ಕೋಟ: ಸಾಮಾಜಿಕ ಜಾಲತಾಣಗಳಲ್ಲಿ ಹಳೆಯ ವಿಡಿಯೋವೊಂದನ್ನು ಹಂಚಿಕೊಂಡು ಕೋಮು ಸಂಘರ್ಷಕ್ಕೆ ಪ್ರಚೋದಿಸಿ, ಕೋಮು ಗಲಭೆ ಉಂಟುಮಾಡಲು ಪ್ರೇರೇಪಿಸಿದ ಆರೋಪದ ಮೇಲೆ ಕೋಟ ಪೊಲೀಸರು ಆರೋಪಿಯೊಬ್ಬನನ್ನು ಮೇ 31, 2025ರಂದು ಬಂಧಿಸಿದ್ದಾರೆ.
ಬಂಧಿತ ಆರೋಪಿ ಉಡುಪಿಯ ಮಾಜಿ ಜಿಪಂ ಸದಸ್ಯ ರಾಘವೇಂದ್ರ ಕಾಂಚನ್ ಬಾರಿಕೆರೆ. ಈತನ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಡಬಲ್ ಮರ್ಡರ್ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ. ಬಂಧನದ ನಂತರ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ರಿಯಾಜ್ ಪರಂಗಿ ಪೇಟೆ ಎಂಬವರ ಹಳೆಯ ವಿಡಿಯೋವನ್ನು (2021ರಲ್ಲಿ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ) ಶೇರ್ ಮಾಡಿ, ಸ್ಥಳೀಯ ಹಿಂದೂ ಯುವಕರನ್ನು ಕೋಮು ಸಂಘರ್ಷಕ್ಕೆ ಪ್ರಚೋದಿಸುವ ಮತ್ತು ಕೋಮು ಗಲಭೆಗೆ ಪ್ರೇರೇಪಿಸುವ ರೀತಿಯಲ್ಲಿ ರಾಘವೇಂದ್ರ ಕಾಂಚನ್ ಬಾರಿಕೆರೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಈತನ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 108/2025ರಡಿ ಕಲಂ 196, 56 BNS ಪ್ರಕಾರ ಪ್ರಕರಣ ದಾಖಲಾಗಿದೆ.
Leave a Reply