ಬಂಟ್ವಾಳ, ಮೇ 30, 2025: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿಯಲ್ಲಿ ಮೇ 27ರಂದು ನಡೆದ ಅಬ್ದುಲ್ ರಹಿಮಾನ್ ಅವರ ಕೊಲೆ ಮತ್ತು ಕಲಂದರ್ ಶಾಫಿ ಅವರ ಮೇಲಿನ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಇದೀಗ ಶುಕ್ರವಾರ (ಮೇ 30) ಮತ್ತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬಂಟ್ವಾಳದ ತೆಂಕಬೆಳ್ಳೂರು ಗ್ರಾಮದ ಸುಮಿತ್ ಆಚಾರ್ಯ (27) ಮತ್ತು ಬಡಗಬೆಳ್ಳೂರು ಗ್ರಾಮದ ರವಿರಾಜ್ (23) ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ, ಕುರಿಯಾಳ ಗ್ರಾಮದ ಮುಂಡರಕೋಡಿ ಮನೆಯ ದೀಪಕ್ ಪೂಜಾರಿ (21), ಅಮ್ಮುಂಜೆ ಗ್ರಾಮದ ಶಿವಾಜಿ ನಗರದ ಪೃಥ್ವಿರಾಜ್ ಜೋಗಿ (21) ಹಾಗೂ ಅಮ್ಮುಂಜೆ ಗ್ರಾಮದ ಚಿಂತನ್ ಬೆಳ್ಚಡ (19) ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಪ್ರಕರಣದ ತನಿಖೆ ಮುಂದುವರಿದಿದೆ.
Leave a Reply