ಕುಂದಾಪುರ: ನಗರದ ವಿವಾಹಿತ ಮಹಿಳೆಯೋರ್ವರು ನಾಪತ್ತೆಯಾದ ಬಗ್ಗೆ ಕುಂದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ. ಇಲ್ಲಿನ ವಿಠಲವಾಡಿ ಮೂಲದ ಹೀನಾ ಕೌಸರ್ (33) ನಾಪತ್ತೆಯಾದ ಮಹಿಳೆ.
ಹೀನಾ ಪತಿ ವಿದೇಶದಲ್ಲಿದ್ದು ಎರಡು ಮಕ್ಕಳು ಹಾಗೂ ತಾಯಿಯೊಂದಿಗೆ ಕುಂದಾಪುರ ವಿಠಲವಾಡಿಯಲ್ಲಿ ವಾಸಿಸುತ್ತಿದ್ದರು. ಸೋಮವಾರ ಬೆಳಿಗ್ಗೆ 04-00 ಗಂಟೆ ಸುಮಾರಿಗೆ ಕುಂದಾಪುರ ಚರ್ಚ್ ರಸ್ತೆಯಿಂದ ಕೋಡಿಗೆ ಹೋಗುವ ಸೇತುವೆ ಬಳಿ ಮಹಿಳೆಯ ಸ್ಕೂಟರ್ ಹಾಗೂ ಚಪ್ಪಲಿ ಪತ್ತೆಯಾಗಿದೆ.
ಪೊಲೀಸರು, ಅಗ್ನಿ ಶಾಮಕದಳ ಹಾಗೂ ಸ್ಥಳೀಯರು ಸೇರಿ ನದಿಯಲ್ಲಿ ಹುಡುಕಾಟ ನಡೆಸಿದ್ದು ಎಲ್ಲಿಯೂ ಪತ್ತೆ ಆಗಿರುವುದಿಲ್ಲ. ಮೊಬೈಲ್ ಸ್ವಿಚ್ ಆಫ್ ಆಗಿರುತ್ತದೆ. ಇದರಿಂದಾಗಿ ಆತ್ಮಹತ್ಯೆಯೋ ಅಥವಾ ನಾಪತ್ತೆಯೋ ಎನ್ನುವ ಅನುಮಾನ ವ್ಯಕ್ತವಾಗಿದೆ. ಕುಂದಾಪುರ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
Leave a Reply