ಉಡುಪಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಮಂಗಳವಾರ ಬೆಳಗ್ಗೆಯಿಂದಲೇ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲಾಡಳಿತವು ನಗರಸಭೆ, ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ಗಳಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ.
ಮೀನುಗಾರರಿಗೆ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಭಾರೀ ಮಳೆಯಿಂದಾಗಿ ಹಲವೆಡೆ ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದು, ಕೃತಕ ನೆರೆಯ ಲಕ್ಷಣಗಳು ಕಂಡುಬಂದಿವೆ.
Leave a Reply