ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಜುಲೈ 19ರವರೆಗೆ ವ್ಯಾಪಕ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಜುಲೈ 19ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಜು.19ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 19ರವರೆಗೆ ಹಲವು ಕಡೆ ಹೆಚ್ಚಿನ ಮಳೆಯಾಗುವ ಸಾದ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜುಲೈ 14,15ರಂದು ಯೆಲ್ಲೋ ಅಲರ್ಟ್ ಹಾಗೂ ಜುಲೈ 16 ರಿಂದ 19ರವರೆಗೆ ಆರೆಂಜ್ ಅಲರ್ಟ್ ಘೋಷನೆ ಮಾಡಲಾಗಿದೆ. ಉತ್ತರ ಕನ್ನಡದ ಮಂಕಿ 7, ಶಿವಮೊಗ್ಗದ ಆಗುಂಬೆಯಲ್ಲಿ 5, ಕೊಪ್ಪಳದ ಮುನಿರಾಬಾದ್ ನಲ್ಲಿ 3 ಸೆಂ.ಮೀ ಮಳೆಯಾಗಿದೆ.
Leave a Reply