ಉಡುಪಿ, ಮೇ 07, 2025: ಉಡುಪಿ ತಾಲೂಕಿನ ನೇಜಾರು ತೃಪ್ತಿ ಲೇಔಟ್‌ನ ಪೆಟ್ರೋಲ್ ಪಂಪ್ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿರುವ ಶಂಕೆಯ ಮೇಲೆ ಮಹಮ್ಮದ್ ಸಾಲಿಕ್ (19) ಎಂಬ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ, ಗಾಂಜಾ ಸೇವನೆಯ ದೃಢೀಕರಣವಾಗಿದೆ ಎಂದು ವೈದ್ಯಕೀಯ ವರದಿ ತಿಳಿಸಿದೆ.
ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 16/2025ರ ಅಡಿಯಲ್ಲಿ ಕಲಂ 27(b) NDPS ಕಾಯ್ದೆಯಂತೆ ಪ್ರಕರಣ ದಾಖಲಿಸಲಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ.
Leave a Reply