ಪುತ್ತೂರು, ಜೂ.02,2025: ಪುತ್ತೂರಿನ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ಕಂದಾಯ ಇಲಾಖೆ ಸಹಾಯಕ ಆಯುಕ್ತರು ಜೂ. 6 ರಂದು ವಿಚಾರಣೆಯನ್ನು ನಿಗದಿ ಮಾಡಿದ್ದಾರೆ. ಅಲ್ಲದೇ ಈ ವಿಚಾರಣೆಗೆ ಅರುಣ್ ಕುಮಾರ್ ಪುತ್ತಿಲ ಅವರು ತಪ್ಪದೇ ಹಾಜರಾಗಲು ಸೂಚನೆ ನೀಡಲಾಗಿದೆ.
ಸ್ವತಃ ಅಥವಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಒಂದು ವೇಳೆ ಅರುಣ್ ಕುಮಾರ್ ಪುತ್ತಿಲ ಅವರು ವಿಚಾರಣೆಗೆ ಹಾಜರಾಗದಿದ್ದರೆ ಈ ಪ್ರಕರಣದಲ್ಲಿ ಅವರಿಗೆ ಆಸಕ್ತಿ ಇಲ್ಲವೆಂದು ಭಾವಿಸಿ, ಲಭ್ಯವಿರರುವ ಮಾಹಿತಿಯ ಆಧಾರದಲ್ಲಿ ಏಕಪಕ್ರಿಯವಾಗಿ ತೀರ್ಮಾನ ಮಾಡಲಾಗುವುದು ಎಂದು ಕಂದಾಯ ಇಲಾಖೆಯ ಸಹಾಯಕ ಆಯುಕ್ತರು ತಿಳಿಸಿದ್ದಾರೆ.
Leave a Reply