ಬೆಂಗಳೂರು: ರೀಲ್ಸ್ ಮಾಡುವಾಗ ನಿರ್ಮಾಣ ಹಂತದ ಕಟ್ಟಡದ 14ನೇ ಮಹಡಿಯಿಂದ ಕಾಲು ಜಾರಿ ಬಿದ್ದು ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.
ಆಂಧ್ರದ ಬೋಯಲ ಚಿತ್ತೂರು ಮೂಲದ ನಂದಿನಿ(21) ಕಾಲು ಜಾರಿ ಬಿದ್ದು ಮೃತಪಟ್ಟ ಯುವತಿ.
ಬೆಂಗಳೂರು ನಗರದ ಭುವನೇಶ್ವರಿ ಲೇಔಟ್ ನ ಪಿಜಿಯೊಂದರಲ್ಲಿ ವಾಸಿಸುತ್ತಿದ್ದ ಯುವತಿ ರಿಲಯನ್ಸ್ ಮಾರ್ಟ್ ನಲ್ಲಿ ಕೆಲಸ ಮಾಡುತ್ತಿದ್ದಳು. ಕೆಲಸ ಮುಗಿಸಿ ಸಂಜೆ ಪಿಜಿಗೆ ಬಂದ ಯುವತಿ ತನ್ನ ಸ್ನೇಹಿತೆ ಹಾಗೂ ಇಬ್ಬರು ಸ್ನೇಹಿತರ ಜೊತೆ ಪಾರ್ಟಿ ಮಾಡಲು ರಾಯಸಂದ್ರ ಮುಖ್ಯರಸ್ತೆ ಸಮೀಪವಿರುವ ನಿರ್ಮಾಣ ಹಂತದಲ್ಲಿಯೇ ಇರುವ ಅಪಾರ್ಟ್‌ಮೆಂಟ್‌ವೊಂದಕ್ಕೆ ಹೋಗಿದ್ದರು. ಈ ವೇಳೆ ನಾಲ್ವರು ಸ್ನೇಹಿತಯರು ಜೊತೆಗೂಡಿ ರಾತ್ರಿ 9 ಗಂಟೆಯವರಿಗೆ ಮದ್ಯ ಪಾರ್ಟಿ ಮಾಡಿದ್ದಾರೆ. ಪಾರ್ಟಿ ಮುಗಿದ ಬಳಿಕ ರೀಲ್ಸ್ ಮಾಡಲು ನಿರ್ಮಾಣ ಹಂತದ 14ನೇ ಮಹಡಿಗೆ ತೆರಳಿ ರೀಲ್ಸ್ ಮಾಡುತ್ತಿದ್ದಳು. ಈ ವೇಳೆ ಕಾಲುಜಾರಿ ಕೆಳಗೆ ಬಿದ್ದು ಯುವತಿ ಮೃತಪಟ್ಟಿದ್ದಾಳೆ.
ಇನ್ನು, ಪುತ್ರಿಯ ಸಾವಿನ ವಿಚಾರ ತಿಳಿದು ಬೆಂಗಳೂರಿಗೆ ಬಂದ ಪೋಷಕರು, ತನ್ನ ಮಗಳ ಜೊತೆಗಿದ್ದ ಇಬ್ಬರು ಯುವಕರು ಹಾಗೂ ಆಕೆಯ ಸ್ನೇಹಿತೆಯನ್ನು ವಿಚಾರಣೆ ನಡೆಸುವಂತೆ ದೂರು ನೀಡಿದ್ದಾರೆ.
ಇನ್ನು, ಈ ಬಗ್ಗೆ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Leave a Reply