ಬ್ರಹ್ಮಾವರ, ಜೂನ್ 07, 2025: ಬ್ರಹ್ಮಾವರ ಪೊಲೀಸ್ ಠಾಣೆಯ ಉಪನಿರೀಕ್ಷಕ ಸುದರ್ಶನ್ ದೊಡಮನಿ ರವರು ದಿನಾಂಕ 06-06-2025 ರಂದು ರಾತ್ರಿ 8:30 ಗಂಟೆಗೆ ಸಿಬ್ಬಂದಿಯೊಂದಿಗೆ ಠಾಣಾ ವ್ಯಾಪ್ತಿಯಲ್ಲಿ ಗಸ್ತು ಕರ್ತವ್ಯದಲ್ಲಿರುವಾಗ, ನೀಲಾವರ ಗ್ರಾಮದ ಎಳ್ಳಂಪಳ್ಳಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಕೆಲವರು ಅಕ್ರಮವಾಗಿ ಮದ್ಯಪಾನ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತಿದೆ.
ಮಾಹಿತಿಯ ಆಧಾರದ ಮೇಲೆ, ರಾತ್ರಿ 8:50 ಗಂಟೆಗೆ ಸದರಿ ಸ್ಥಳಕ್ಕೆ ದಾಳಿ ನಡೆಸಿದಾಗ ಇಬ್ಬರು ವ್ಯಕ್ತಿಗಳು ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವಿಸುತ್ತಿರುವುದು ಕಂಡುಬಂದಿದೆ. ರಾತ್ರಿ ಸಮಯವಾದ್ದರಿಂದ ಪಂಚರು ಲಭ್ಯವಿರದಿದ್ದು, ಆರೋಪಿಗಳು ತಪ್ಪಿಸಿಕೊಳ್ಳುವ ಸಾಧ್ಯತೆ ಇದ್ದ ಕಾರಣ, ತಕ್ಷಣವೇ ದಾಳಿ ನಡೆಸಿ ಆರೋಪಿಗಳನ್ನು ವಿಚಾರಣೆಗೊಳಪಡಿಸಲಾಗಿದೆ. ವಿಚಾರಣೆಯಲ್ಲಿ ಅವರು ಮದ್ಯ ಸೇವಿಸಿರುವುದನ್ನು ಒಪ್ಪಿಕೊಂಡಿದ್ದಾರೆ.
ಪೊಲೀಸರು ಆರೋಪಿಗಳಿಂದ DSP Black ಕಂಪನಿಯ 180 ML ಡಿಲಕ್ಸ್ ವಿಸ್ಕಿ ಖಾಲಿ ಪ್ಲಾಸ್ಟಿಕ್ ಬಾಟಲಿ-01, DSP Black ಕಂಪನಿಯ 90 ML ಡಿಲಕ್ಸ್ ವಿಸ್ಕಿ ತುಂಬಿದ ಟೆಟ್ರಾ ಪ್ಯಾಕ್-02, ಮದ್ಯ ಸೇವನೆಗೆ ಬಳಸಿದ ಪ್ಲಾಸ್ಟಿಕ್ ಗ್ಲಾಸ್-02, ಆಕ್ವಾ ಫಾರ್ಚೂನ್ ಎಂಬ 1 ಲೀಟರ್ ಖಾಲಿ ಪ್ಲಾಸ್ಟಿಕ್ ನೀರಿನ ಬಾಟಲಿ-01, ಆಕ್ವಾ ಫಾರ್ಚೂನ್ ಎಂಬ ½ ಲೀಟರ್ ನೀರು ತುಂಬಿದ ಪ್ಲಾಸ್ಟಿಕ್ ಬಾಟಲಿ-01, ಮತ್ತು ಪ್ಲಾಸ್ಟಿಕ್ ಕ್ಯಾರಿಬ್ಯಾಗ್‌ನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಎಕ್ಸೈಸ್ ಕಾಯಿದೆಯ ಕಲಂ 15 A ರ ಅಡಿಯಲ್ಲಿ ಅಪರಾಧ ಕ್ರಮಾಂಕ 126/2025 ರಂತೆ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.
Leave a Reply