ಉಡುಪಿ, ಮೇ 24, 2025: ಕೇಂದ್ರ ಸರ್ಕಾರದ “ವಕ್ಫ್ ತಿದ್ದುಪಡಿ ಕಾಯ್ದೆ-2025” ವಿರುದ್ಧ ಉಡುಪಿಯ ಮಿಷನ್ ಕಂಪೌಂಡ್‌ನ ಕ್ರಿಶ್ಚಿಯನ್ ಹೈಸ್ಕೂಲ್ ಮೈದಾನದಲ್ಲಿ ಮೇ 13ರಂದು ಆಯೋಜಿಸಲಾಗಿದ್ದ ಬೃಹತ್ ಪ್ರತಿಭಟನಾ ಸಭೆಯನ್ನು “ವಕ್ಫ್ ಉಳಿಸಿ, ಸಂವಿಧಾನ ರಕ್ಷಿಸಿ” ಹೋರಾಟ ಸಮಿತಿಯು ಮುಂದೂಡಿತ್ತು. ಈ ಪ್ರತಿಭಟನಾ ಸಮಾವೇಶವು ಈಗ ಮೇ 30, 2025, ಶುಕ್ರವಾರ ಸಂಜೆ 4:00 ಗಂಟೆಗೆ ಮಿಷನ್ ಕಂಪೌಂಡ್‌ನ ಕ್ರಿಶ್ಚಿಯನ್ ಪದವಿ ಪೂರ್ವ ಕಾಲೇಜ್ ಮೈದಾನದಲ್ಲಿ ನಡೆಯಲಿದೆ.
ಜಾತಿ, ಧರ್ಮ, ಲಿಂಗ, ಭಾಷೆಯ ಭೇದವಿಲ್ಲದೆ ಜಿಲ್ಲೆಯಾದ್ಯಂತ ಜನರು ಈ ಕಾಯ್ದೆಯ ವಿರುದ್ಧ ಒಗ್ಗಟ್ಟಿನಿಂದ ಭಾಗವಹಿಸಲಿದ್ದಾರೆ. ಕಾಶ್ಮೀರದ ಪೆಹಲ್ಗಾಮಿನ ಉಗ್ರವಾದಿ ದಾಳಿಯ ನಂತರ ಭಾರತೀಯ ಸೇನೆಯ ವೈಮಾನಿಕ ದಾಳಿಯ ಸಂದರ್ಭದಲ್ಲಿ ದೇಶದ ವರ್ಚಸ್ಸನ್ನು ಕಾಪಾಡಲು ಪ್ರತಿಭಟನೆಯನ್ನು ಮುಂದೂಡಲಾಗಿತ್ತು. ಈಗ ಮೇ 30ರಂದು ಈ ಪ್ರತಿಭಟನಾ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ.
Leave a Reply