ಗಂಗೊಳ್ಳಿ: ಗಂಗೊಳ್ಳಿಯ ಜಿ.ಎಸ್.ವಿ.ಎಸ್.ಅಸೋಸಿಯೇಶನ್ ವತಿಯಿಂದ ನಡೆಸಲ್ಪಡುವ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುದೀರ್ಫ 36 ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿ ಮುಖ್ಯೋಪಾಧ್ಯಾಯರಾಗಿ ವಯೋನಿವೃತ್ತಿ ಹೊಂದಿದ ಶಾಲೆಯ ಮುಖ್ಯ ಶಿಕ್ಷಕ ಜಿ. ವಿಶ್ವನಾಥ ಭಟ್ ಅವರನ್ನು ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದಿಂದ ಬೀಳ್ಕೊಡಲಾಯಿತು.
ಶಾಲೆಯ ಸಭಾಂಗಣದಲ್ಲಿ ಶನಿವಾರ ಜರಗಿದ ಕಾರ್ಯಕ್ರಮದಲ್ಲಿ ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ, ಕಾರ್ಯದರ್ಶಿ ಎಚ್. ಗಣೇಶ ಕಾಮತ್ ಮತ್ತು ಎಸ್.ವಿ. ವಿದ್ಯಾಸಂಸ್ಥೆಗಳ ಸಂಚಾಲಕ ಎನ್. ಸದಾಶಿವ ನಾಯಕ್ ಅವರು ವಯೋನಿವೃತ್ತಿ ಹೊಂದಿದ ಮುಖ್ಯ ಶಿಕ್ಷಕ ಜಿ.ವಿಶ್ವನಾಥ ಭಟ್ ಅವರ ಸೇವೆಯನ್ನು ಪ್ರಶಂಶಿಸಿ ಅವರನ್ನು ಗೌರವಿಸಿದರು.

ಆಡಳಿತ ಮಂಡಳಿ ಸದಸ್ಯರಾದ ಎಂ. ವಿನೋದ ಪೈ, ಜಿ. ವೆಂಕಟೇಶ ನಾಯಕ್, ಎನ್. ಅಶ್ವಿನ್ ನಾಯಕ್, ಎಂ. ನಾಗೇಂದ್ರ ಪೈ, ಶಿಕ್ಷಕ-ರಕ್ಷಕ ಸಮಿತಿ ಕಾರ್ಯದರ್ಶಿ ಅಜಿತ್ ಭಟ್, ನಿಯೋಜಿತ ಶಿಕ್ಷಕಿ ಫಾತಿಮಾ ಮರಿಯಾ ಬೆರೆಟ್ಟೊ, ಪ್ರಭಾರ ಮುಖ್ಯ ಶಿಕ್ಷಕ ದೀಕ್ಷಿತ್ ಮೇಸ್ತ, ಶಾಲೆಯ ಶಿಕ್ಷಕರು, ಶಿಕ್ಷಕ-ರಕ್ಷಕ ಸಮಿತಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
ಮಹಾಬಲ ಆಚಾರ್ಯ ಅನಿಸಿಕೆ ವ್ಯಕ್ತಪಡಿಸಿದರು. ದೀಕ್ಷಿತ್ ಮೇಸ್ತ ಸ್ವಾಗತಿಸಿದರು. ಮಾಲಾಶ್ರೀ ಖಾರ್ವಿ ಕಾರ್ಯಕ್ರಮ ನಿರ್ವಹಿಸಿದರು. ರೇಖಾ ಖಾರ್ವಿ ವಂದಿಸಿದರು.
Leave a Reply