ಗಂಗೊಳ್ಳಿ: ಕುಂದಾಪುರ ತಾಲೂಕಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ 2024-25ನೇ ಸಾಲಿನ ವಾರ್ಷಿಕ ಸಂಚಿಕೆ ‘ದೃಷ್ಟಿ’ ಅನಾವರಣ ಕಾರ್ಯಕ್ರಮವು 2025ರ ಜೂನ್ 6 ರ ಶುಕ್ರವಾರ ಸಂಜೆ 3:00 ಗಂಟೆಗೆ ಕಾಲೇಜು ಸಭಾಂಗಣದಲ್ಲಿ ಜರಗಲಿದೆ. ಈ ಕಾರ್ಯಕ್ರಮವು ಪ್ರಾಂಶುಪಾಲರಾದ ಶ್ರೀಮತಿ ಕವಿತಾ ಎಂ.ಸಿ. ರವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಪ್ರಸಿದ್ಧ ಕವಯತ್ರಿ ಹಾಗೂ ಲೇಖಕಿ ಶ್ರೀಮತಿ ಸುಮನ ಆರ್. ಹೇರ್ಳೆ ಅವರು ಸಂಚಿಕೆಯನ್ನು ಅನಾವರಣಗೊಳಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಜಿ.ಎಸ್.ವಿ.ಎಸ್. ಅಸೋಸಿಯೇಷನ್‌ನ ಅಧ್ಯಕ್ಷರಾದ ಡಾ. ಕಾಶೀನಾಥ ಪೈ, ಕಾರ್ಯದರ್ಶಿಗಳಾದ ಶ್ರೀ ಹೆಚ್. ಗಣೇಶ್ ಕಾಮತ್ ಹಾಗೂ ಕಾಲೇಜಿನ ಕಾರ್ಯದರ್ಶಿಗಳಾದ ಶ್ರೀ ಎನ್. ಸದಾಶಿವ ನಾಯಕ್ ಗೌರವ ಉಪಸ್ಥಿತರಾಗಲಿದ್ದಾರೆ. ವಿದ್ಯಾರ್ಥಿಗಳ ಸೃಜನಶೀಲತೆಯನ್ನು ಪ್ರತಿಬಿಂಬಿಸುವ ಈ ಸಂಚಿಕೆಯ ಅನಾವರಣಕ್ಕೆ ಎಲ್ಲರೂ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕಾಲೇಜು ಆಡಳಿತ ಮಂಡಳಿ ಆಹ್ವಾನಿಸಿದೆ.
Leave a Reply