾಪುರ, ಮೇ 16: ಜಪ್ತಿ ಗ್ರಾಮದ ಸಾರ್ವಜನಿಕ ರಸ್ತೆಯ ಮೇಲೆ ಪಾಕಿಸ್ತಾನ ರಾಷ್ಟ್ರದ ಧ್ವಜದ ಪ್ಲಾಸ್ಟಿಕ್ ಬ್ಯಾನರ್‌ಗಳನ್ನು ಹಾಸಿರುವ ಘಟನೆ ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಿರ್ಯಾದಿದಾರರಾದ ಸಚಿನ್ (29), ಜಪ್ತಿ ಗ್ರಾಮದ ನಿವಾಸಿ, 2025ರ ಮೇ 16ರಂದು ಬೆಳಿಗ್ಗೆ 8 ಗಂಟೆಗೆ ಕಾಳಾವಾರದಿಂದ ಜಪ್ತಿ ಕಡೆಗೆ ತನ್ನ ಮೋಟಾರು ಸೈಕಲಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಅವರು ದಬ್ಬೆ ಕಟ್ಟೆ ಎಂಬ ಸ್ಥಳ ತಲುಪಿದಾಗ, ಸಾರ್ವಜನಿಕ ರಸ್ತೆಯ ಮೇಲೆ ಪಾಕಿಸ್ತಾನದ ಧ್ವಜದ ಪ್ಲಾಸ್ಟಿಕ್ ಬ್ಯಾನರ್ ಒಂದನ್ನು ರಸ್ತೆ ಮೇಲೆ ಹಾಸಿರುವುದನ್ನು ಗಮನಿಸಿದರು.
ಸಚಿನ್ ಅವರು ತಕ್ಷಣವೇ ತಮ್ಮ ವಾಹನವನ್ನು ರಸ್ತೆಯ ಬದಿಗೆ ನಿಲ್ಲಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಅಲ್ಲಿಂದ ಸುಮಾರು 300 ಮೀಟರ್ ದೂರದಲ್ಲಿಯೂ ಇದೇ ರೀತಿಯ ಮತ್ತೊಂದು ಬ್ಯಾನರ್ ರಸ್ತೆ ಮಧ್ಯೆ ಬಿದ್ದಿರುವುದು ಕಂಡುಬಂದಿದ್ದು, ಇದು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ ಎಂಬುದು ಸ್ಪಷ್ಟವಾಗಿದ್ದು.
ಯಾರೋ ಕಿಡಿಗೇಡಿಗಳು ಸಾರ್ವಜನಿಕ ರಸ್ತೆಯ ಮೇಲೆ ದ್ವಜದ ಪ್ಲಾಸ್ಟಿಕ್ ಬ್ಯಾನರ್ ನ್ನು ಹಾಸಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿರುವುದು ಕಂಡು ಬಂದಿದ್ದು.
ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 33/2025 ಅಡಿಯಲ್ಲಿ BNS ಸೆಕ್ಷನ್ 285 ಮತ್ತು 292 ರಂತೆ ಪ್ರಕರಣ ದಾಖಲಾಗಿದೆ. ಪೊಲೀಸರು ಇದರ ಹಿಂದಿರುವ ದುರುದ್ದೇಶ ಅಥವಾ ಸಂಚುಗಳ ಬಗ್ಗೆ ತನಿಖೆ ಆರಂಭಿಸಿದ್ದಾರೆ.
ಪ್ರಾತಿನಿಧ್ಯ ಚಿತ್ರ
Leave a Reply