ಮಂಗಳೂರು, 27 ಮೇ, 2025: ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಮಂಗಳೂರು ಬಂದ್‌ಗೆ ಕರೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶ್ವ ಹಿಂದೂ ಪರಿಷತ್ ನಾಯಕ ಶರಣ್ ಪಂಪ್‌ವೆಲ್ ನನ್ನು ಕದ್ರಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಬಂಧನದ ಸುದ್ದಿ ಹರಡುತ್ತಿದ್ದಂತೆ, ವಿವಿಧ ಸಂಘಟನೆಗಳ ಕಾರ್ಯಕರ್ತರು ಕದ್ರಿ ಪೊಲೀಸ್ ಠಾಣೆಯ ಹೊರಗೆ ಜಮಾಯಿಸಿದರು. ಪೊಲೀಸರ ಕ್ರಮವನ್ನು ಕಾರ್ಯಕರ್ತರು ಖಂಡಿಸಿದರು. ಡಿಸಿಪಿ ರವಿಶಂಕರ್ ಪೊಲೀಸ್ ಠಾಣೆಗೆ ಭೇಟಿ ನೀಡಿ, ನಿಷೇಧಾಜ್ಞೆ ಜಾರಿಯಲ್ಲಿದ್ದ ಕಾರಣ, ಜನಸಮೂಹವನ್ನು ಠಾಣೆಯ ಆವರಣದಿಂದ ಚದುರಿಸಿದರು.
ನಂತರ ಶರಣ್ ಪಂಪ್‌ವೆಲ್‌ನನ್ನು ಪೊಲೀಸರು ವೈದ್ಯಕೀಯ ಪರೀಕ್ಷೆಗಾಗಿ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಅಪ್ಡೇಟ್:
ಬಂಧನದ ಬಳಿಕ ಶರಣ್ ಪಂಪ್‌ವೆಲ್ ಅವರನ್ನು ಮಂಗಳೂರಿನ ಬೋಂದೆಲ್‌ನಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಪೊಲೀಸರು ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಶರಣ್ ಪಂಪ್‌ವೆಲ್‌ಗೆ ಜಾಮೀನು ನೀಡಿ ಆದೇಶಿಸಿದರು.
Leave a Reply