ಉಡುಪಿ: ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಅಹ್ವಾನ

ಉಡುಪಿ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಇವರ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಫಿಲಿಯೇಟೆಡ್ ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳನ್ನು ಪ್ರಾರಂಭಿಸಲು ಆಸಕ್ತಿ ಹೊಂದಿರುವ ಹಾಗೂ ಕರ್ನಾಟಕದ ಸೊಸೈಟಿ ನೊಂದಣಿ ಕಾಯ್ದೆಯಡಿಯಲ್ಲಿ ನೊಂದಾಯಿಸಲಾದ ಮಂಡಳಿಗಳು, ಸೊಸೈಟಿಗಳು ಹಾಗೂ ಟ್ರಸ್ಟ್ಗಳಿಂದ ಅರ್ಜಿ ಅಹ್ವಾನಿಸಿದೆ.

ಆಸಕ್ತ ಸಂಸ್ಥೆಗಳು ಬಿ.ಎಸ್ಸಿ. (ಹಾನರ್ಸ್) ಕೃಷಿ, ಬಿ.ಟೆಕ್ ಕೃಷಿ ಇಂಜಿನಿಯರಿಂಗ್, ಬಿ.ಟೆಕ್. ಕೃಷಿ ಬಯೋಟೆಕ್ನಾಲಜಿ, ಬಿ.ಟೆಕ್. ಫುಡ್ ಟೆಕ್ನಾಲಜಿ, ಬಿ.ಎಸ್ಸಿ. (ಹಾನರ್ಸ್) ಅರಣ್ಯ, ಬಿ.ಎಸ್ಸಿ. (ಹಾನರ್ಸ್) ಕಮ್ಯೂನಿಟಿ ವಿಜ್ಞಾನ, ಬಿ.ಎಸ್ಸಿ. (ಹಾನರ್ಸ್) ಫುಡ್ ನ್ಯೂಟ್ರೀಶನ್ ಮತ್ತು ಡೈಯಟಿಕ್ಸ್, ಬಿ.ಎಸ್ಸಿ. (ಹಾನರ್ಸ್) ತೋಟಗಾರಿಕೆ ಮತ್ತು ಬಿ.ಎಸ್ಸಿ. (ಹಾನರ್ಸ್) ರೇಷ್ಮೆ ಕೃಷಿ ಪದವಿ ಪ್ರಾರಂಭಿಸಲು ಅರ್ಜಿ ಸಲ್ಲಿಸಬಹುದಾಗಿದೆ.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಅಫಿಲಿಯೇಶನ್‌ಗಾಗಿ ಕನಿಷ್ಟ ಮಾನದಂಡಗಳನ್ನು, ಹೆಚ್ಚಿನ ವಿವರ, ನಿಬಂಧನೆಗಳು ಮತ್ತು ಅರ್ಜಿಗಾಗಿ ವೆಬ್‌ಸೈಟ್ www.uahs.edu.in ಅನ್ನು ಸಂಪರ್ಕಿಸಬಹುದಾಗಿದೆ. ಅಫಿಲಿಯೇಶನ್‌ಗಾಗಿ ಅರ್ಜಿ ಸಲ್ಲಿಸಲು ಜುಲೈ 7 ಕೊನೆಯ ದಿನ. ಅಪೂರ್ಣ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಈ ಸಾಲಿಗೆ ಪರಿಗಣಿಸಲಾಗುವುದಿಲ್ಲ ಎಂದು ವಿಶ್ವವಿದ್ಯಾಲಯದ ಕುಲಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ. 

Comments

Leave a Reply

Your email address will not be published. Required fields are marked *