Category: Mangalore

  • Mehrish and Tisha Reem Top Barakah International School’s 100% CBSE Results

    Mangaluru, May 13, 2025: Continuing its legacy of academic excellence, Barakah International School and College has achieved a 100% pass rate in the 2025 CBSE Class 10 and Class 12 examinations, showcasing outstanding performance. Top performers include:

    Class 10:

    • Mehrish Haleema (96.4%)
    • Hamna Nafeesa (96.2%)

    Class 12 (Science):

    • Tisha Reem (93%) – niece of Gangolli’s own Zahir Nakhuda

    Tisha Reem is also a former student of Touheed English Medium School in Gangolli.

    Several other students across all streams have also secured excellent results, adding to the institution’s remarkable achievement.

    Gangolli News congratulates all the toppers and the students

  • ಮಂಗಳೂರು: ಟಿಂಟೆಡ್ ಗಾಜು ಬಳಕೆ; 504 ಕಾರುಗಳ ಮೇಲೆ ದಂಡ, ₹2.53 ಲಕ್ಷ ವಸೂಲಿ

    ಮಂಗಳೂರು, ಮೇ 13, 2025: ಮಂಗಳೂರು ನಗರ ಟ್ರಾಫಿಕ್ ಪೊಲೀಸರು ವಿಶೇಷ ಅಭಿಯಾನದಡಿ, ಕಾರುಗಳ ಕಿಟಕಿ ಮತ್ತು ವಿಂಡ್‌ಸ್ಕ್ರೀನ್‌ಗಳಲ್ಲಿ ಟಿಂಟೆಡ್ ಗಾಜು ಬಳಕೆಯ ಮೇಲಿನ ಸುಪ್ರೀಂ ಕೋರ್ಟ್ ನಿಷೇಧವನ್ನು ಉಲ್ಲಂಘಿಸಿದ 504 ಕಾರುಗಳ ಮೇಲೆ ಕ್ರಮ ಕೈಗೊಂಡು ₹2.53 ಲಕ್ಷ ದಂಡ ವಸೂಲಿ ಮಾಡಿದ್ದಾರೆ.

    ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಇಲ್ಲಿ ನೀಡಿದ ಹೇಳಿಕೆಯಲ್ಲಿ, ಮೇ 2 ರಿಂದ ಮೇ 11 ರವರೆಗೆ ಈ ಅಭಿಯಾನ ನಡೆಸಲಾಗಿದ್ದು, ಟಿಂಟೆಡ್ ಕಿಟಕಿ ಮತ್ತು ವಿಂಡ್‌ಸ್ಕ್ರೀನ್‌ಗಳನ್ನು ಹೊಂದಿರುವ ವಾಹನಗಳನ್ನು, ವಿಶೇಷವಾಗಿ ಕಾರುಗಳನ್ನು ಗುರುತಿಸಲು ಉದ್ದೇಶಿಸಲಾಗಿತ್ತು ಎಂದು ತಿಳಿಸಿದ್ದಾರೆ. ಈ ಅವಧಿಯಲ್ಲಿ ಆಯುಕ್ತಾಲಯದ ವ್ಯಾಪ್ತಿಯಲ್ಲಿ ವಿಶೇಷ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಿ ವಾಹನಗಳು ಮತ್ತು ಅವುಗಳ ದಾಖಲೆಗಳನ್ನು ಪರಿಶೀಲಿಸಲಾಗಿದೆ.

    ಪೊಲೀಸ್ ದಂಡ

    ಟ್ರಾಫಿಕ್ ಪೊಲೀಸರು ಕಾರು ಮಾಲೀಕರು ಅಥವಾ ಚಾಲಕರಿಗೆ ಸ್ಥಳದಲ್ಲೇ ಟಿಂಟೆಡ್ ಗಾಜುಗಳನ್ನು ತೆಗೆಯುವಂತೆ ಸೂಚಿಸಿದ್ದು, ಕಾನೂನು ಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಅಭಿಯಾನವು ಮುಂದುವರಿಯಲಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ವಾಹನ ಮಾಲೀಕರು/ಚಾಲಕರು ತಮ್ಮ ವಾಹನದ ಗಾಜುಗಳಿಗೆ ಟಿಂಟ್ ಬಳಸದಂತೆ ಕೋರಿದ್ದಾರೆ.

    ಸುಪ್ರೀಂ ಕೋರ್ಟ್, ಅವಿಶೇಕ್ ಗೋಯೆಂಕಾ ವಿರುದ್ಧ ಭಾರತ ಸರಕಾರ ಪ್ರಕರಣದಲ್ಲಿ, ಮೇ 4, 2012 ರಿಂದ ದೇಶಾದ್ಯಂತ ಎಲ್ಲಾ ವಾಹನಗಳ ಸುರಕ್ಷತಾ ಗಾಜುಗಳು, ವಿಂಡ್‌ಸ್ಕ್ರೀನ್ (ಮುಂಭಾಗ ಮತ್ತು ಹಿಂಭಾಗ) ಹಾಗೂ ಬದಿಯ ಗಾಜುಗಳ ಮೇಲೆ ಯಾವುದೇ ದೃಶ್ಯ ಬೆಳಕಿನ ಪ್ರಸರಣ (VLT) ಶೇಕಡಾವಾರು ಅಥವಾ ಇತರ ವಸ್ತುಗಳ ಬಳಕೆಯನ್ನು ನಿಷೇಧಿಸಿತ್ತು. ಈ ಆದೇಶವು ಗಂಭೀರ ಅಪರಾಧಗಳ ಹೆಚ್ಚಳವನ್ನು ತಡೆಗಟ್ಟಲು ಜಾರಿಗೊಳಿಸಲಾಗಿತ್ತು.

    ಪೊಲೀಸ್ ಆಯುಕ್ತರು, ವಾಹನ ಮಾಲೀಕರು/ಚಾಲಕರಿಗೆ ಸ್ವಯಂಪ್ರೇರಿತವಾಗಿ ಟಿಂಟ್ ತೆಗೆದು ಪೊಲೀಸರೊಂದಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ. ಟಿಂಟೆಡ್ ಗಾಜುಗಳೊಂದಿಗೆ ವಾಹನಗಳು ಕಂಡುಬಂದರೆ, ಸುರಕ್ಷತೆ ಮತ್ತು ಭದ್ರತೆಯ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆಯಡಿ ಮಾಲೀಕರು/ಚಾಲಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

  • ಪಡುಬಿದ್ರಿ: ರಸ್ತೆ ಅಪಘಾತ: 14 ವರ್ಷದ ಬಾಲಕ ಸಾವು

    ಪಡುಬಿದ್ರಿ, ಮೇ 13: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ಭೀಕರ ಮೋಟಾರ್‌ಸೈಕಲ್ ಅಪಘಾತದಲ್ಲಿ 14 ವರ್ಷದ ಬಾಲಕನೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ದಿನಾಂಕ 11/05/2025 ರಂದು ಕಾಪು ತಾಲೂಕಿನ ತೆಂಕ ಗ್ರಾಮದ ಎರ್ಮಾಳು ಗರಡಿಯ ಬಳಿ ನಡೆದಿದೆ.

    ಪಡುಬಿದ್ರಿ ನಿವಾಸಿ ಅಬ್ದುಲ್ ಅಜೀಜ್ ತಮ್ಮ ಮೋಟಾರ್‌ಸೈಕಲ್ (KA-20 ED-7571) ನಲ್ಲಿ ತಮ್ಮ ಮಗ ಶೇಖ್ ಅಬ್ದುಲ್ ಸೈಫಾನ್ (14) ರನ್ನು ಸಹಸವಾರನಾಗಿ ಕೂರಿಸಿಕೊಂಡು ಪಡುಬಿದ್ರೆಯಿಂದ ಉಚ್ಚಿಲ ಕಡೆಗೆ ಪ್ರಯಾಣಿಸುತ್ತಿದ್ದರು. ಮಧ್ಯಾಹ್ನ 12:30 ಗಂಟೆ ಸುಮಾರಿಗೆ ಎರ್ಮಾಳು ಗರಡಿಯ ಎದುರು ತಲುಪಿದಾಗ, ರಸ್ತೆಗೆ ಅಡ್ಡಲಾಗಿ ಬಂದ ನಾಯಿಯನ್ನು ತಪ್ಪಿಸಲು ಯತ್ನಿಸಿದಾಗ ವಾಹನದ ನಿಯಂತ್ರಣ ತಪ್ಪಿದೆ. ಇದರಿಂದಾಗಿ ಮೋಟಾರ್‌ಸೈಕಲ್ ರಸ್ತೆಯ ಎಡಬದಿಯ ಕಪ್ಪು ಕಂಬಕ್ಕೆ ಡಿಕ್ಕಿ ಹೊಡೆದು, ಸವಾರರು ವಾಹನ ಸಮೇತ ರಸ್ತೆಗೆ ಬಿದ್ದಿದ್ದಾರೆ. ಅಪಘಾತದ ತೀವ್ರತೆಯಿಂದ ಮೋಟಾರ್‌ಸೈಕಲ್‌ಗೆ ಬೆಂಕಿ ಹೊತ್ತಿಕೊಂಡು ಭಾಗಶಃ ಸುಟ್ಟುಹೋಗಿದೆ.

    ಅಪಘಾತದಲ್ಲಿ ಸವಾರ ಅಬ್ದುಲ್ ಅಜೀಜ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಹಸವಾರ ಶೇಖ್ ಅಬ್ದುಲ್ ಸೈಫಾನ್‌ಗೆ ತಲೆಗೆ ಗಂಭೀರ ಗಾಯ ಹಾಗೂ ಎದೆಗೆ ತರಚಿದ ಗಾಯವಾಗಿತ್ತು. ಗಾಯಾಳು ಬಾಲಕನನ್ನು ತಕ್ಷಣವೇ ಆದರ್ಶ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ 12:30 ಗಂಟೆಗೆ ಮೃತಪಟ್ಟಿದ್ದಾನೆ.

    ಕಾಪು ತಾಲೂಕಿನ ಅಕ್ರಂ (47) ಎಂಬವರು ನೀಡಿದ ದೂರಿನ ಆಧಾರದ ಮೇಲೆ, ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 57/2025ರಡಿಯಲ್ಲಿ ಕಲಂ 281, 125(a), 106(1) ಬಿಎನ್‌ಎಸ್‌ನಂತೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

  • ಮಂಗಳೂರು/ಉಡುಪಿ: ‘ಆಪರೇಷನ್ ಸಿಂಧೂರ್’ ಬೆನ್ನಲ್ಲೇ ಕರಾವಳಿಯಲ್ಲಿ ಹೈಅಲರ್ಟ್‌

    ಮಂಗಳೂರು/ಉಡುಪಿ, ಮೇ. 08: ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತ ’ಆಪರೇಷನ್ ಸಿಂಧೂರ್” ಕಾರ್ಯಾಚರಣೆ ಬೆನ್ನಲ್ಲೇ ರಾಜ್ಯದ ಕರಾವಳಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.

    ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡ 324 ಕಿಮೀ ಉದ್ದದ ಕರಾವಳಿ ಪ್ರದೇಶದಲ್ಲಿ ಮಂಗಳೂರು, ಮಲ್ಪೆ, ಕಾರವಾರ, ಕುಮಟಾ, ಭಟ್ಕಳ, ಹೆಜಮಾಡಿ, ಹೊನ್ನಾವರ, ಬೇಲೆಕೇರಿ ಮತ್ತು ಗಂಗೊಳ್ಳಿಯಲ್ಲಿ ಸಿಎಸ್‌ಪಿ ಕೇಂದ್ರಗಳು ಸೇರಿವೆ. ಈ ಎಲ್ಲಾ ಕೇಂದ್ರಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಒಂಬತ್ತು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 340 ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಅದರಲ್ಲಿ 180 ಸಿಬ್ಬಂದಿಯನ್ನು ಕರಾವಳಿ ನಿಯಂತ್ರಣ ಪಡೆಗೆ ಸೇರಿಸಲಾಗಿದೆ. 13 ದೋಣಿಗಳು ಮತ್ತು ಜೆಟ್ ಸ್ಕೀ ಗಳನ್ನು ಬಳಸಿಕೊಂಡು 24/7 ಕಣ್ಗಾವಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಕರಾವಳಿ ಭದ್ರತಾ ಎಸ್‌ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.

    “ಪಹಲ್ಗಾಮ್ ಘಟನೆಯ ನಂತರ, ನಮ್ಮ ಸಿಬ್ಬಂದಿ ಹೆಚ್ಚಿನ ಎಚ್ಚರಿಕೆಯಲ್ಲಿದ್ದಾರೆ. ಮುನ್ನೆಚ್ಚರಿಕೆ ಕ್ರಮಗಳನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ. ಇಂದು ಕಾರವಾರದಲ್ಲಿ ಅಣಕು ನಾಗರಿಕ ರಕ್ಷಣಾ ಕವಾಯತು ನಡೆಸಲಾಯಿತು. ಸಮುದ್ರದಲ್ಲಿ ಕಾರ್ಯನಿರ್ವಹಿಸುವ ದೋಣಿಗಳನ್ನು ಸಾಮಾನ್ಯ ದಿನಗಳಿಗಿಂತ ಹೆಚ್ಚು ಕಟ್ಟುನಿಟ್ಟಾಗಿ ಪರಿಶೀಲಿಸಲಾಗುತ್ತಿದೆ” ಎಂದು ಅವರು ಹೇಳಿದರು.

    ಮೇ 7 ರಂದು, ಸಿಎಸ್‌ಪಿ ಗಸ್ತು ದೋಣಿಗಳು ಮಂಗಳೂರಿನ ಹಳೆಯ ಬಂದರು ಪ್ರದೇಶದಲ್ಲಿ ಕಣ್ಗಾವಲು ನಡೆಸಿದವು. ಇದರ ಜೊತೆಗೆ, ಸುತ್ತಮುತ್ತಲಿನ ದೋಣಿಗಳನ್ನು ಪರಿಶೀಲಿಸಲು ಅಣಕು ಕಾರ್ಯಾಚರಣೆಯನ್ನು ಸಹ ನಡೆಸಲಾಯಿತು. ಭಾರತೀಯ ನೌಕಾಪಡೆ, ಕರಾವಳಿ ಕಾವಲು ಪಡೆ ಮತ್ತು ಕರಾವಳಿ ಭದ್ರತಾ ಪೊಲೀಸರು, ಕರಾವಳಿ ಮತ್ತು ಆಳ ಸಮುದ್ರದಲ್ಲಿನ ಚಟುವಟಿಕೆಗಳ ಮೇಲೆ ನಿಗಾ ಇಡಲಾಗಿದೆ. ಕರಾವಳಿ ಕಾವಲು ಪಡೆ ಹಡಗುಗಳು ಈಗಾಗಲೇ 24×7 ಸಮುದ್ರದಲ್ಲಿ ಗಸ್ತು ತಿರುಗುತ್ತಿದ್ದು, ವಿದೇಶಿ ಹಡಗುಗಳ ಮೇಲೆ ಹೆಚ್ಚಿನ ಕಣ್ಗಾವಲು ನಡೆಸುತ್ತಿವೆ.

    ಲಭ್ಯವಿರುವ ದೋಣಿಗಳ ಸಮೂಹವನ್ನು ಬಳಸಿಕೊಂಡು ನಿರಂತರ ಗಸ್ತು ನಡೆಸಲಾಗುತ್ತಿದೆ ಎಂದು ಎಸ್‌ಪಿ ಮಿಥುನ್ ಕುಮಾರ್ ಹೇಳಿದರು. ಇಂದು ಮಲ್ಪೆಯಲ್ಲಿ ಪರಿಶೀಲನಾ ಸಭೆ ನಡೆಸಲಾಯಿತು. ಇತರ ಜಿಲ್ಲೆಗಳಿಂದ ಬರುವ ದೋಣಿಗಳನ್ನು ಪರಿಶೀಲಿಸಲಾಗುತ್ತಿದೆ ಮತ್ತು ಕಳೆದ ನಾಲ್ಕು ದಿನಗಳಲ್ಲಿ ನಾಲ್ಕು ದೋಣಿಗಳಿಗೆ ದಂಡ ವಿಧಿಸಲಾಗಿದೆ. ಅನುಮಾನಾಸ್ಪದವಾಗಿ ಕಂಡುಬಂದ ಯಾರನ್ನಾದರೂ ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ಅವರು ಹೇಳಿದರು.

  • ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಕ್ ಡ್ರಿಲ್

    ಮಂಗಳೂರು: ಭಾರತ-ಪಾಕ್‌ ಪ್ರತೀಕಾರದ ಸಂಘರ್ಷದ ಹಿನ್ನೆಲೆಯಲ್ಲಿ ದೇಶಾದ್ಯಂತ ಮಾಕ್ ಡ್ರಿಲ್ ಕೈಗೊಳ್ಳಲಾಯಿತು. ಗೃಹ ಸಚಿವಾಲಯವು ಆದೇಶಿಸಿದ ರಾಷ್ಟ್ರೀಯ ಮಟ್ಟದ ನಾಗರಿಕ ಅಣಕು ಪ್ರದರ್ಶನದ ಭಾಗವಾಗಿ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಮೇ 7, 2025 ರಂದು ಭಾರತದಾದ್ಯಂತ ತುರ್ತು ವಿಮಾನ ನಿಲ್ದಾಣ ಸ್ಥಳಾಂತರಿಸುವ ಅಣುಕು ಪ್ರದರ್ಶನ ನಡೆಸಿತು.

    ವಿಮಾನ ನಿಲ್ದಾಣದ ತುರ್ತು ಕಾರ್ಯಾಚರಣೆ ಯೋಜನೆಯ ಪ್ರಕಾರ ಈ ಮಾಕ್‌ ಡ್ರಿಲ್ ಅನ್ನು ನಡೆಸಲಾಯಿತು. ವಿಮಾನ ನಿಲ್ದಾಣದ ಕಾರ್ಯಾಚರಣೆಗಳ ಮೇಲೆ ಯಾವುದೇ ಪರಿಣಾಮ ಬೀರದಂತೆ, ಎಲ್ಲಾ ವಿಮಾನ ನಿಲ್ದಾಣದ ಪಾಲುದಾರರನ್ನು ಒಳಗೊಂಡ ಮಾಕ್‌ ಡ್ರಿಲ್ ಅನ್ನು CISF ಸಂಯೋಜಿಸಿತು.

  • ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಆರೋಪ – ಹಿಂದೂ ಕಾರ್ಯಕರ್ತರ ವಿರುದ್ದ ಹೆಡ್​ ಕಾನ್ಸ್ಟೇಬಲ್ ರಶೀದ್ ದೂರು

    ಮಂಗಳೂರು ಮೇ 06: ರೌಡಿ ಶೀಟರ್ ಸುಹಾಸ್ ಶೆಟ್ಟಿಯ ಕೊಲೆಯಲ್ಲಿ ಬಜ್ಪೆ ಪೊಲೀಸ ಠಾಣೆಯ ಹೆಡ್ ಕಾನ್ಸ್ಟೆಬಲ್ ರಶೀದ್ ಅವರ ಪಾತ್ರ ಇದೆ ಎಂದು ಸಾಮಾಜಿಕ ಜಾಲತಾಣದಗಳಲ್ಲಿ ನಿರಾಧಾರ ಆರೋಪ ಮಾಡಿದ್ದಾರೆ ಎಂದು ಬಜ್ಪೆ ಪೊಲೀಸ್‌ ಠಾಣೆಯ ಹೆಡ್‌ ಕಾನ್ಸ್ಟೇಬಲ್‌ ರಶೀದ್‌ ಎಂ. ಶೇಕ್‌ ದೂರು ನೀಡಿದ್ದಾರೆ. ಈ ಸಂಬಂಧ ಮೂಡುಬಿದಿರೆಯ ಸಮಿತ್‌ರಾಜ್‌ ಧರೆಗುಡ್ಡೆ ಮತ್ತು ಹಿಂದೂ ಜಾಗರಣ ವೇದಿಕೆಯ ಮುಖಂಡ ಉಲ್ಲಾಸ್‌ ಟಿ. ಎಂಬವರ ವಿರುದ್ಧ ಬಜ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಹಿಂದೂ ಜಾಗರಣ ವೇದಿಕೆಯ ಮುಖಂಡ ಮೂಡಬಿದ್ರೆಯ ಸಮಿತ್ ರಾಜ್ ದರೆಗುಡ್ಡೆ, ಹಿಂದೂ ಜಾಗರಣ ವೇದಿಕೆ ಮುಖಂಡ ಕೆ.ಟಿ.ಉಲ್ಲಾಸ್ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ವಿನಾಕಾರಣ ನನ್ನ ಹೆಸರು ತಂದಿದ್ದಾರೆ. ಯಾವುದೇ ಆಧಾರ ಇಲ್ಲದೆ ನನ್ನ ಹೆಸರು ಹಾಕಿ ಅವಹೇಳನ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡಲಾಗುತ್ತಿದೆ ಎಂದು ಹೆಡ್​ ಕಾನ್ಸ್​ಟೇಬಲ್ ರಶೀದ್ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

  • ಮಂಗಳೂರು: ಮೀನು ವ್ಯಾಪಾರಿ ಕೊಲೆ ಯತ್ನ; ಲೋಕೇಶ್​​ ಕೋಡಿಕೆರೆ ಬಂಧನ..!

    ಮಂಗಳೂರು: ರೌಡಿಶೀಟರ್ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಾದ ದಿನ ರಾತ್ರಿ ರೌಡಿಶೀಟರ್ ಕೋಡಿಕೆರೆ ಲೋಕೇಶ್ ಹಾಗೂ ಗ್ಯಾಂಗ್ ಪ್ರತೀಕಾರಕ್ಕೆ ಯತ್ನಿಸಿತ್ತು. ಕುಂಟಿಕಾನ ಬಳಿ ಉಳ್ಳಾಲ ನಿವಾಸಿ ಲುಕ್ಮಾನ್ ಎಂಬ ಮೀನಿನ ವ್ಯಾಪಾರಿಯನ್ನು ಅಟ್ಟಾಡಿಸಿ ಕೊಲೆಗೆ ಯತ್ನಿಸಿತ್ತು. ಇನ್ನೋವಾ ಕಾರಿನಲ್ಲಿ ಬಂದು ದಾಳಿ ಮಾಡಿತ್ತು. ಇದೀಗ ಕಾವೂರು ಪೊಲೀಸರು ಲೋಕೇಶ್ನನ್ನು ಬಂಧಿಸಿದ್ದಾರೆ.

    ಉಳ್ಳಾಲ ನಿವಾಸಿ ಲುಕ್ಮಾನ್ ಹಲ್ಲೆಗೊಳಗಾಗಿದ್ದ ಮೀನು ವ್ಯಾಪಾರಿ. ಮೀನುಗಾರ ಮಹಿಳೆ ಬೊಬ್ಬೆ ಹಾಕಿದ ಹಿನ್ನೆಲೆಯಿಂದಾಗಿ ಮೀನು ವ್ಯಾಪಾರಿ ಬಚಾವ್ ಆಗಿದ್ದ. ಇನ್ನೋವಾ ಕಾರಿನಲ್ಲಿ ಬಂದು ಲೋಕೇಶ್ ಗ್ಯಾಂಗ್ ಆತನ ಮೇಲೆ ಅಟ್ಯಾಕ್ ಮಾಡಿತ್ತು. ಈ ಹಿನ್ನಲೆಯಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

    ಸುಹಾಸ್ ಶೆಟ್ಟಿ ಕೊಲೆ ನಂತರ ಮಂಗಳೂರಿನ ಮೂರು ಕಡೆ ಚಾಕು ಇರಿತ ಪ್ರಕರಣಗಳು ವರದಿಯಾಗಿದ್ದವು. ಒಟ್ಟಾರೆಯಾಗಿ 7 ಮಂದಿಯನ್ನು ಬಂಧಿಸಲಾಗಿತ್ತು.

  • ಮಂಗಳೂರು : ಕುದ್ರೋಳಿ ದೇವಸ್ಥಾನದ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ

    ಮಂಗಳೂರು: ಕುದ್ರೋಳಿ ದೇವಸ್ಥಾನದ ಪ್ರವೇಶದ್ವಾರದ ಬಳಿ ಇರುವ ಫ್ಲಾಟ್‌ನಲ್ಲಿ ಇಂದು ಮಧ್ಯಾಹ್ನ ಬೆಂಕಿ ಅವಘಡ ಸಂಭವಿಸಿದೆ.

    ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. ಅದೃಷ್ಟವಶಾತ್, ಘಟನೆ ನಡೆದ ಸಮಯದಲ್ಲಿ ಫ್ಲಾಟ್ ಒಳಗೆ ಯಾರೂ ಇರಲಿಲ್ಲ ಎನ್ನಲಾಗಿದೆ. ಐದು ಅಂತಸ್ತಿನ ವಸತಿ ಕಟ್ಟಡದ ಮೂರನೇ ಮಹಡಿಯಲ್ಲಿ ಈ ಘಟನೆ ಸಂಭವಿಸಿದೆ.

    ಪಕ್ಕದ ಫ್ಲಾಟ್‌ನಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ಸ್ಥಳೀಯ ನಿವಾಸಿಗಳು ರಕ್ಷಿಸಿದ್ದಾರೆ.ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದವು. ಯಾವುದೇ ದೊಡ್ಡ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

  • ಬೆಳ್ತಂಗಡಿ: ಎಸ್ ಡಿ ಪಿ ಐ ಯಿಂದ ಮನೆ ಹಸ್ತಾಂತರ

    ಬೆಳ್ತಂಗಡಿ: ಒಂದು ವರ್ಷದ ಹಿಂದೆ ನಿಧಿಯ ವ್ಯವಹಾರದ ಮೋಸಕ್ಕೆ ಬಲಿಯಾಗಿ ತುಮಕೂರಿನಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಸಾಹುಲ್ ಹಮೀದ್ ಉಜಿರೆ ರವರ ಕುಟುಂಬಕ್ಕೆ ಎಸ್ಡಿಪಿಐ ಬೆಳ್ತಂಗಡಿ ಮತ್ತು ಕುಟುಂಬದ ದಾನಿಗಳ ಸಹಾಯದಿಂದ ನಿರ್ಮಿಸಿರುವ ಮನೆಯನ್ನು ಇಂದು ಹಸ್ತಾಂತರಿಸಲಾಯಿತು.

    ಮನೆ ಹಸ್ತಾಂತರ ಕಾರ್ಯಕ್ರಮದಲ್ಲಿ ಪಕ್ಷದ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ಸ್ಥಳೀಯ ಮಸೀದಿ ಖತೀಬರಾದ ಖಾದರ್ ಹಿಕಾಮಿ, ಮಸೀದಿ ಅಧ್ಯಕ್ಷರಾದ ಹುಸೈನ್ ತಂಙಳ್, ಇಂಜಿನಿಯರ್ ಹಮೀದ್, ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಜಿಲ್ಲಾ ಕಾರ್ಯದರ್ಶಿಗಳಾದ ನವಾಝ್ ಕಟ್ಟೆ, ಅಶ್ರಫ್ ತಲಪಾಡಿ, ಉಜಿರೆ ಬ್ಲಾಕ್ ಸಮಿತಿ ಅಧ್ಯಕ್ಷರಾದ ಮಹಮ್ಮದ್ ಅಲಿ ಕುಂಟಿನಿ ಮತ್ತು ಇತರರು ಉಪಸ್ಥಿತರಿದ್ದರು.

  • ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಕೇಸ್; ಘಟನಾ ಸ್ಥಳದಲ್ಲಿದ್ದ ಇಬ್ಬರು ಮಹಿಳೆಯರ ವಿಚಾರಣೆ

    ಮಂಗಳೂರು: ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳು ಕೃತ್ಯ ಎಸಗಿ ಕಾರಿನಲ್ಲಿ ಪರಾರಿಯಾಗುತ್ತಿದ್ದಾಗ ಸ್ಥಳದಲ್ಲಿದ್ದ ಇಬ್ಬರು ಬುರ್ಖಾ ಧರಿಸಿದ ಮಹಿಳೆಯರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.

    ಈ ಮಹಿಳೆಯರು ಘಟನೆಯಲ್ಲಿ ನೇರವಾಗಿ ಭಾಗಿಯಿಲ್ಲ ಎಂದು ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದುಬಂದಿದೆ. ಅವರನ್ನು ಪ್ರಕರಣದ ಎರಡನೇ ಆರೋಪಿ ನಿಯಾಜ್‌ನ ಚಿಕ್ಕಮ್ಮ ಮತ್ತು ಸೋದರ ಸಂಬಂಧಿ ಎಂದು ಗುರುತಿಸಲಾಗಿದೆ.

    ಪೊಲೀಸರ ಪ್ರಕಾರ, ಈ ಮಹಿಳೆಯರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಂಬಂಧಿಯೊಬ್ಬರನ್ನು ಭೇಟಿ ಮಾಡಲು ಬಜ್ಪೆಯ ಫ್ಲಾಟ್‌ಗೆ ಬಂದಿದ್ದರು. ಮನೆಗೆ ಹಿಂತಿರುಗುವಾಗ, ಅವರು ಘಟನಾ ಸ್ಥಳದ ಸಮೀಪದ ಹೋಟೆಲ್‌ನಿಂದ ಊಟದ ಪಾರ್ಸೆಲ್ ಅನ್ನು ತೆಗೆದುಕೊಂಡಿದ್ದಾರೆ. ಆಗ ಅವರು ನಿಯಾಜ್ ರಸ್ತೆಯಲ್ಲಿ ಓಡುತ್ತಿರುವುದನ್ನು ಗಮನಿಸಿದ್ದಾರೆ. ಸ್ಥಳದಲ್ಲಿ ಅಪಘಾತವಾದಂತೆ ಕಂಡುಬಂದ ಕಾರಣ ನಿಯಾಜ್‌ನನ್ನು ಸಂಪರ್ಕಿಸಿದ್ದಾಗಿ ವಿಚಾರಣೆ ವೇಳೆ ಮಹಿಳೆಯರು ಪೊಲೀಸರಿಗೆ ತಿಳಿಸಿದ್ದಾರೆ.

    ಇನ್ನು ಈ ಬಗ್ಗೆ ತನಿಖೆ ಮುಂದುವರೆದಿದೆ.