ಗೋಕರ್ಣ:ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ – 10 ಜನ ಆರೋಪಿತರ ಬಂಧನ

ಗೋಕರ್ಣ, ಜೂನ್ 07, 2025: ಪೊಲೀಸ್ ಠಾಣಾ ವ್ಯಾಪ್ತಿಯ ತೊರ್ಕೆ ಗ್ರಾಮ ಪಂಚಾಯತ್‌ಗೆ ಸೇರಿದ ಹೊಸಕಟ್ಟಾ-ಸಿದ್ದೇಶ್ವರ ನಡುವಿನ ಖಾರ್ಲ್ಯಾಂಡ್‌ನಲ್ಲಿ ಮೀನುಗಾರಿಕೆಗೆ ಸಂಬಂಧಿಸಿದ ವಿವಾದದಿಂದ ಉಂಟಾದ ಜಗಳದ ಹಿನ್ನೆಲೆಯಲ್ಲಿ, ದಿನಾಂಕ 05/06/2025 ರಂದು ರಾತ್ರಿ 9:30 ಗಂಟೆಗೆ ಸ್ಥಳಕ್ಕೆ ಭೇಟಿ ನೀಡಿದ ERSS-112 ವಾಹನದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ, ಹೊಸಕಟ್ಟಾ ಮತ್ತು ಮಸಾಕಲ್ ಗ್ರಾಮಗಳ 10 ಜನ ಆರೋಪಿತರ ವಿರುದ್ಧ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಗುನ್ನಾ ಸಂಖ್ಯೆ 58/2025ರಡಿ, ಭಾರತೀಯ ನ್ಯಾಯ ಸಂಹಿತೆ-2023ರ ಕಲಂ 189(2), 191(2), 191(3), 194(2), 115(2), 118(1), 121(1), 132, 352, 351(2), ಮತ್ತು 190ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತಕ್ಷಣ ಕ್ರಮ ಕೈಗೊಂಡ ಪೊಲೀಸರು, ಆರೋಪಿತರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿತರಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಬಂಧಿತರನ್ನು ಕಾರವಾರ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.

ಈ ಘಟನೆಯಿಂದ ಸ್ಥಳೀಯವಾಗಿ ತೀವ್ರ ಆತಂಕ ಉಂಟಾಗಿದ್ದು, ಪೊಲೀಸರು ಶಾಂತಿ ಕಾಪಾಡಲು ಕಟ್ಟೆಚ್ಚರಿಕೆ ವಹಿಸಿದ್ದಾರೆ.

Comments

Leave a Reply

Your email address will not be published. Required fields are marked *