ಮಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆ ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಹತ್ಯೆಗೈದಿರುವ ಘಟನೆ ಗುರುವಾರ ರಾತ್ರಿ ನಗರದ ಹೊರವಲಯದ ವಳಚ್ಚಿಲ್ ಎಂಬಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಪಲಿಕುಳ ಸಮೀಪದ ಎದುರುಪದವು ನಿವಾಸಿ ಸುಲೈಮಾನ್ ಎಂದು ಗುರುತಿಸಲಾಗಿದ್ದು,ಆರೋಪಿಯನ್ನು ವಳಚ್ಚಿಲ್ ನಿವಾಸಿ ಮುಸ್ತಫಾ ಎಂದು ಗುರುತಿಸಲಾಗಿದೆ.

ಕೌಟುಂಬಿಕ ಸಮಸ್ಯೆಯ ಕುರಿತು ಮಾತುಕತೆ ನಡೆಸುವ ಸಲುವಾಗಿ ಸುಲೈಮಾನ್ ತನ್ನ ಇಬ್ಬರು ಮಕ್ಕಳೊಂದಿಗೆ ವಳಚ್ಚಿಲ್ ಪಡವಿನ ಮನೆಗೆ ಗುರುವಾರ ರಾತ್ರಿ ಬಂದಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಆರೋಪಿ ಮುಸ್ತಫಾ ಚಾಕುವಿನಿಂದ ಸುಲೈಮಾನ್ ಹಾಗೂ ಆತನ ಇಬ್ಬರು ಮಕ್ಕಳಿಗೆ ಇರಿದಿದ್ದಾನೆ. ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಸುಲೈಮಾನ್ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಗಾಯಾಳುಗಳಾದ ಸುಲೈಮಾನ್ ಅವರ ಇಬ್ಬರು ಮಕ್ಕಳನ್ನು ಪಡೀಲ್ ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Leave a Reply