ಉಡುಪಿ, ಜೂ.12: ಭಾರೀ ಮಳೆಯ ಹಿನ್ನೆಲೆಯಲ್ಲಿ ಜೂ.13 (ನಾಳೆ) ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.

ರಾಜ್ಯದಲ್ಲಿ ಕೆಲವು ದಿನಗಳ ವಿರಾಮದ ಬಳಿಕ ಮುಂಗಾರು ಮತ್ತೆ ವೇಗ ಪಡೆದುಕೊಂಡಿದ್ದು, ಜೂನ್ 16 ರವರೆಗೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
Leave a Reply