ಬೈಂದೂರು ಪೊಲೀಸ್ ಠಾಣೆಗೆ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಭೇಟಿ

ಉಡುಪಿ, ಜುಲೈ 10, 2025: ಇಂದು ಪಶ್ಚಿಮ ವಲಯ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿಪಿ) ಅಮಿತ್ ಸಿಂಗ್ ಐಪಿಎಸ್ ರವರು ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣೆಯ ಪರಿಶೀಲನೆ ನಡೆಸಿದರು.

ಠಾಣೆಯ ಕಡತಗಳನ್ನು ವಿವರವಾಗಿ ಪರಿಶೀಲಿಸಿ, ಸಿಬ್ಬಂದಿಗಳಿಗೆ ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಮತ್ತು ಇತರ ಅಧಿಕಾರಿ-ಸಿಬ್ಬಂದಿಗಳು ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *