Author: NewsDesk

  • ಕೋಮುದ್ವೇಷ ಭಾಷಣ ಆರೋಪ – ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

    ಮಂಗಳೂರು: ಮುಸ್ಲಿಂ ಧರ್ಮದವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಭಾಷಣ ಆರೋಪದಡಿ ಬೆಳ್ತಂಗಡಿ ವಿಧಾನಸಭಾ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

    ಶನಿವಾರ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ತೆಕ್ಕಾರು ನಿವಾಸಿ ಇಬ್ರಾಹಿಂ.ಎಸ್.ಬಿ ದೂರು ದಾಖಲಿಸಿದ್ದಾರೆ.

  • ಭಟ್ಕಳ: ನಿದ್ರೆ ಮಾತ್ರೆ ಕೊಟ್ಟು ಗಂಡನಿಗೆ ಚಟ್ಟ ಕಟ್ಟಿದ ಹೆಂಡ್ತಿಗೆ ಜೀವಾವಧಿ ಶಿಕ್ಷೆ

    ಭಟ್ಕಳ: ಗಂಡ 2ನೇ ಮದುವೆಯಾದ ಎಂಬ ಕಾರಣಕ್ಕೆ ಆತನನ್ನು ಕೊಲೆ ಮಾಡಿದ ಪತ್ನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

    ಭಟ್ಕಳದ ರೇಷ್ಮಾ ಖಾನಮ್ ಶಿಕ್ಷೆಗೊಳಗಾದ ಅಪರಾಧಿ ಭಟ್ಕಳ ಮೌಲಾನಾ ಆಜಾದ್ ರಸ್ತೆಯ ಅಬ್ದುಲ್ ನಾಸಿರ್ ಕೊಲೆಯಾದ ಪತಿ. 2017ರ ಫೆ.17 ರಂದು ಘಟನೆ ನಡೆದಿತ್ತು. ಪತಿಗೆ ನಿದ್ರೆ ಮಾತ್ರೆ ಕೊಟ್ಟು ಮಲಗಿಸಿದ ಪತ್ನಿ ನಂತರ ವೇಲ್‌ನಿಂದ ಆತನ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಳು. ನಂತರ ಮಲಗಿದಲ್ಲೇ ಆತ ಮೃತಪಟ್ಟಿದ್ದಾನೆ ಎಂದು ನಾಟಕವಾಡಿದ್ದಳು.

    ಕೊಲೆ ಮಾಡಲು ಬಳಸಿ ವೇಲನ್ನು ವಾಷಿಂಗ್ ಮಷಿನ್‌ಗೆ ಹಾಕಿ ತೊಳೆದು, ಸಾಕ್ಷ್ಯವನ್ನು ನಾಶಪಡಿಸಿದ್ದಳು. ಆದರೆ, ಆಕೆಯ ವರ್ತನೆಯಿಂದ ಅನುಮಾನಗೊಂಡಿದ್ದ ಮೃತರ ಸಹೋದರನ ಪುತ್ರ ಭಟ್ಕಳ ಶಹರ ಪೊಲೀಸ್ ಠಾಣೆಗೆ ದೂರು ನೀಡಿದ್ದನು. ತನಿಖೆ ನಡೆಸಿದ ಶಹರ ಠಾಣೆ ಪೊಲೀಸರು ರೇಷ್ಮಾಳನ್ನು ಬಂಧಿಸಿ ವಿಚಾರಣೆ ನಡೆಸಿ, ಸಾಕ್ಷ್ಯಗಳನ್ನು ಕಲೆ ಹಾಕಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

    ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯಶ ಡಿ.ಎಸ್ ವಿಜಯಕುಮಾರ್ ಅವರು, ಅಪರಾಧ ಸಾಬೀತಾದ ಕಾರಣ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಜತೆಗೆ 6 ಸಾವಿರ ರೂ. ದಂಡ ತುಂಬುವಂತೆ ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ತನುಜಾ ಹೊಸಪಟ್ಟಣ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

  • 5-10 ಸಾವಿರ ರೂ.ಗೆ ಪಾಕ್ ಐಎಸ್‌ಐಗೆ ಮಿಲಿಟರಿ ಮಾಹಿತಿ ಲೀಕ್‌ – ಇಬ್ಬರು ಅರೆಸ್ಟ್‌

    ಚಂಡೀಗಢ: ಕೇವಲ 5 ಸಾವಿರ ರೂ. ಮತ್ತು 10 ಸಾವಿರ ರೂ.ಗಳಿಗೆ ಪಾಕಿಸ್ತಾನದ ಐಎಸ್‌ಐಗೆ (ISI) ಮಿಲಿಟರಿ ಮಾಹಿತಿ ಸೋರಿಕೆ ಮಾಡುತ್ತಿದ್ದ ಇಬ್ಬರನ್ನು ಪಂಜಾಬ್‌ ಪೊಲೀಸರು ಬಂಧಿಸಿದ್ದಾರೆ.

    ಆರೋಪಿಗಳನ್ನು ಪಾಲಕ್ ಶೇರ್ ಮಸಿಹ್ ಮತ್ತು ಸೂರಜ್ ಮಸಿಹ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಪಂಜಾಬ್‌ನ ಅಮೃತಸರದಲ್ಲಿರುವ ಸೇನಾ ಸೂಕ್ಷ್ಮ ವಲಯ ಮತ್ತು ವಾಯುನೆಲೆಯ ಸೂಕ್ಷ್ಮ ಮಾಹಿತಿಗಳು ಮತ್ತು ಫೋಟೋಗಳನ್ನು ಪಾಕಿಸ್ತಾನದ ಐಎಸ್‌ಐಗೆ ಸೋರಿಕೆ ಮಾಡುತ್ತಿದ್ದರು.

  • ಪುತ್ತೂರು: ಬಲವಂತವಾಗಿ ಅಂಗಡಿಗಳನ್ನು ಬಂದ್ ಮಾಡಿ ದೊಂಬಿ ನಡೆಸಿ ನಿಷೇಧಾಜ್ಞೆ ಉಲ್ಲಂಘನೆ – 30 ಮಂದಿ ವಿರುದ್ಧ ಪ್ರಕರಣ ದಾಖಲು

    ಪುತ್ತೂರು: ಮೇ.1ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕಿನಾದ್ಯಂತ ಮೇ 2 ರಿಂದ 5ರ ತನಕ ಜಿಲ್ಲಾಧಿಕಾರಿಯವರು ನಿಷೇದಾಜ್ಞೆ ಜಾರಿ ಮಾಡಿದ್ದರು.

    ಆದರೆ ಮೇ 2ರಂದು ಪುತ್ತೂರು ಗಾಂಧಿಕಟ್ಟೆ ಜಂಕ್ಷನ್ ಬಳಿಯಲ್ಲಿ ಸುಮಾರು 20 ರಿಂದ 30 ಜನ ಅಕ್ರಮ ಕೂಟ ಸೇರಿಕೊಂಡು ಬಸ್ ನಿಲ್ದಾಣದ ಬಳಿಯಲ್ಲಿರುವ ಅಂಗಡಿ ಮುಗ್ಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸುತ್ತಿರುವಾಗ ಪುತ್ತೂರು ನಗರ ಪೊಲೀಸರು ಸ್ಥಳಕ್ಕೆ ತೆರಳಿ ನಿಷೇದಾಜ್ಞೆ ಜಾರಿಯಲ್ಲಿರುವ ಕುರಿತು ಸೂಚನೆ ನೀಡಿದರೂ ಸೂಚನೆಗಳನ್ನು ಉಲ್ಲಂಘಿಸಿ, ಅಕ್ರಮ ಕೂಟ ಸೇರಿದ 20 ರಿಂದ 30 ಜನ ಸಮಾನ ಉದ್ದೇಶದಿಂದ ದೊಂಬಿ ನಡೆಸುವ ಮೂಲಕ ನಿಷೇದಾಜ್ಞೆ ಉಲ್ಲಂಘಿಸಿದ್ದಾರೆ. ಈ ಕುರಿತು ದೊಂಬಿ ನಡೆಸಿದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

  • ನೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿಗಳು- ಘಟನೆ ಖಂಡಿಸಿ ಪ್ರತಿಭಟನೆ

    ಕಲಬುರಗಿ: ಮತ್ತೆ ರಾಜ್ಯದಲ್ಲಿ ನೀಟ್ ಪರೀಕ್ಷೆಯಲ್ಲಿ ಅಧಿಕಾರಿಗಳು ವಿದ್ಯಾರ್ಥಿ ಧರಿಸಿದ್ದ ಜನಿವಾರ ತೆಗೆಸಿರುವ ಘಟನೆ ಕಲಬುರಗಿಯ ಖಾಸಗಿ ಶಾಲೆಯಲ್ಲಿ ನಡೆದಿದೆ.

    ಇಂದು ರಾಜ್ಯದಾದ್ಯಂತ ನೀಟ್ ಪರೀಕ್ಷೆ ನಡೆದಿದ್ದು, ಶ್ರೀಪಾದ್ ಪಾಟೀಲ್ ನೀಟ್ ಪರೀಕ್ಷೆಗೆ ಹಾಜರಾಗಿದ್ದ. ಶ್ರೀಪಾದ್ ಪರೀಕ್ಷಾ ಕೇಂದ್ರದ ಒಳಗೆ ಹೋಗುವಾಗ ಅಧಿಕಾರಿಗಳು ಜನಿವಾರ ತೆಗೆದು ಬರುವಂತೆ ಸೂಚಿಸಿದ್ದಾರೆ.

    ಈ ವೇಳೆ ಶ್ರೀಪಾದ್ ಅಧಿಕಾರಿಗಳ ಸೂಚನೆಯಂತೆ ಜನಿವಾರ ತೆಗೆದು ಪರೀಕ್ಷೆಗೆ ಹಾಜರಾಗಿದ್ದಾನೆ. ಈ ಘಟನೆಯನ್ನು ಖಂಡಿಸಿ ಪರೀಕ್ಷಾ ಕೇಂದ್ರದ ಮುಂದೆ ಬ್ರಾಹ್ಮಣ ಸಮಾಜದವರು ಪ್ರತಿಭಟನೆ ನಡೆಸಿದ್ದಾರೆ. ಜನಿವಾರ ತೆಗೆಸಿದ ಅಧಿಕಾರಿಯನ್ನ ನಮ್ಮ ವಶಕ್ಕೆ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

    ಪರೀಕ್ಷಾ ಕೇಂದ್ರದ ಎದುರು ಟೈರ್ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ಹಾಕಿದ್ದು, ಪ್ರತಿಭಟನೆ ಎಬಿವಿಪಿ ಕಾರ್ಯಕರ್ತರು ಸಾಥ್ ನೀಡಿದರು. ಕಳೆದ ಏಪ್ರಿಲ್ ಸಿಇಟಿ ಪರೀಕ್ಷೆಯಲ್ಲೂ ಇಂತಹದೊಂದು ಪ್ರಕರಣ ನಡೆದಿದ್ದು, ಇದು ರಾಜ್ಯದಾದ್ಯಂತ ಬ್ರಾಹ್ಮಣ ಸಮಾಜದ ಆಕ್ರೋಶಕ್ಕೆ ಕಾರಣವಾಗಿತ್ತು.

  • ಬೆಳ್ತಂಗಡಿ : ಕೋಮು ಸೌಹಾರ್ದತೆ ಕದಡುವ ಪ್ರಚೋದನಕಾರಿ ವೀಡಿಯೊ ಅಪ್‌ಲೋಡ್ – ಯುವಕನ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ: ಬೆಳ್ತಂಗಡಿ ಬಳಿಯ ತಣ್ಣೀರುಪಂಥದ ಯುವಕನೊಬ್ಬ ಕೋಮು ಸೌಹಾರ್ದತೆಯನ್ನು ಕದಡುವ ಉದ್ದೇಶದಿಂದ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಚೋದನಕಾರಿ ವೀಡಿಯೊವನ್ನು ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾನೆ.

    ಬೆಳ್ತಂಗಡಿ ನಿವಾಸಿ ಧನುಷ್ ಎಂದು ಗುರುತಿಸಲಾದ ಆರೋಪಿಯು ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುವ ಮತ್ತು ಸಾರ್ವಜನಿಕ ಶಾಂತಿಗೆ ಧಕ್ಕೆ ತರುವ ವಿಷಯವನ್ನು ಪ್ರಸಾರ ಮಾಡಿದ್ದಾನೆ ಎಂದು ಹೇಳಲಾಗುತ್ತದೆ. ಇದರ ನಂತರ, ಮೇ 4 ರಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿದೆ.

    ಭಾರತೀಯ ನ್ಯಾಯ ಸಂಹಿತ (ಬಿಎನ್‌ಎಸ್) – 2023 ರ ಸೆಕ್ಷನ್ 196(1)(ಎ) ಮತ್ತು 353(1)(ಸಿ) ಅಡಿಯಲ್ಲಿ ಎಫ್‌ಐಆರ್ ಸಂಖ್ಯೆ 30/2025 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಸಾಮಾಜಿಕ ಮಾಧ್ಯಮ ವೇದಿಕೆ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಳುಮಾಡುವ ಪ್ರಚೋದನಕಾರಿ ವಿಷಯವಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರಾಥಮಿಕ ತನಿಖೆಗಳು ವೀಡಿಯೊವನ್ನು ದುರುದ್ದೇಶಪೂರಿತ ಉದ್ದೇಶದಿಂದ ರಚಿಸಲಾಗಿದೆ ಮತ್ತು ಪೋಸ್ಟ್ ಮಾಡಲಾಗಿದೆ ಎಂದು ಸೂಚಿಸುತ್ತವೆ.

    ಈ ವಿಷಯದ ಬಗ್ಗೆ ಅಧಿಕಾರಿಗಳು ವಿವರವಾದ ತನಿಖೆಯನ್ನು ಪ್ರಾರಂಭಿಸಿದ್ದಾರೆ.ತನಿಖೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎನ್ನಲಾಗಿದೆ.

  • ಮಂಗಳೂರು: ಕಾರು-ಆಟೋರಿಕ್ಷಾ ಡಿಕ್ಕಿ-ಪ್ರಯಾಣಿಕರಿಗೆ ಗಂಭೀರ ಗಾಯ

    ಮಂಗಳೂರು: ಕೊಣಾಜೆ ಸಮೀಪದ ಕಂಬ್ಲಪದವು ಬಳಿ ಮೇ 4 ರ ಭಾನುವಾರ ಬೆಳಿಗ್ಗೆ ಕಾರು ಮತ್ತು ಆಟೋರಿಕ್ಷಾ ಅಪಘಾತಕ್ಕೀಡಾಗಿವೆ.ಡಿಕ್ಕಿಯಲ್ಲಿ ಕಾರಿನ ಮುಂಭಾಗ ಮತ್ತು ಆಟೋರಿಕ್ಷಾ ತೀವ್ರವಾಗಿ ಹಾನಿಗೊಳಗಾಗಿವೆ.ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಗಾಯಾಳುಗಳ ಗುರುತು ಸೇರಿದಂತೆ ಹೆಚ್ಚಿನ ವಿವರಗಳು ಇನ್ನೂ ತಿಳಿದುಬಂದಿಲ್ಲ.

  • ಮಂಗಳೂರು : ಕಾವೂರು ಹಲ್ಲೆ ಪ್ರಕರಣ – ನಾಲ್ವರ ಬಂಧನ

    ಮಂಗಳೂರು:  ಕಾವೂರು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳ ಮೇಲೆ ಭಾರತೀಯ ನೀತಿ ಸಂಹಿತೆ ಪ್ರಕಾರ 189(2), 191(2), 115(2), 118(1), 352, 351(2) ಆರ್/ಡಬ್ಲ್ಯೂ ಸೆಕ್ಷನ್ 190ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ.

    ಬಂಧಿತ ಆರೋಪಿಗಳನ್ನು ಬಜ್ಪೆಯ ಲಿಖಿತ್(29), ಕುತ್ತಾರ್‌ನ ರಾಕೇಶ್(34),ಸುರತ್ಕಲ್‌ನ ಧನರಾಜ್ ಅಲಿಯಾಸ್ ಧನು, ಮೂಡುಬಿದಿರೆಯ ಪ್ರಶಾಂತ್ ಶೆಟ್ಟಿ (26) ಎಂದು ಗುರುತಿಸಲಾಗಿದೆ.

    ಎಲ್ಲಾ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

  • ಮಂಗಳೂರು : ಬಸ್‌ಗೆ ಕಲ್ಲು ತೂರಾಟ ಪ್ರಕರಣ – ನಾಲ್ವರ ಬಂಧನ

    ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಕೃತ್ಯ ಖಂಡಿಸಿ ವಿಶ್ವಹಿಂದೂ ಪರಿಷತ್ ನೀಡಿದ್ದ ದ.ಕ. ಜಿಲ್ಲಾ ಬಂದ್ ಸಂದರ್ಭ ನಗರದ ಪಂಪ್‌ವೆಲ್ ಬಳಿ ಬಸ್‌ಗೆ ಕಲ್ಲು ತೂರಾಟ ನಡೆಸಿದ ಆರೋಪದಲ್ಲಿ ನಾಲ್ಕು ಮಂದಿಯನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.

    ಆರೋಪಿಗಳು ಕೃತ್ಯಕ್ಕೆ ಬಳಸಲಾದ ಎರಡು ಸ್ಕೂಟರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ನಗರದ ಅತ್ತಾವರ ನಿವಾಸಿಗಳಾದ ಬಾಲಚಂದ್ರ (31), ಅಕ್ಷಯ್ (21), ಜಪ್ಪಿನಮೊಗರು ನಿವಾಸಿ ಶಬೀನ್ ಪಡಿಕ್ಕಲ್ (38), ಮಂಜನಾಡಿ ನಿವಾಸಿ ರಾಕೇಶ್ ಎಂ.(26) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

    ಮೇ 2ರಂದು ಬೆಳಗ್ಗೆ 6:50ರಿಂದ ಬೆಳಿಗ್ಗೆ 7ರ ಮಧ್ಯೆ ಪಂಪ್‌ವೆಲ್ ಬಳಿ 5 ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಕಲ್ಲು ಎಸೆದು ಪರಾರಿಯಾಗಿದ್ದರು. ಇದರಿಂದ ಬಸ್‌ಗಳ ಮುಂಭಾಗ ಹಾನಿಯಾಗಿತ್ತು. ಬಸ್‌ನ ಚಾಲಕ ಸತೀಶ್ ನಾಯಕ್ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿದ್ದರು.

  • ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಹಿನ್ನಲೆ; ಸಾಮಾಜಿಕ ಮಾಧ್ಯಮದಲ್ಲಿ ಉತ್ತೇಜಕ ಪೋಸ್ಟ್ ಸಂಬಂಧಿಸಿ ಬಂಧನ

    ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಸುರತ್ಕಲ್‌ನ 25 ವರ್ಷದ ನಿವಾಸಿ ಸಚಿನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ನ್ಯೂಸ್ 18 ಯೂಟ್ಯೂಬ್ ಚಾನೆಲ್‌ನ ಲೈವ್ ಪ್ರಸಾರದಲ್ಲಿ ಮಾಡಿದ ಉತ್ತೇಜಕ ಕಾಮೆಂಟ್‌ನಿಂದ ಈ ಬಂಧನ ನಡೆದಿದೆ, ಇದು ರೌಡಿ ಶೀಟರ್ ಸುಹಾಸ್ ಶೆಟ್ಟಿ ಮರಣದ ನಂತರ ಸಂಭಾವ್ಯ ಅಶಾಂತಿಯನ್ನು ಪ್ರಚೋದಿಸಿರುವುದಾಗಿ ಭಾವಿಸಲಾಗಿದೆ.

    “ಮಿಸ್ಟರ್ ಸೈಲೆಂಟ್ ಎಲ್ವಿಆರ್” ಎಂಬ ಗುಪ್ತನಾಮದಲ್ಲಿ ಪೋಸ್ಟ್ ಮಾಡಲಾದ ಕಾಮೆಂಟ್‌ನಲ್ಲಿ, “ಎರಡು ದಿನಗಳ ನಂತರ, ಮಂಗಳೂರಿನಲ್ಲಿ ಒಂದು ಶವ ಬೀಳುವುದು ನಿಜ, ಮತ್ತು ಸುರತ್ಕಲ್‌ನ ಕೋಡಿಕೆರೆಯ ಜನರು ಅದನ್ನು ಖಂಡಿತವಾಗಿಯೂ ಬಿಡುವುದಿಲ್ಲ” ಎಂದು ಪೋಸ್ಟ್ ಮಾಡಲಾಗಿತ್ತು. ಈ ಹೇಳಿಕೆಯು ಸಂಭಾವ್ಯ ಪ್ರತೀಕಾರದ ಕ್ರಿಯೆಗಳ ಬಗ್ಗೆ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ.