ಭಟ್ಕಳ, ಜೂನ್ 24, 2025: ಭಟ್ಕಳ ಪೊಲೀಸ್ ಠಾಣಾ ವ್ಯಾಪ್ತಿಯ ಅಂಜುಮನ್ ಗರ್ಲ್ಸ್ ಹೈಸ್ಕೂಲ್‌ಗೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ, ಮಹಿಳಾ ಮತ್ತು ಮಕ್ಕಳ ಕಾನೂನುಗಳು, ರಸ್ತೆ ಸುರಕ್ಷತೆ, ಮಾದಕ ದ್ರವ್ಯದ ದುಷ್ಪರಿಣಾಮಗಳು, ಸೈಬರ್ ಕ್ರೈಂ ಮತ್ತು ಶರಾವತಿ ಪಡೆಯ ಬಗ್ಗೆ ಅರಿವು ಮೂಡಿಸಿದರು.
ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ತಿಳುವಳಿಕೆ, ಸುರಕ್ಷಿತ ಜೀವನಶೈಲಿ ಮತ್ತು ಸಮಾಜದಲ್ಲಿ ಜಾಗೃತರಾಗಿರುವ ಮಹತ್ವವನ್ನು ತಿಳಿಸಲಾಯಿತು. ಪೊಲೀಸ್ ಸಿಬ್ಬಂದಿಗಳು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಅವರ ಪ್ರಶ್ನೆಗಳಿಗೆ ಉತ್ತರಿಸಿದರು.
Leave a Reply