ಉಡುಪಿ, ಜುಲೈ 1, 2025: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷರಾದ ಆಸಿಫ್ ಕೋಟೇಶ್ವರ ರವರ ನೇತೃತ್ವದಲ್ಲಿ ಜಿಲ್ಲಾ ನಿಯೋಗ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ರವರನ್ನು ಭೇಟಿಯಾಗಿ ಕುಂಜಾಲು ಪ್ರಕರಣವನ್ನು ಕಟ್ಟುನಿಟ್ಟಾಗಿ ನಿಭಾಯಿಸಿ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿದಕ್ಕೆ ಅಭಿನಂದನೆ ಸಲ್ಲಿಸಿತು.
ಮೊನ್ನೆ ಕುಂಜಾಲುವಿನಲ್ಲಿ ದನದ ಕಳೇಬರ ಪತ್ತೆಯಾದ ಸಂದರ್ಭ ಪರಿಸರದಲ್ಲಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು ಹಾಗೂ ಕೆಲವು ಕಿಡಿಗೇಡಿಗಳು ಇದನ್ನು ನೆಪವಾಗಿಟ್ಟುಕೊಂಡು ಶಾಂತಿಯನ್ನು ಕದಡುವ ಪ್ರಯತ್ನವನ್ನೂ ಮಾಡಿದ್ದರು.
ಈ ಬಗ್ಗೆ ಮಸೀದಿ ಕಮಿಟಿಯವರು ಪೊಲೀಸ್ ಠಾಣೆಗೆ ಬೇಟಿ ನೀಡಿ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಮನವಿ ಮಾಡಿದಾಗ ಸರಿಯಾಗಿ ಸ್ಪಂದಿಸಿದ ಪೊಲೀಸರು ಸೂಕ್ತ ಕ್ರಮ ಕೈಗೊಂಡು 4 ತಂಡಗಳನ್ನು ರಚಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರ ಈ ತ್ವರಿತ ಕ್ರಮಕ್ಕೆ ಎಸ್ ಡಿ ಪಿ ಐ ಜಿಲ್ಲಾ ಸಮಿತಿ ಅಭಿನಂದನೆ ಸಲ್ಲಿಸಿತು.

ಈ ಸಂದರ್ಭದಲ್ಲಿ ಜಿಲ್ಲೆಗೆ ಸಂಬಂಧಿಸಿದ ಇತರ ವಿಷಯಗಳ ಬಗ್ಗೆಯೂ ಚರ್ಚೆ ನಡೆಸಲಾಯಿತು.
ನಿಯೋಗದಲ್ಲಿ ಎಸ್ ಡಿ ಪಿ ಐ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಂಶುದ್ದೀನ್ ಹಾಗೂ ರಝಾಕ್ ವೈ ಎಸ್, ಜಿಲ್ಲಾ ಉಪಾಧ್ಯಕ್ಷರಾದ ನಝೀರ್ ಅಹ್ಮದ್, ಜಿಲ್ಲಾ ಸಮಿತಿ ಸದಸ್ಯರಾದ ಮಹಮ್ಮದ್ ಹನೀಫ್ ಹಾಗೂ ಸುಹೇಲ್ ಕಂಡ್ಲೂರ್ ಮತ್ತು ಉಡುಪಿ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ರಹೀಂ ಅದಿಉಡುಪಿ ಉಪಸ್ಥಿತರಿದ್ದರು.
Leave a Reply