ಬೈಂದೂರು, ಜುಲೈ 14, 2025: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ‘ಶಕ್ತಿ’ ಯೋಜನೆಯಡಿ 500 ಕೋಟಿ ಉಚಿತ ಪ್ರಯಾಣದ ಸಫಲತೆಯನ್ನು ಸಿಹಿ ಹಂಚುವ ಮೂಲಕ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಬೈಂದೂರು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ವತಿಯಿಂದ ಆಯೋಜಿಸಲಾಯಿತು, ಇದರಲ್ಲಿ ಬಸ್ ಚಾಲಕ ಮತ್ತು ನಿರ್ವಾಹಕರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬೈಂದೂರು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ, ಗ್ಯಾರಂಟಿ ಸಮಿತಿ ಸದಸ್ಯರು, ಬ್ಲಾಕ್ ಅಧ್ಯಕ್ಷರು, ವಿವಿಧ ಘಟಕಗಳ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.




Leave a Reply