ಭಟ್ಕಳ, ಜೂನ್ 29, 2025: ಭಟ್ಕಳ ತಾಲೂಕಿನ ವೆಂಕಟಾಪುರದ ಐಸ್ ಫ್ಯಾಕ್ಟರಿ ಮೀನಾ ರಸ್ತೆಯಲ್ಲಿ ಮನೆಯ ಬಾಗಿಲು ಮುರಿದು ಒಳನುಗ್ಗಲು ಯತ್ನಿಸುತ್ತಿದ್ದ ಆರೋಪಿಯೊಬ್ಬನನ್ನು ರಾತ್ರಿ ಗಸ್ತು ತಿರುಗುತ್ತಿದ್ದ ಪೊಲೀಸರು ಶಂಕಿತ ಚಲನವಲನ ಕಂಡು ತಕ್ಷಣ ಬೆನ್ನಟ್ಟಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಡುಪಿಯ ಆಕೀಫ್ ಮೊಹ್ಮದ್ ಅಬ್ದುಲ್ ಅಜೀಮ್ ಬುಡಾನ್ ಬಾಷಾ (19) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಬೈಂದೂರು ಮತ್ತು ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈಗಾಗಲೇ ವಿವಿಧ ಕಳ್ಳತನ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಬೈಂದೂರಿನ ಕಾರು ಕಳ್ಳತನ ಪ್ರಕರಣವೊಂದರಲ್ಲಿ ಈತ ಬಂಧಿತನಾಗಿ ಕೇವಲ ಎರಡು ದಿನಗಳ ಹಿಂದೆ ಬಿಡುಗಡೆಗೊಂಡಿದ್ದ ಎಂದು ತಿಳಿದುಬಂದಿದೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ, ನ್ಯಾಯಾಧೀಶರು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಪ್ರಕರಣದ ತನಿಖೆಯನ್ನು ಸಿಪಿಐ ಮಂಜುನಾಥ ಮತ್ತು ಎಸ್‌ಐ ಭರಮಪ್ಪ ಬೆಳಗಲಿ ನೇತೃತ್ವದಲ್ಲಿ ಪೊಲೀಸರು ಕೈಗೆತ್ತಿಕೊಂಡಿದ್ದಾರೆ. ಆರೋಪಿಯ ಹಿನ್ನೆಲೆಯಲ್ಲಿ ಇತರ ಯಾವ ಪ್ರಕರಣಗಳ ಸಂಬಂಧವಿದೆ ಎಂಬುದನ್ನು ಗಂಭೀರವಾಗಿ ಪರಿಗಣಿಸಲಾಗುತ್ತಿದೆ. ಈ ಸಂಬಂಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a Reply