ಕುಮಟಾ, ಜುಲೈ 15, 2025: ತಾಲೂಕಿನ ಅಳ್ವಿಕೋಡಿ ಸಮೀಪ ಮಂಗಳವಾರ ನಸುಕಿನಲ್ಲಿ ಸಂಭವಿಸಿದ ಅಪಘಾತದಲ್ಲಿ, ಪಿಕಪ್ ವಾಹನ ಮತ್ತು KSRTC ಬಸ್ ಸಂಪೂರ್ಣ ಜಖಂಗೊಂಡ ಘಟನೆ ನಡೆದಿದೆ.
ಹೊನ್ನಾವರದಿಂದ ಕುಮಟಾ ಕಡೆಗೆ ಸಾಗುತ್ತಿದ್ದ ಪಿಕಪ್ ವಾಹನ, ಎದುರಿನಿಂದ ಬರುವ ಬಸ್‌ಗೆ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಪರಿಣಾಮ ವಾಹನ ಸಂಪೂರ್ಣ ಜಖಂ ಗೊಂಡಿದೆ.
ಅಪಘಾತದಲ್ಲಿ ಬಸ್ ಚಾಲಕ ಶಾಂತಾ ಗೌಡ ಹೊನ್ನೂರು ಇತನಿಗೆ ತಲೆ ಮತ್ತು ಕಾಲಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು ,ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗಲಿಲ್ಲ. ಘಟನೆ ನಡೆದ ಸ್ಥಳಕ್ಕೆ ಕುಮಟಾ ಪೊಲೀಸರು ಭೇಟಿ ನೀಡಿ ಸುರಕ್ಷಿತ ರಸ್ತೆ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದರು.ಈ ಕುರಿತು ಕುಮಟಾ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a Reply