ಬೆಂಗಳೂರು, ಜೂ.11: ಯುವ ಬ್ರಿಗೇಡ್‌ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.
2022ರಿಂದ 2025ರ ಮೇ 31ರ ವರೆಗೆ ದಾಖಲಾಗಿರುವ ಪ್ರಕರಣಗಳ ಮಾಹಿತಿ ಹಾಗೂ ಎಫ್‌ಐಆರ್ ಪ್ರತಿಗಳನ್ನು ಎಸ್.ಪಿ, ಪೊಲೀಸ್ ಪ್ರಧಾನ ಕಚೇರಿ, ಬೆಂಗಳೂರು-ಇಲ್ಲಿಗೆ ಕಳುಹಿಸುವಂತೆ ಆದೇಶಿಸಲಾಗಿದೆ.

ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರು ಬರೆದ ಪತ್ರದ ಮೇರೆಗೆ ಎಫ್‌ಐಆರ್ ಪ್ರತಿ, ತೆಗೆದುಕೊಂಡ ಕ್ರಮಗಳು ಹಾಗೂ ಪ್ರಸ್ತುತ ಹಂತದ ಮಾಹಿತಿ ಒದಗಿಸುವಂತೆ ಎಲ್ಲ ಪೊಲೀಸ್ ಕಮಿಷನರ್‌ಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಆದೇಶದಲ್ಲಿ ಸೂಚಿಸಲಾಗಿದೆ.
Leave a Reply