ಮಂಗಳೂರು, 27 ಮೇ 2025: ಬಂಟ್ವಾಳದ ಕೊಳತ್ತಮಜಲು ಸಮೀಪದಲ್ಲಿ ಯುವಕ ಅಬ್ದುಲ್ ರಹಿಮಾನ್‌ನ ಹತ್ಯೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.
ಈ ಘಟನೆಯ ಹಿನ್ನೆಲೆಯಲ್ಲಿ ಸಚಿವರು DG & IGP ಮತ್ತು ಕಾನೂನು ಸುವ್ಯವಸ್ಥೆ ADGP ಯವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಕಟ್ಟುನಿಟ್ಟಾದ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಜೊತೆಗೆ, ಮಂಗಳೂರು ಜಿಲ್ಲಾಧಿಕಾರಿ ಮತ್ತು ಎಸ್‌ಪಿಯವರೊಂದಿಗೆ ಚರ್ಚಿಸಿದ ಸಚಿವರು, ಮಂಗಳೂರಿನಲ್ಲಿ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ವಿಶೇಷ ನಿಗಾವಹಿಸಿ ಕಾನೂನು ಸುವ್ಯವಸ್ಥೆ ಕಾಪಾಡಲು ಕಠಿಣ ಕ್ರಮಗಳನ್ನು ಜಾರಿಗೊಳಿಸುವಂತೆ ಆದೇಶಿಸಿದ್ದಾರೆ.
Leave a Reply