ಕುಂದಾಪುರ, ಜೂನ್ 14: ವಡೇರಹೋಬಳಿ ಗ್ರಾಮದ ರವಿ (38) ಎಂಬವರ 21 ವರ್ಷದ ಮಗಳು, ಮಾಬುಕಳದ ಫಾರ್ಚುನ್ ಅಕ್ಯಾಡಮಿ ಆಫ್ ಹೆಲ್ತ್ ಸೈನ್ಸ್ ಕಾಲೇಜಿನ ಎರಡನೇ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ, ದಿನಾಂಕ 13/06/2025ರಂದು ಬೆಳಿಗ್ಗೆ 8 ಗಂಟೆಗೆ ಮಂಗಳೂರಿನಲ್ಲಿ ನಡೆಯುವ ಕ್ಯಾಂಪ್ಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದಾರೆ. ಆದರೆ, ಅವರು ಇದುವರೆಗೂ ಮನೆಗೆ ವಾಪಸ್ಸಾಗಿಲ್ಲ.
ಕಾಲೇಜಿನಲ್ಲಿ ವಿಚಾರಿಸಿದಾಗ, ಯಾವುದೇ ಕ್ಯಾಂಪ್ ಆಯೋಜನೆಯಾಗಿರಲಿಲ್ಲ ಎಂದು ತಿಳಿದುಬಂದಿದೆ. ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 79/2025ರಡಿ, ಕಾಣೆಯಾದ ಯುವತಿಯ ಬಗ್ಗೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
Leave a Reply