ಕುಂಜಾಲು ದನದ ಕಳೇಬರವನ್ನು ರಸ್ತೆಯಲ್ಲಿ ಎಸೆದ ಪ್ರಕರಣ: ಕೂಲಂಕಷ ತನಿಖೆಗೆ ಎಸ್ ಡಿ ಪಿ ಐ ಆಗ್ರಹ

ಉಡುಪಿ: ಜಿಲ್ಲೆಯ ಕುಂಜಾಲು ಎಂಬ ಪ್ರದೇಶದಲ್ಲಿ ದನದ ಕಳೇಬರಗಳನ್ನು ರಸ್ತೆಯಲ್ಲಿ ಹಾಕಿ ವಿಕೃತಿ ಮೆರೆದಿರುವ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. 

ಪರಸ್ಪರ ಸೌಹಾರ್ದತೆ ಹಾಗೂ ಸಹಬಾಳ್ವೆಯಿಂದ ಬದುಕುತ್ತಿರುವ ಕುಂಜಾಲು ಪರಿಸರದ ಜನರ ಮನಸ್ಸಿನಲ್ಲಿ ಕೋಮು ವಿಷವನ್ನು ಬಿತ್ತಿ ಆ ಮೂಲಕ ತಮ್ಮ ರಾಜಕೀಯ ಬಳೆ ಬೇಯಿಸಲು ಈ ರೀತಿಯ ಕೃತ್ಯಗಳನ್ನು ಮಾಡಿರುವ ಶಂಕೆಯಿದೆ. ಇದಕ್ಕಿಂತ ಮುಂಚೆಯೂ ಸಹ ಈ ಪರಿಸರದಲ್ಲಿ ಇಂತಹದೇ ಪ್ರಯತ್ನವನ್ನು ಕಿಡಿಗೇಡಿಗಳು ಮಾಡಿದ್ದರು. 

ಅಲ್ಲದೆ ದನದ ವಿಷಯದಲ್ಲಿ ರಾಜಕೀಯವನ್ನು ಮಾಡಿ ಪಕ್ಷವೊಂದು ಜಿಲ್ಲೆಯಲ್ಲಿ ತನ್ನ ರಾಜಕೀಯ ನೆಲೆಯನ್ನು ಗಟ್ಟಿಗೊಳಿಸಿತ್ತು. ಆದ್ದರಿಂದ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೂಲಂಕುಷ ತನಿಖೆ ನಡೆಸಿ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಬೇಕು ಹಾಗೂ ಇದರ ಹಿಂದೆ ಇರುವ ಷಡ್ಯಂತರವನ್ನು ಬಯಲಿಗೆಲೆಯಬೇಕು ಎಂದು ಎಚ್ ಡಿ ಪಿ ಐ ಉಡುಪಿ ಜಿಲ್ಲಾಧ್ಯಕ್ಷರಾದ ಆಸಿಫ್ ಕೋಟೇಶ್ವರ ರವರು ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ

Comments

Leave a Reply

Your email address will not be published. Required fields are marked *