ಗಂಗೊಳ್ಳಿ, ಜುಲೈ 13, 2025: ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ‘ಮನೆ ಮನೆಗೆ ಪೊಲೀಸ್-2025’ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ಕಾರ್ಯಕ್ರಮ ಆರಂಭದ ಬಳಿಕ ಸೈಬರ್ ಅಪರಾಧದ ಸ್ವರೂಪ, NCRP ಪೋರ್ಟಲ್, 1930 ಮತ್ತು 112 ಸಹಾಯವಾಣಿಗಳು, NDPS ಕಾಯ್ದೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.

ಈ ವಿನೂತನ ಯೋಜನೆಯಡಿ, ಪೊಲೀಸ್ ಸಿಬ್ಬಂದಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಮತ್ತು ದೂರುಗಳನ್ನು ಸ್ವೀಕರಿಸಲು ಮನೆ ಬಾಗಿಲಿಗೆ ತೆರಳುತ್ತಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಈ ಕಾರ್ಯಕ್ರಮ ಶುಕ್ರವಾರ ಆರಂಭಗೊಂಡಿದ್ದು, ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಪೊಲೀಸ್ ಸೇವೆ ಎಲ್ಲ ಮನೆಗಳಿಗೂ ತಲುಪಬೇಕು. ಈ ಕಾರ್ಯಕ್ರಮ ಯಶಸ್ವಿಯಾಗಲಿ,” ಎಂದು ಶುಭ ಕೋರಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಸುಧಾಕರ್ ಎಸ್. ನಾಯ್ಕ, ಪರಮೇಶ್ವರ ಹೆಗಡೆ, ಡಿವೈಎಸ್‌ಪಿ ಪ್ರಭು ಡಿ. ಟಿ., ಪಿಎಸ್ಐಗಳಾದ ಭರತೇಶ್, ನಾರಾಯಣ, ಪ್ರಕಾಶ್ ಸಾಲಿಯಾನ್, ಹುಸೇನ್ ಸಾಬ್ ಮತ್ತು ಇತರ ಸಿಬ್ಬಂದಿ ಭಾಗವಹಿಸಿದ್ದರು. ಉಡುಪಿ ನಗರ, ಮಣಿಪಾಲ, ಬ್ರಹ್ಮಾವರ ಮತ್ತು ಕೋಟ ಠಾಣೆಗಳಲ್ಲಿ ಈ ಕಾರ್ಯಕ್ರಮ ಆರಂಭಗೊಂಡಿದ್ದು, ‘ಮನೆಮನೆ ಪೊಲೀಸ್’ ಅಭಿಯಾನ ಜಾರಿಗೆ ತಂದಿದೆ.


ಪೊಲೀಸ್ ಉಪ ನೀರಿಕ್ಷಕರು (ತನಿಖೆ ) ಹಾಗೂ ಕುಂದಾಪುರ ಪೊಲೀಸ್ ಠಾಣಾ ಅಧಿಕಾರಿ ಸಿಬ್ಬಂದಿಗಳು ಹಾಗೂ ಠಾಣಾ ವ್ಯಾಪ್ತಿಯ ಸಾರ್ವಜನಿಕರು ಉಪಸ್ಥಿತರಿದ್ದರು
ಈ ಅಭಿಯಾನದಡಿ ಸೈಬರ್ ಅಪರಾಧ, ಮಾದಕ ವಸ್ತು, ಬಾಲಾಪರಾಧ, POCSO ಕಾಯ್ದೆ, ಮನೆಯಿಂದ ಕಳ್ಳತನ, ಸರ ಕಳ್ಳತನ, ರಸ್ತೆ ಸಂಚಾರ ನಿಯಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ. ಮನೆಯಲ್ಲಿರುವವರ ಹೆಸರು, ಮೊಬೈಲ್ ಸಂಖ್ಯೆಯನ್ನು ದಾಖಲಿಸಲಾಗಿದ್ದು, ಸಾರ್ವಜನಿಕರ ದೂರು ಮತ್ತು ಕೋರಿಕೆಗಳನ್ನು ಸ್ವೀಕರಿಸಲಾಗಿದೆ. ಈಗಾಗಲೇ ಉಡುಪಿ ನಗರ ಠಾಣೆಯ 28, ಮಣಿಪಾಲ ಠಾಣೆಯ 45, ಬ್ರಹ್ಮಾವರ ಠಾಣೆಯ 30 ಮತ್ತು ಕೋಟ ಠಾಣೆಯ 25 ಮನೆಗಳಿಗೆ ಭೇಟಿ ನೀಡಲಾಗಿದೆ.

ಈ ಅರಿವು ಕಾರ್ಯಕ್ರಮವನ್ನು ಜಾರಿಗೆ ತರುವುದಕ್ಕಾಗಿ ಠಾಣೆಯಿಂದ ರಚಿಸಲಾದ ತಂಡದಲ್ಲಿ ಪಿಐ/ಪಿಎಸ್ಐ, ಎಎಸ್ಐ, ಮಹಿಳಾ ಮತ್ತು ಪುರುಷ ಸಿಬ್ಬಂದಿಗಳು ಒಳಗೊಂಡಿದ್ದಾರೆ.
Leave a Reply