ಗಂಗೊಳ್ಳಿ: ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಪಿಯು ಶಿಕ್ಷಣವು ಉತ್ತಮವಾದ ತಳಹದಿಯನ್ನು ನೀಡುತ್ತದೆ ಹಾಗಾಗಿ ಸರಿಯಾದ ರೀತಿಯಲ್ಲಿ ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಗಂಗೊಳ್ಳಿಯ ಜಿ.ಎಸ್. ವಿ.ಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ ಪೈ ಹೇಳಿದರು.
ಅವರು ಇಲ್ಲಿನ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ತರಗತಿಗಳ ಆರಂಭೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ನಿಸರ್ಗ, ಮನಾಲಿ, ಪ್ರಾರ್ಥನಾ, ಪೂರ್ವಿಕ, ಅದಿತಿ, ಸ್ಕಂದ, ಬಿಂದುಶ್ರೀ ಅವರನ್ನು ಅಭಿನಂದಿಸಲಾಯಿತು.

ಕಾಲೇಜಿನ ಕಾರ್ಯದರ್ಶಿ ಸದಾಶಿವ ನಾಯಕ್ ಎನ್. ಶುಭ ಹಾರೈಸಿದರು. ಆಂಗ್ಲ ಭಾಷೆ ಉಪನ್ಯಾಸಕ ಥಾಮಸ್ ಪಿ.ಎ ಕಾಲೇಜಿನ ನೀತಿ ನಿಯಮಗಳ ಬಗ್ಗೆ ಮಾಹಿತಿ ನೀಡಿದರು. ಕಾಲೇಜು ಕಛೇರಿಯ ಮುಖ್ಯಸ್ಥೆ ಪ್ರಮೋದ ಪೈ. ಎಮ್. ಜಿ. ಕಛೇರಿ ಸೌಲಭ್ಯಗಳು ಮತ್ತು ವಿದ್ಯಾರ್ಥಿ ವೇತನದ ಮಾಹಿತಿ ನೀಡಿದರು. ಗಣಿತಶಾಸ್ತ್ರ ಉಪನ್ಯಾಸಕ ಪ್ರವೀಣ್ ಕಾಮತ್ ಸಿಬ್ಬಂದಿಗಳನ್ನು ಪರಿಚಯಿಸಿದರು.
ಹಿಂದಿ ಉಪನ್ಯಾಸಕ ನಾರಾಯಣ ಈ ನಾಯ್ಕ್ ಕಾರ್ಯಕ್ರಮ ನಿರ್ವಹಿಸಿದರು. ಕನ್ನಡ ಉಪನ್ಯಾಸಕ ಸುಜಯಿಂದ್ರ ಹಂದೆ ಸಹಕರಿಸಿದರು. ಕಾಲೇಜಿನ ಸಂಸ್ಕಂತ ಉಪನ್ಯಾಸಕ ವೆಂಕಟೇಶ ಮೂರ್ತಿ ಎನ್. ಸಿ. ಸ್ವಾಗತಿಸಿ, ಅರ್ಥಶಾಸ್ತ್ರ ಉಪನ್ಯಾಸಕಿ ಸುಗುಣ ಆರ್ ಕೆ. ವಂದಿಸಿದರು.
Leave a Reply