ಉಡುಪಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ “ಪತ್ರಕರ್ತರಿಗೆ ಕನ್ನಡ ಸಾಹಿತ್ಯ” ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು ಆಗಸ್ಟ್ 3ನೇ ವಾರ ಅಥವಾ ಕೊನೆಯ ವಾರದಲ್ಲಿ ನಡೆಸಲು ಉದ್ದೇಶಿಸಿದ್ದು, 20 ರಿಂದ 40 ವರ್ಷ ದೊಳಗಿನ, ಈಗಾಗಲೇ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವವರು, ಪತ್ರಿಕೋದ್ಯಮ ಪದವಿ ಪಡೆದವರು ಹಾಗೂ ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಹುದಾಗಿದೆ.
ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್ಸೈಟ್ https://sahithyaacademy.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Reply