ಉಡುಪಿ,ಜೂ.16: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 17ರಂದು ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ, ಪಿಯುಸಿ ಹಾಗೂ ಐಟಿಐ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಅವರು ರಜೆ ಘೋಷಿಸಿ ಆದೇಶಿಸಿದ್ದಾರೆ.
ಉಳಿದಂತೆ ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಆದರೆ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ ಮತ್ತು ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಕಳೆದ ಆರು ದಿನಗಳಿಂದ ರೆಡ್ ಅಲರ್ಟ್ ಇದ್ದುದರಿಂದ ಗುರುವಾರ ಹಾಗೂ ಶುಕ್ರವಾರ ಶಾಲೆಗಳಿಗೆ ರಜೆ ನೀಡಲಾಗಿತ್ತು. ಶನಿವಾರ ಮಳೆ ಕಡಿಮೆಯಿದ್ದುದರಿಂದ ಎಂದಿನಂತೆ ತರಗತಿಗಳು ನಡೆದಿದ್ದವು. ಸೋಮವಾರ ಆರೆಂಜ್ ಅಲರ್ಟ್ ಇದ್ದುದರಿಂದ ಜಿಲ್ಲಾಡಳಿತ ನೇರವಾಗಿ ರಜೆ ಘೋಷಿಸದೇ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ರಜೆ ಘೋಷಿಸುವ ನಿರ್ಧಾರವನ್ನು ಶಾಲಾಡಳಿತಕ್ಕೆ ಬಿಟ್ಟಿದ್ದು, ಕೆಲವು ಶಾಲೆಗಳು ಅದಾಗಲೇ ರಜೆಯನ್ನೂ ಘೋಷಿಸಿಕೊಂಡಿದ್ದವು. ಆದರೆ ಅಂತಿಮವಾಗಿ ಜಿಲ್ಲಾಡಳಿತವೇ ರಜೆ ನೀಡಿತ್ತು. ಮಂಗಳವಾರವೂ ಅಧಿಕ ಮಳೆ ಮುನ್ಸೂಚನೆ ಇರುವುದರಿಂದ ರಜೆ ಘೋಷಿಸಲಾಗಿದೆ.
Leave a Reply