ಉಡುಪಿ, ಜೂನ್ 01, 2025: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ “ವಿಶ್ವ ಬೈಸಿಕಲ್ ದಿನಾಚರಣೆ”ಯನ್ನು ಆಚರಿಸಲು ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಜೋಡುಕಟ್ಟೆಯಿಂದ ಬ್ರಹ್ಮಗಿರಿ, ಕರಾವಳಿ ಮಾರ್ಗವಾಗಿ ಕೋಟೆವರೆಗೆ ಸೈಕಲ್ ಜಾಥವನ್ನು ಹಮ್ಮಿಕೊಂಡಿದ್ದಾರೆ. ಈ ಕಾರ್ಯಕ್ರಮವು ಆರೋಗ್ಯ, ಫಿಟ್‌ನೆಸ್ ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ.

ಕಾರವಾರ, ಜೂನ್ 01, 2025: ಉತ್ತರ ಕನ್ನಡ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಖೇಲೋ ಇಂಡಿಯಾ ಯೋಜನೆಯ “ಫಿಟ್ ಇಂಡಿಯಾ” ಉಪಕ್ರಮದ ಅಡಿಯಲ್ಲಿ, ಸಿಟಿ ಬೈಸಿಕಲ್ ಕ್ಲಬ್ ಕಾರವಾರದ ಸಹಕಾರದೊಂದಿಗೆ “ವಿಶ್ವ ಬೈಸಿಕಲ್ ದಿನ”ವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ದಿನಾಂಕ 01-06-2025 ರಂದು ಬೈಸಿಕಲ್ ಅಭಿಯಾನವನ್ನು ಆಯೋಜಿಸುವ ಮೂಲಕ ಈ ದಿನವನ್ನು ವಿಶೇಷವಾಗಿ ಗುರುತಿಸಲಾಯಿತು. ಈ ಕಾರ್ಯಕ್ರಮವು ದೈಹಿಕ ಆರೋಗ್ಯವನ್ನು ಉತ್ತೇಜಿಸುವ ಜೊತೆಗೆ ಸೈಕಲ್ ಬಳಕೆಯ ಮಹತ್ವವನ್ನು ಜನರಿಗೆ ತಿಳಿಸುವ ಉದ್ದೇಶವನ್ನು ಹೊಂದಿತ್ತು.
Leave a Reply