ಶಿವಮೊಗ್ಗ: ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ಸಂದರ್ಭ ಅಪಘಾತವಾಗಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಉಷಾ ನರ್ಸಿಂಗ್ ಹೋಂ ಸರ್ಕಲ್ ಬಳಿ ರವೀಂದ್ರ ನಗರ ಗಣಪತಿ ದೇವಸ್ಥಾನದ ಮುಂದೆ ಕಳೆದ ರಾತ್ರಿ ಘಟನೆ ಸಂಭವಿಸಿದೆ.
ವೆಂಕಟೇಶ ನಗರದ ನಿವಾಸಿ ಅಭಿ (21) ಮೃತ ದುರ್ದೈವಿ. ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಯುವಕರು ಬೈಕ್ ಜಾಥಾ ನಡೆಸಿದರು. ಈ ಸಂದರ್ಭ ಎರಡು ಬೈಕುಗಳು ಮುಖಾಮುಖಿ ಡಿಕ್ಕಿಯಾಗಿದ್ದು ತೀವ್ರ ಗಾಯಗೊಂಡಿದ್ದ ಅಭಿ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.
ಅಪಘಾತವಾಗುತ್ತಿದ್ದಂತೆ ಯುವಕರು ಕೂಡಲೆ ನೆರವಿಗೆ ಧಾವಿಸಿದ್ದಾರೆ. ಆದರೆ ಈ ವೇಳೆಗಾಗಲೆ ಅಭಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
Leave a Reply