ಹರಿದ್ವಾರ: ಉತ್ತರಾಖಂಡದ ಹರಿದ್ವಾರದಲ್ಲಿ ಮಾಜಿ ಬಿಜೆಪಿ ಮಹಿಳಾ ಮೋರ್ಚಾ ನಾಯಕಿ ಅನಾಮಿಕಾ ಶರ್ಮಾ ಅವರನ್ನು ತಮ್ಮ ಪ್ರಿಯಕರ ಸುಮಿತ್ ಪಟ್ವಾಲ್ ಜೊತೆಗೆ, 2025ರ ಜನವರಿಯಿಂದ ಮಾರ್ಚ್‌ವರೆಗೆ ತಮ್ಮ 13 ವರ್ಷದ ಮಗಳ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಸಹಕರಿಸಿದ ಆರೋಪದಡಿ ಬಂಧಿಸಲಾಗಿದೆ. ಬಾಲಕಿಯ ಸಾಕ್ಷ್ಯ ಮತ್ತು ವೈದ್ಯಕೀಯ ಪರೀಕ್ಷೆಯಿಂದ ಆರೋಪಗಳು ದೃಢಪಟ್ಟಿವೆ.
ಈ ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ಬಿಜೆಪಿ ಅನಾಮಿಕಾ ಶರ್ಮಾ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ. ಆರೋಪಿಗಳಲ್ಲಿ ಒಬ್ಬನಾದ ಶುಭಮ್ ಇನ್ನೂ ತಲೆಮರೆಸಿಕೊಂಡಿದ್ದಾನೆ. ರಾನಿಪುರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಮತ್ತು POCSO ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮತ್ತು ಕಾನೂನು ಕ್ರಮಗಳು ಮುಂದುವರಿದಿವೆ.
Leave a Reply