ಇರಾನ್ ಮತ್ತು ಇಸ್ರೇಲ್‌ನಲ್ಲಿರುವವರ ಮಾಹಿತಿ ನೀಡಿ: ಗಂಗೊಳ್ಳಿ ಪೊಲೀಸ್ ಠಾಣೆ

ಗಂಗೊಳ್ಳಿ, ಜೂನ್ 18, 2025: ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ, ಗಂಗೊಳ್ಳಿ ಗ್ರಾಮದ ನಿವಾಸಿಗಳಿಗೆ ಗಂಗೊಳ್ಳಿ ಪೊಲೀಸ್ ಠಾಣೆಯಿಂದ ಮಹತ್ವದ ಮನವಿಯೊಂದನ್ನು ಮಾಡಲಾಗಿದೆ.

ಗಂಗೊಳ್ಳಿ ಗ್ರಾಮದ ಯಾವುದೇ ವ್ಯಕ್ತಿಗಳು ಕೆಲಸದ ನಿಮಿತ್ತ ಇರಾನ್ ಅಥವಾ ಇಸ್ರೇಲ್ ದೇಶಗಳಲ್ಲಿ ವಾಸವಾಗಿದ್ದರೆ, ಅವರ ವಿವರಗಳನ್ನು ತಕ್ಷಣವೇ ಗಂಗೊಳ್ಳಿ ಪೊಲೀಸ್ ಠಾಣೆಗೆ ತಿಳಿಸಲು ಕೋರಲಾಗಿದೆ. ಈ ಮಾಹಿತಿಯನ್ನು ಗಂಗೊಳ್ಳಿ ಪೊಲೀಸ್ ಠಾಣೆಗೆ ನೇರವಾಗಿ ನೀಡಬಹುದು ಅಥವಾ 8123509214 ಈ ದೂರವಾಣಿ ಸಂಖ್ಯೆಗೆ ಸಂಪರ್ಕಿಸಿ ಒದಗಿಸಬಹುದು.

ಸಾರ್ವಜನಿಕರು ಈ ವಿಷಯದಲ್ಲಿ ಸಹಕಾರ ನೀಡುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.

Comments

Leave a Reply

Your email address will not be published. Required fields are marked *