ಬೆಂಗಳೂರು, ಜುಲೈ 13, 2025: ಆರ್‌ಸಿಬಿ ಗೆಲುವಿನ ವಿಜಯೋತ್ಸವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತದ ಬಗ್ಗೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ.ಕುನ್ಹಾ ನೇತೃತ್ವದ ಆಯೋಗ ಸಲ್ಲಿಸಿರುವ ವರದಿಯಲ್ಲಿ ಪೊಲೀಸರ ಗಂಭೀರ ಲೋಪಗಳನ್ನು ಎತ್ತಿ ಹಿಡಿಯಲಾಗಿದೆ.
ಎರಡು ಸಂಪುಟಗಳನ್ನು ಒಳಗೊಂಡಿರುವ ಈ ವರದಿಯಲ್ಲಿ, ಕಾಲ್ತುಳಿತಕ್ಕೆ ಕೆಎಸ್‌ಸಿಎ, ಡಿಎನ್‌ಎ, ಆರ್‌ಸಿಬಿ ಮತ್ತು ಪೊಲೀಸರನ್ನು ನೇರವಾಗಿ ಹೊಣೆ ಮಾಡಲಾಗಿದೆ. ವರದಿಯ ಪ್ರಕಾರ, ಘಟನೆಯ ದಿನ ಮಧ್ಯಾಹ್ನ 3:25ಕ್ಕೆ ಕಾಲ್ತುಳಿತ ಸಂಭವಿಸಿದರೂ, ಪೊಲೀಸ್ ಕಮಿಷನರ್‌ಗೆ ಮಾಹಿತಿ 5:30ರವರೆಗೆ ತಲುಪದೆ ಇತ್ತ. ಜಂಟಿ ಪೊಲೀಸ್ ಆಯುಕ್ತರು ಕ್ರೀಡಾಂಗಣಕ್ಕೆ 4 ಗಂಟೆಗೆ ಆಗಮಿಸಿದ್ದರು ಎಂದು ತಿಳಿದುಬಂದಿದೆ.
ಕಾರ್ಯಕ್ರಮ ನಡೆಸುವುದು ಅಸಾಧ್ಯ ಎಂಬುದು ಗೊತ್ತಿದ್ದರೂ ಎಲ್ಲರೂ ಒಗ್ಗೂಡಿ ಕಾರ್ಯಕ್ರಮ ಆಯೋಜಿಸಿದ್ದರು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬಂದೋಬಸ್ತ ವ್ಯವಸ್ಥೆ ಸಮರ್ಪಕವಾಗಿರಲಿಲ್ಲ. ಕ್ರೀಡಾಂಗಣದ ಒಳಗೆ ಕೇವಲ 79 ಪೊಲೀಸರಿದ್ದರೆ, ಹೊರಗೆ ಯಾವುದೇ ಪೊಲೀಸ್ ಸಿಬ್ಬಂದಿ ಇರಲಿಲ್ಲ. ಆಂಬುಲೆನ್ಸ್ ಸೌಲಭ್ಯವೂ ಇರಲಿಲ್ಲ. ಈ ಎಲ್ಲಾ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯದ ಪರಮಾವಧಿ ಗಮನಾರ್ಹವಾಗಿದೆ ಎಂದು ವರದಿಯಲ್ಲಿ ಉಲ್ಲೇಖವಾಗಿದ್ದು, ಈ ಬಗ್ಗೆ ಮೂಲಗಳು ತಿಳಿಸಿವೆ.
Leave a Reply