ಮಂಡ್ಯ, ಮೇ 26, 2025: ನಗರದ ಸ್ವರ್ಣಸಂದ್ರ ಬಳಿ ಟ್ರಾಫಿಕ್ ಪೊಲೀಸರ ಯಡವಟ್ಟಿನಿಂದ ಮೂರುವರೆ ವರ್ಷದ ಮಗು ಪ್ರಾಣಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಎಸ್‌ಐಗಳ ತಲೆದಂಡವಾಗಿದೆ.
ಘಟನೆ ವಿವರ:
ಮಗು ಹೃತೀಕ್ಷಾಗೆ ನಾಯಿ ಕಚ್ಚಿದ್ದರಿಂದ ತಂದೆ, ತಾಯಿ ಬೈಕ್ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಹೆಲ್ಮೆಟ್ ತಪಾಸಣೆಗಾಗಿ ಸ್ವರ್ಣಸಂದ್ರ ಬಳಿ ಸಂಚಾರಿ ಠಾಣೆ ಪೊಲೀಸರು ಬೈಕ್ ಅಡ್ಡಗಟ್ಟಿದ್ದಾರೆ. ಹೀಗಾಗಿ ಮಗು ಸೇರಿದಂತೆ ದಂಪತಿ ಆಯಾ ತಪ್ಪಿ ಬಿದಿದ್ದಾರೆ. ಈ ವೇಳೆ ಮಗುವಿನ ತಲೆಗೆ ಬಲವಾದ ಪೆಟ್ಟು ಬಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದೆ.

ಮಗುವನ್ನು ಮಡಿನಲ್ಲಿ ಇಟ್ಟುಕೊಂಡು ರಸ್ತೆಯಲ್ಲೇ ಪೋಷಕರು ಗೋಳಾಡಿದ್ದಾರೆ. ಘಟನೆ ಕಣ್ಣಾರೆ ಕಂಡು ಸಾರ್ವಜನಿಕರು ದಿಗ್ಭ್ರಮೆಗೊಂಡರೆ, ಮಂಡ್ಯ ಸಂಚಾರಿ ಪೊಲೀಸರಿಗೆ ಹೆತ್ತಕರುಳು ಹಿಡಿಶಾಪ ಹಾಕಿದೆ. ಸಂಚಾರಿ ಪೊಲೀಸರ ವಿರುದ್ಧ ಸ್ಥಳೀಯರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳದಲ್ಲಿ ಹೆಲ್ಮೆಟ್ ತಪಾಸಣೆ ಮಾಡುತ್ತಿದ್ದ ಎಎಸ್‌ಐಗಳಾದ ನಾಗರಾಜು, ಜಯರಾಂ, ಗುರುದೇವ್ ಅವರನ್ನು ಅಮಾನತುಗೊಳಿಸಿರುವುದಾಗಿ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ ನೀಡಿದ್ದಾರೆ.
Leave a Reply