ಉಡುಪಿ, ಮೇ 09 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ (ರಾಜ್ಯ ಪಠ್ಯಕ್ರಮ) ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮೇ 19 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ https://dom.karnataka.gov.in ಅಥವಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ : 8277799990 ಗೆ ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಬ್ರಹ್ಮಾವರ: ಇಲ್ಲಿನ ಹಾರಾಡಿಯೆಲ್ಲಿನ ಅರಿವು ಕೇಂದ್ರದಲ್ಲಿ ಮಕ್ಕಳಿಗೆ ಬೀಗೆ ಶಿಬಿರ ಆರಂಭವಾಗಿದ್ದು, ಮಕ್ಕಳಿಗೆ ವಿವಿಧ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಬೇಸಿಗೆ ಶಿಬಿರದ ಮೊದಲನೇ ದಿನದ ಚಟುವಟಿಕೆಎಲ್ಲಿ ಗಟ್ಟಿ ಓದು, ಫನ್ನಿ ಗೇಮ್ಸ್ ಹಾಗೂ ಡ್ರಾಯಿಂಗ್ ಮಾಡಿಸಲಾಯಿತು.
ಅರಿವು ಕೇಂದ್ರದಲ್ಲಿ ವರ್ಷ ಉದ್ದಕ್ಕೋ ಬೇರೆ ಬೇರೆ ತರಬೇತಿ ನೀಡಲಾಗುತಿತ್ತು, ಈ ವರ್ಷ ಪಕ್ಷಿಗಳ ಮಾಯಾಲೋಕ ತರಬೇತಿ ಕಾರ್ಯಕರಮ ವೀಕ್ಷಣೆ , ಚೆಸ್ ಆಟ, ಪರೀಕ್ಷೆಯ ತಯಾರಿ, ಇಂಗ್ಲಿಷ್ ಟೈಪಿಂಗ್, ಗಟ್ಟಿ ಓದು ಕಾರ್ಯಕ್ರಮ ನಡಿಯಿತು.
ಉಡುಪಿ, ಮೇ 5: ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಯಲ್ಲಿ ಮೇ 8ರಂದು ಬೆಳಗ್ಗೆ 10:30 ರಿಂದ ಮಿನಿ ಉದ್ಯೋಗ ಮೇಳ ನಡೆಯಲಿದೆ.
ಎಸೆಸೆಲ್ಸಿ, ಪಿಯುಸಿ, ಐಟಿಐ, ಬಿಕಾಂ, ಬಿಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ, 8105618291, 8105774936, 9901472710 ಹಾಗೂ 9945856670 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರದಲ್ಲಿ ಗೌರವಧನ ಆಧಾರದ ಮೇಲೆ ಯುವ ಪರಿವರ್ತಕರ ಹುದ್ದೆಯ ಕರ್ತವ್ಯ ನಿರ್ವಹಿಸಲು ಯಾವುದೇ ಪದವಿ ಅಥವಾ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ 21 ರಿಂದ 35 ವರ್ಷದೊಳಗಿನ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕನ್ನಡ ಸ್ಪಷ್ಠವಾಗಿ ಮಾತನಾಡಬಲ್ಲ, ಸಂವಹನ ಕಲೆ ಕೌಶಲ್ಯ ಹೊಂದಿರುವ ಹಾಗೂ ಸಮುದಾಯದಲ್ಲಿ ಕೆಲಸ ಮಾಡಿದವರಿಗೆ ಆದ್ಯತೆ ನೀಡಲಾಗುವುದು.
ಸ್ವ-ವಿವರ ಹಾಗೂ ಮೂಲ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಮೇ 15 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪುರ, ಮೇ 5: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದುಹೋದ ಮೊಬೈಲ್ ಫೋನ್ ಒಂದನ್ನು ಕೇಂದ್ರ ಸರ್ಕಾರದ ಸೆಂಟ್ರಲ್ ಇಕ್ವಿಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್ (CEIR) ಪೋರ್ಟಲ್ ಬಳಸಿ ಪತ್ತೆಹಚ್ಚಿರುವ ಉಡುಪಿ ಪೊಲೀಸರು, ಫೋನ್‌ನ ಮಾಲೀಕರಿಗೆ ಯಶಸ್ವಿಯಾಗಿ ಹಿಂದಿರುಗಿಸಿದ್ದಾರೆ.
ಏನಿದು ಸಿಇಐಆರ್? ಹೇಗೆ ಕೆಲಸ ಮಾಡುತ್ತದೆ?
ಸಿಇಐಆರ್ ದೂರು ನೀಡುವ ಕಾರ್ಯವಿಧಾನ ಕದ್ದ ಸಾಧನಗಳನ್ನು ನಿಷ್ಕ್ರಿಯಗೊಳಿಸುತ್ತದೆ. ಅವುಗಳನ್ನು ಬಳಸಲು ಪ್ರಯತ್ನಿಸಿದಾಗ ಪೊಲೀಸರಿಗೆ ಎಚ್ಚರಿಕೆ ನೀಡುತ್ತದೆ. CEIR ಪೋರ್ಟಲ್‌ನಲ್ಲಿ ಸಾಧನ ಮತ್ತು ಅದರ ಮಾಲೀಕರ ಎಲ್ಲಾ ವಿವರಗಳನ್ನು ಒದಗಿಸಿದ ನಂತರ, ಮೊಬೈಲ್ ಸ್ವಯಂಚಾಲಿತವಾಗಿ ನಿರ್ಬಂಧಿಸಲ್ಪಡುತ್ತದೆ. ಹೊಸ ಸಿಮ್ ಕಾರ್ಡ್ ಅನ್ನು ಸೇರಿಸುವ ಮೂಲಕ ಸಾಧನವನ್ನು ಬಳಸುವ ಯಾವುದೇ ಪ್ರಯತ್ನವು ಹೊಸ ಬಳಕೆದಾರರ ಸಂಖ್ಯೆ ಮತ್ತು ಸ್ಥಳ ಮತ್ತು ಇತರ ವಿವರಗಳ ಬಗ್ಗೆ ಎಚ್ಚರಿಕೆಯನ್ನು ನೀಡುತ್ತದೆ.
ದೂರು ಬಂದ ಬಳಿಕ ಮೊದಲು ಪೊಲೀಸರು ಆ ಸಂಖ್ಯೆಗೆ ಮರಳಿ ಕರೆ ಮಾಡುತ್ತಾರೆ. ಪ್ರತಿಕ್ರಿಯೆ ನೀಡದಿದ್ದಲ್ಲಿ ಮೊಬೈಲ್ ಫೋನ್ ಸಕ್ರಿಯಗೊಳಿಸುತ್ತಾರೆ. ಇದು ಕದ್ದ ಅಥವಾ ಕಳೆದು ಹೋದ ಫೋನ್ ಎಂದು ತಿಳಿಸುತ್ತಾರೆ. ಮತ್ತು ಅದನ್ನು ಹಿಂತಿರುಗಿಸಬೇಕು ಇಲ್ಲಾ ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎನ್ನುವ ಎಚ್ಚರಿಕೆ ನೀಡುತ್ತಾರೆ. ಇದು ರಿಸೀವರ್ ಬಳಸಿದ ಸಿಮ್ ಕಾರ್ಡ್ ಎಲ್ಲಾ ವಿವರಗಳನ್ನು ಒದಗಿಸುತ್ತದೆ ಮತ್ತು ಪೊಲೀಸರು ಫೋನ್ ಸಿಕ್ಕ ವ್ಯಕ್ತಿ ಜೊತೆ ಸಂಪರ್ಕದಲ್ಲಿರಲು ಸುಲಭವಾಗುತ್ತದೆ. ಇಂತಹ ಪ್ರಕರಣದಲ್ಲಿ ಖುದ್ದಾಗಿ ಬಂದು ಫೋನ್ ನೀಡುವುದಿಲ್ಲ ಬದಲಿಗೆ ಮೊಬೈಲ್‌ಗಳನ್ನು ಕೊರಿಯರ್‌ಗಳ ಮೂಲಕ ಪೊಲೀಸರಿಗೆ ಹಿಂತಿರುಗಿಸುತ್ತಾರೆ.
ಮೊಬೈಲ್ ಕಳೆದುಹೋದವರು ದೂರು ದಾಖಲಿಸುವುದು ಹೇಗೆ?
ಕಳೆದುಹೋದ ಅಥವಾ ಕದ್ದ ಮೊಬೈಲ್ ಫೋನ್‌ಗಳ ಬಗ್ಗೆ ದೂರು ದಾಖಲಿಸಲು ನಾಗರಿಕರು ಈ ಕೆಳಗಿನ ಹಂತಗಳನ್ನು ಅನುಸರಿಸಬಹುದು:
CEIR ಪೋರ್ಟಲ್‌ಗೆ ಭೇಟಿ: www.ceir.gov.in ವೆಬ್‌ಸೈಟ್‌ಗೆ ಭೇಟಿ ನೀಡಿ.
ದೂರು ದಾಖಲಾತಿ: “Block/Lost Mobile” ಆಯ್ಕೆಯನ್ನು ಆರಿಸಿ, ಅಗತ್ಯವಿರುವ ಮಾಹಿತಿಯಾದ ಫೋನ್‌ನ IMEI ಸಂಖ್ಯೆ, ಮೊಬೈಲ್ ಸಂಖ್ಯೆ, ಕಳೆದ ಸ್ಥಳದ ವಿವರಗಳು ಮತ್ತು ಆಧಾರ್ ಕಾರ್ಡ್ ವಿವರಗಳನ್ನು ಭರ್ತಿ ಮಾಡಿ.
ಕರ್ನಾಟಕ ರಾಜ್ಯ ಪೊಲೀಸ್ (KSP) ಆ್ಯಪ್: ಕರ್ನಾಟಕದ ನಾಗರಿಕರು KSP ಆ್ಯಪ್‌ನಲ್ಲಿ “e-Lost” ವಿಭಾಗದ ಮೂಲಕ ದೂರು ದಾಖಲಿಸಬಹುದು. ದೂರು ದಾಖಲಾದ ನಂತರ, CEIR ಪೋರ್ಟಲ್ ಮೂಲಕ ಫೋನ್‌ನ IMEI ಸಂಖ್ಯೆಯನ್ನು ತಡೆಯಲಾಗುತ್ತದೆ ಮತ್ತು ಟ್ರ್ಯಾಕಿಂಗ್ ಪ್ರಕ್ರಿಯೆ ಆರಂಭವಾಗುತ್ತದೆ.
ಸ್ಥಳೀಯ ಪೊಲೀಸ್ ಠಾಣೆ: ದೂರನ್ನು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದಾಖಲಿಸಿ, ಇದರಿಂದ ಪೊಲೀಸರು CEIR ವ್ಯವಸ್ಥೆಯ ಮೂಲಕ ಫೋನ್ ಪತ್ತೆಗೆ ಕ್ರಮ ಕೈಗೊಳ್ಳಬಹುದು.
ಈ ಪೋರ್ಟಲ್ ಬಳಸಲು ಸಿಮ್ ಕರ್ನಾಟಕದಲ್ಲಿ ನೋಂದಣಿಯಾಗಿರಬೇಕು
ಈ ವ್ಯವಸ್ಥೆ ಬಳಸಿಕೊಳ್ಳಲು ಮೊಬೈಲ್ ಮತ್ತು ಸಿಮ್ ಅನ್ನು ಕರ್ನಾಟಕದಲ್ಲಿ ನೋಂದಾಯಿಸಿಕೊಳ್ಳಬೇಕು. ಇದರಿಂದ ಕಳೆದು ಹೋದ ಮೊಬೈಲ್ ಅನ್ನು ದೇಶದ ಯಾವುದೇ ಭಾಗಕ್ಕೆ ತೆಗೆದುಕೊಂಡ ಹೋದರೂ ಪತ್ತೆಹಚ್ಚಬಹುದು. ಹಿಂದೆ ರಾಜ್ಯದಲ್ಲಿ ಕಳೆದು ಹೋದ ಮೊಬೈಲ್ಗಗಳನ್ನು ಪತ್ತೆಹಚ್ಚುವುದು ಕಷ್ಟಕರವಾಗಿತ್ತು. ಈಗ ಅದು ಸುಲಭವಾದ ಮಾರ್ಗವಾಗಿದೆ ಎಂದು ಐಪಿಎಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಕಲಬುರಗಿ: ಮತ್ತೆ ರಾಜ್ಯದಲ್ಲಿ ನೀಟ್ ಪರೀಕ್ಷೆಯಲ್ಲಿ ಅಧಿಕಾರಿಗಳು ವಿದ್ಯಾರ್ಥಿ ಧರಿಸಿದ್ದ ಜನಿವಾರ ತೆಗೆಸಿರುವ ಘಟನೆ ಕಲಬುರಗಿಯ ಖಾಸಗಿ ಶಾಲೆಯಲ್ಲಿ ನಡೆದಿದೆ.
ಇಂದು ರಾಜ್ಯದಾದ್ಯಂತ ನೀಟ್ ಪರೀಕ್ಷೆ ನಡೆದಿದ್ದು, ಶ್ರೀಪಾದ್ ಪಾಟೀಲ್ ನೀಟ್ ಪರೀಕ್ಷೆಗೆ ಹಾಜರಾಗಿದ್ದ. ಶ್ರೀಪಾದ್ ಪರೀಕ್ಷಾ ಕೇಂದ್ರದ ಒಳಗೆ ಹೋಗುವಾಗ ಅಧಿಕಾರಿಗಳು ಜನಿವಾರ ತೆಗೆದು ಬರುವಂತೆ ಸೂಚಿಸಿದ್ದಾರೆ.
ಈ ವೇಳೆ ಶ್ರೀಪಾದ್ ಅಧಿಕಾರಿಗಳ ಸೂಚನೆಯಂತೆ ಜನಿವಾರ ತೆಗೆದು ಪರೀಕ್ಷೆಗೆ ಹಾಜರಾಗಿದ್ದಾನೆ. ಈ ಘಟನೆಯನ್ನು ಖಂಡಿಸಿ ಪರೀಕ್ಷಾ ಕೇಂದ್ರದ ಮುಂದೆ ಬ್ರಾಹ್ಮಣ ಸಮಾಜದವರು ಪ್ರತಿಭಟನೆ ನಡೆಸಿದ್ದಾರೆ. ಜನಿವಾರ ತೆಗೆಸಿದ ಅಧಿಕಾರಿಯನ್ನ ನಮ್ಮ ವಶಕ್ಕೆ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಪರೀಕ್ಷಾ ಕೇಂದ್ರದ ಎದುರು ಟೈರ್ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ಹಾಕಿದ್ದು, ಪ್ರತಿಭಟನೆ ಎಬಿವಿಪಿ ಕಾರ್ಯಕರ್ತರು ಸಾಥ್ ನೀಡಿದರು. ಕಳೆದ ಏಪ್ರಿಲ್ ಸಿಇಟಿ ಪರೀಕ್ಷೆಯಲ್ಲೂ ಇಂತಹದೊಂದು ಪ್ರಕರಣ ನಡೆದಿದ್ದು, ಇದು ರಾಜ್ಯದಾದ್ಯಂತ ಬ್ರಾಹ್ಮಣ ಸಮಾಜದ ಆಕ್ರೋಶಕ್ಕೆ ಕಾರಣವಾಗಿತ್ತು.
ಗಂಗೊಳ್ಳಿ: 2024-25ನೇ ಸಾಲಿನ ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಗಂಗೊಳ್ಳಿಯ ಸರಸ್ವತಿ ಪದವಿ ಪೂರ್ವ ಕಾಲೇಜಿನ ಕನ್ನಡ ಮಾಧ್ಯಮ ಪ್ರೌಢಶಾಲೆ ಶೇ.95.83 ಫಲಿತಾಂಶ ದಾಖಲಿಸಿದ್ದಾರೆ.
ವಿದ್ಯಾರ್ಥಿಗಳಾದ ನಿಸರ್ಗ 597 ಅಂಕಗಳನ್ನು ಪಡೆದು ಶಾಲೆಗೆ ಅಗ್ರಸ್ಥಾನಿಯಾಗಿ ಮೂಡಿ ಬಂದಿದ್ದಾಳೆ. ಮನೀಷಾ (588), ಸನ್ವಿತಾ (580) ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.
ಪರೀಕ್ಷೆಗೆ ಹಾಜರಾದ 48 ವಿದ್ಯಾರ್ಥಿಗಳಲ್ಲಿ 46 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, 9 ಮಂದಿ ವಿದ್ಯಾರ್ಥಿಗಳು ವಿಶಿಷ್ಠ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ವಿದ್ಯಾರ್ಥಿಗಳಾದ ಸಮೀಕ್ಷಾ 586 ಅಂಕಗಳನ್ನು ಪಡೆದು ಶಾಲೆಗೆ ಅಗ್ರಸ್ಥಾನಿಯಾಗಿ ಮೂಡಿ ಬಂದಿದ್ದಾಳೆ. ಆರ್. ರಂಜಿತಾ 576 ಅಂಕ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.
ಪರೀಕ್ಷೆಗೆ ಹಾಜರಾದ 38 ವಿದ್ಯಾರ್ಥಿಗಳ ಪೈಕಿ 34 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, 7 ವಿದ್ಯಾರ್ಥಿಗಳು ವಿಶಿಷ್ಠ ದರ್ಜೆಯಲ್ಲಿ, 18 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು 9 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
Udupi: Milagres College Kallianpur, National Service Scheme (NSS) successfully organized a blood donation camp on April 29, 2025. The event commenced with an inaugural program held at the Audio Visual Hall, where esteemed guests and faculty members gathered to emphasize the importance of blood donation.
Dr. Deepika, Associate Professor, Department of IHBT, KMC Manipal, delivered the inaugural address, enlightening the audience about the eligibility criteria for donors, health benefits, and common blood-related issues. Mr. Sathish Salian, President of Abhayahasta Charitable Trust, Udupi, graced the occasion as the chief guest, acknowledging the organizers’ efforts and the significance of the blood donation camp.
Blood Donation Drive at Milagres College Kallianpur
Dr. Jayaram Shettigar, Staff Secretary and Head of the Department of History, highlighted the importance of blood donation, citing inspiring examples to motivate the students. Mrs. Sophia Dias, Vice Principal, delivered a presidential remark, encouraging students to participate in this life-saving initiative.
The program was attended by notable faculty members, including Mrs. Shylet Mathias, IQAC Coordinator, Mrs. Clara Menezes, Convenor of Youth Red Cross, Mr. Ganesh Nayak, and Mrs. Shubalatha, NSS Programme Officers, along with other teaching and administrative staff.
First-year B.Com students actively participated in the program, with Ms. Amrutha, delivered a warm welcome address and Ms. Thanisha, proposed vote of thanks. Mr. Asthik, also a first-year B.Com student, hosted the program with confidence and poise.
The blood donation camp was a resounding success, with a total of 49 units of blood collected. The NSS team deserves commendation for their meticulous planning and execution, making this event a testament to the college’s commitment to social responsibility and community service.
ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳದ ಬಳಿಯ ನಗರಬೆಟ್ಟ ಗ್ರಾಮದ ಆಕ್ಸ್‌ಫರ್ಡ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ಅಕೀಲ್ ಅಹ್ಮದ್ ನದಾಫ್, ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.100 ಅಂಕಗಳನ್ನು ಗಳಿಸಿ, ರಾಜ್ಯದಲ್ಲಿ 22 ವಿದ್ಯಾರ್ಥಿಗಳೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಶಿಕ್ಷಕ ದಂಪತಿಯ ಏಕೈಕ ಮಗನಾದ ಅಕೀಲ್, ತನ್ನ ಶೈಕ್ಷಣಿಕ ಜೀವನದುದ್ದಕ್ಕೂ ಉತ್ತಮ ವಿದ್ಯಾರ್ಥಿ . 8ನೇ ತರಗತಿಯವರೆಗೆ ಅಲಮಟ್ಟಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ ಓದಿದ ನಂತರ, ಈ ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಗೆ ಸೇರಿದರು.
ಅಕೀಲ್‌ರ ತಂದೆ ನಾಸಿರ್ ಅಲಿ, ಮಡಿನಾಳದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿದ್ದಾರೆ, ತಾಯಿ ಶೆಹನಾಜ್ ಬೇಗಂ, ಮುದ್ದೇಬಿಹಾಳದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿದ್ದಾರೆ.
ತನ್ನ ಯಶಸ್ಸಿಗೆ ಸರಿಯಾದ ಮನೋಭಾವ ಮತ್ತು ಸ್ಮಾರ್ಟ್ ಅಧ್ಯಯನವೇ ಕಾರಣ ಎಂದು ಅಕೀಲ್ ಹೇಳಿದ್ದಾರೆ. “ನನಗೆ ಉತ್ತಮ ಶಿಕ್ಷಕರ ಮಾರ್ಗದರ್ಶನ, ಪರೀಕ್ಷೆಗೆ ಸಂಬಂಧಿಸಿದ ತರಬೇತಿ ಮತ್ತು ಪೋಷಕರಿಂದ ಪ್ರೋತ್ಸಾಹ ಸಿಕ್ಕಿತು,” ಎಂದು ಅವರು ತಿಳಿಸಿದ್ದಾರೆ. ಭವಿಷ್ಯದಲ್ಲಿ ವಿಜ್ಞಾನಿಯಾಗಿ ಸಮಾಜದ ಸಮಸ್ಯೆಗಳನ್ನು ಬಗೆಹರಿಸುವ ಗುರಿಯನ್ನು ಅಕೀಲ್ ಹೊಂದಿದ್ದಾರೆ. ಅಕೀಲ್‌ರ ತಂದೆ, ತಮ್ಮ ಮಗ ಗಂಭೀರ ಮತ್ತು ಕಠಿಣ ಪರಿಶ್ರಮಿ ವಿದ್ಯಾರ್ಥಿಯಾಗಿದ್ದು, ತನ್ನ ವಯಸ್ಸಿಗಿಂತ ಮೀರಿದ ಪ್ರಬುದ್ಧತೆಯನ್ನು ಹೊಂದಿದ್ದಾನೆ ಎಂದು ವಿವರಿಸಿದ್ದಾರೆ.
ಶಾಲಾ ಸಮಿತಿಯ ಅಧ್ಯಕ್ಷ ಎಂ.ಎಸ್. ಪಾಟೀಲ್, ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್ ಮತ್ತು ಪ್ರಾಂಶುಪಾಲ ಇಸ್ಮಾಯಿಲ್ ಮನಿಯಾರ್, ವಿದ್ಯಾರ್ಥಿ, ಅವನ ಪೋಷಕರು ಮತ್ತು ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.