ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

ಉಡುಪಿ, ಜುಲೈ 8, 2025: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ, ಬ್ರಹ್ಮಾವರ ಮತ್ತು ಕಾಪು ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ  ಹಾಗೂ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಸಂಬಂಧಪಟ್ಟ ಶಾಲಾ ಮುಖ್ಯೋಪಾಧ್ಯಾಯರುಗಳು ವಿದ್ಯಾರ್ಥಿಗಳ ದಾಖಲೆಗಳೊಂದಿಗೆ ನೇರವಾಗಿ ಇಲಾಖೆಯ ವೆಬ್‌ಸೈಟ್ http://ssp.postmatric.karnataka.gov.in ಅಥವಾ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ಪ್ರತಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ವಿದ್ಯಾರ್ಥಿಯ ಆಧಾರ್ ಸಂಖ್ಯೆ ಎನ್.ಪಿ.ಸಿ.ಐ ಸೀಡಿಂಗ್ ಮಾಡುವುದು ಕಡ್ಡಾಯವಾಗಿರುತ್ತದೆ. ಪರಿಶಿಷ್ಟ ಪಂಗಡದ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳು ಎನ್.ಎಸ್.ಪಿ ಓ.ಟಿ.ಆರ್ ರಿಜಿಸ್ಟ್ರೇಷನ್ ಮಾಡುವುದು ಕಡ್ಡಾಯವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2528884, ಮೊ.ನಂ: 9480843209 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Comments

Leave a Reply

Your email address will not be published. Required fields are marked *