ಕುಂದಾಪುರ, ಜೂನ್ 8, 2025: ಕುಂದಾಪುರ ಪೊಲೀಸ್ ಠಾಣೆಯ ಎಎಸ್‌ಐ ಧರ್ಮೇಂದ್ರ ಅವರು ದಿನಾಂಕ 07/06/2025ರಂದು ಮಧ್ಯಾಹ್ನ ಕರ್ತವ್ಯದಲ್ಲಿದ್ದ ವೇಳೆ ಎರಡು ಪ್ರತ್ಯೇಕ ಘಟನೆಗಳಲ್ಲಿ ಮಾದಕ ವಸ್ತು ಸೇವನೆಯ ಆರೋಪದಡಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಮೊದಲ ಘಟನೆಯಲ್ಲಿ, ಕುಂದಾಪುರ ತಾಲೂಕಿನ ವಡೇರಹೋಬಳಿ ಗ್ರಾಮದ ಶಾಸ್ತ್ರೀ ಸರ್ಕಲ್ ಬಳಿ ಕರ್ತವ್ಯದಲ್ಲಿದ್ದಾಗ ಒಬ್ಬ ವ್ಯಕ್ತಿಯು ತೂರಾಡಿಕೊಂಡು ಅಮಲಿನ ಸ್ಥಿತಿಯಲ್ಲಿ ಕಂಡುಬಂದಿದ್ದಾನೆ. ಸೂಕ್ಷ್ಮವಾಗಿ ಪರಿಶೀಲಿಸಿದಾಗ ಆತನು ಮಾದಕ ವಸ್ತು ಸೇವಿಸಿರುವ ಶಂಕೆಯ ಮೇರೆಗೆ ವಶಕ್ಕೆ ಪಡೆಯಲಾಯಿತು. ವಿಚಾರಣೆಯಲ್ಲಿ ಆತನ ಹೆಸರು ಮಹಮ್ಮದ್ ಅಜ್ವಾನ್ (23) ಎಂದು ತಿಳಿದುಬಂದಿತು. ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ, ವೈದ್ಯರು ಮಾದಕ ವಸ್ತು ಸೇವನೆಯನ್ನು ದೃಢಪಡಿಸಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 72/2025, ಕಲಂ 27(b) NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಇದೇ ದಿನ ಮಧ್ಯಾಹ್ನ, ಕುಂದಾಪುರ ತಾಲೂಕಿನ ಕಸಬಾ ಗ್ರಾಮದ ಪಾರಿಜಾತ ಸರ್ಕಲ್ ಬಳಿ ಕರ್ತವ್ಯದಲ್ಲಿದ್ದಾಗ, ಮತ್ತೊಬ್ಬ ವ್ಯಕ್ತಿಯು ತೂರಾಡಿಕೊಂಡು ಅಮಲಿನ ಸ್ಥಿತಿಯಲ್ಲಿ ಕಂಡುಬಂದಿದ್ದಾನೆ. ಪರಿಶೀಲನೆಯಲ್ಲಿ ಆತನು ಮಾದಕ ವಸ್ತು ಸೇವಿಸಿರುವ ಶಂಕೆಯ ಮೇರೆಗೆ ವಶಕ್ಕೆ ಪಡೆಯಲಾಯಿತು. ವಿಚಾರಣೆಯಲ್ಲಿ ಆತನ ಹೆಸರು ಮಹಮ್ಮದ್ ಶಫೀಕ್ (18) ಎಂದು ತಿಳಿದುಬಂದಿತು. ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ, ವೈದ್ಯರು ಮಾದಕ ವಸ್ತು ಸೇವನೆಯನ್ನು ದೃಢಪಡಿಸಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 73/2025, ಕಲಂ 27(b) NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Leave a Reply