Category: More News

  • ಉಡುಪಿ: ಆನ್‌ಲೈನ್ ವಂಚನೆ – 4.92 ಲಕ್ಷ ರೂ. ಕಳೆದುಕೊಂಡ ಮಹಿಳೆ, ಪ್ರಕರಣ ದಾಖಲು

    ಉಡುಪಿ, ಜೂನ್ 06, 2025: ಉಡುಪಿಯ 26 ವರ್ಷದ ಮಹಿಳೆಯೊಬ್ಬರು ಟೆಲಿಗ್ರಾಂ ಆಪ್‌ನಲ್ಲಿ ಅಪರಿಚಿತ ವ್ಯಕ್ತಿಗಳಿಂದ ವಂಚನೆಗೊಳಗಾದ ಘಟನೆ ವರದಿಯಾಗಿದೆ. ದಿನಾಂಕ 01/06/2025 ರಂದು, ಅಪರಿಚಿತರು ಪಿರ್ಯಾದಿದಾರರನ್ನು ‘K&K GROUP’ ಎಂಬ ಗ್ರೂಪ್‌ಗೆ ಸೇರ್ಪಡೆ ಮಾಡಿ, ಕೆಲವು ಟಾಸ್ಕ್‌ಗಳನ್ನು ನೀಡಿ, ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಅಧಿಕ ಲಾಭ ಗಳಿಸಬಹುದೆಂದು ನಂಬಿಸಿದ್ದಾರೆ.

    ಅದರಂತೆ, ಪಿರ್ಯಾದಿದಾರರು ಅಪರಿಚಿತರು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ದಿನಾಂಕ 01/06/2025 ರಿಂದ 04/06/2025 ರವರೆಗೆ ಹಂತಹಂತವಾಗಿ ಒಟ್ಟು 4,92,477 ರೂಪಾಯಿಗಳನ್ನು ವರ್ಗಾವಣೆ ಮಾಡಿದ್ದಾರೆ. ಆದರೆ, ಅಪರಿಚಿತ ವ್ಯಕ್ತಿಗಳು ಈ ತನಕ ಹೂಡಿಕೆ ಮಾಡಿದ ಹಣವನ್ನಾಗಲೀ ಅಥವಾ ಭರವಸೆ ನೀಡಿದ ಲಾಭಾಂಶವನ್ನಾಗಲೀ ಮರಳಿಸದೇ ವಂಚಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

    ಈ ಘಟನೆಗೆ ಸಂಬಂಧಿಸಿದಂತೆ ಉಡುಪಿ ಸೆನ್‌ ಅಪರಾಧ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 25/2025ರಡಿ ಕಲಂ 66(ಸಿ), 66(ಡಿ) ಐ.ಟಿ. ಆಕ್ಟ್ ಮತ್ತು 318(4) ಬಿಎನ್‌ಎಸ್‌ ರಂತೆ ಪ್ರಕರಣ ದಾಖಲಾಗಿದೆ.

  • ಗೃಹರಕ್ಷಕದಳ ಹುದ್ದೆ : ಅರ್ಜಿ ಆಹ್ವಾನ

    ಉಡುಪಿ, ಜೂನ್ 03 : ಜಿಲ್ಲಾ ಗೃಹರಕ್ಷಕದಳ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವ 19 ರಿಂದ 45 ವರ್ಷದ ಒಳಗಿನ, ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಜಿಲ್ಲಾ ವ್ಯಾಪ್ತಿಯ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಜೂನ್ 14 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಗ್ನಿಶಾಮಕ ಕಚೇರಿ ಆವರಣದಲ್ಲಿರುವ ಜಿಲ್ಲಾ ಗೃಹರಕ್ಷಕದಳ ಕಚೇರಿ ದೂರವಾಣಿ ಸಂಖ್ಯೆ 0820-2533650 ಅಥವಾ ತಾಲೂಕು ಘಟಕಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಗೃಹರಕ್ಷಕದಳದ ಜಿಲ್ಲಾ ಕಮಾಂಡೆಂಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಉಪನ್ಯಾಸಕರ ಹುದ್ದೆ : ಅರ್ಜಿ ಆಹ್ವಾನ

    ಉಡುಪಿ, ಜೂನ್ 05, 2025: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಕಾರ್ಕಳ ತಾಲೂಕು ಮಿಯ್ಯಾರು ಕಾಲೇಜಿನಲ್ಲಿ ಖಾಲಿ ಇರುವ ಕನ್ನಡ, ಆಂಗ್ಲಭಾಷೆ, ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ಹಾಗೂ ಬ್ರಹ್ಮಾವರ ತಾಲೂಕು ಆರೂರು ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿ ಖಾಲಿ ಇರುವ ಕನ್ನಡ, ಗಣಿತ, ಜೀವಶಾಸ್ತ್ರ ಮತ್ತು ಗಣಕ ವಿಜ್ಞಾನ ವಿಷಯಗಳ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಜೂನ್ 6 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಮಿಯ್ಯಾರು ಕಾಲೇಜು ಪ್ರಾಂಶುಪಾಲರು ಮೊ.ನಂ: 7337795963 ಹಾಗೂ ಆರೂರು ಕಾಲೇಜು ಪ್ರಾಂಶುಪಾಲರು ಮೊ.ನಂ: 7012988065 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

  • ಐಪಿಎಲ್ 2025: ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಐತಿಹಾಸಿಕ ಗೆಲುವು

    ಅಹಮದಾಬಾದ್, ಜೂನ್ 03, 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತನ್ನ 17 ವರ್ಷಗಳ ಐಪಿಎಲ್ ಪಯಣದಲ್ಲಿ ಮೊದಲ ಬಾರಿಗೆ ಐತಿಹಾಸಿಕ ಗೆಲುವು ಸಾಧಿಸಿ, 2025ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ರೋಫಿಯನ್ನು ಎತ್ತಿಹಿಡಿದಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ವಿರುದ್ಧ ರಾಜತ್ ಪಾಟಿದಾರ್ ನಾಯಕತ್ವದ ಆರ್‌ಸಿಬಿ ರೋಚಕ ಗೆಲುವು ಸಾಧಿಸಿತು.

    ಪಂದ್ಯದ ವಿವರ:

    ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 190/9 ರನ್‌ಗಳನ್ನು ಕಲೆಹಾಕಿತು. ವಿರಾಟ್ ಕೊಹ್ಲಿ 43 ರನ್‌ಗಳ (35 ಎಸೆತ) ಜೊತೆಗೆ ತಂಡದ ಪ್ರಮುಖ ಸ್ಕೋರರ್ ಆಗಿದ್ದರು. ಆದರೆ, ಪಂಜಾಬ್ ಕಿಂಗ್ಸ್‌ನ ಆರಂಭಿಕ ಬೌಲರ್‌ಗಳಾದ ಅರ್ಶದೀಪ್ ಸಿಂಗ್ ಮತ್ತು ಕೈಲ್ ಜೇಮಿಸನ್ ತಲಾ ಮೂರು ವಿಕೆಟ್‌ಗಳನ್ನು ಕಿತ್ತು ಆರ್‌ಸಿಬಿಯನ್ನು 190ಕ್ಕೆ ಕಟ್ಟಿಹಾಕಿದರು.
    ಎರಡನೇ ಇನಿಂಗ್ಸ್‌ನಲ್ಲಿ, ಪಂಜಾಬ್ ಕಿಂಗ್ಸ್ 10 ಓವರ್‌ಗಳಲ್ಲಿ 81/3 ರನ್‌ಗೆ ತಲುಪಿತಾದರೂ, ಆರ್‌ಸಿಬಿಯ ಬಿಗುವಿನ ಬೌಲಿಂಗ್ ಮತ್ತು ಕ್ಷೇತ್ರರಕ್ಷಣೆಯಿಂದಾಗಿ ಅವರು ಗುರಿಯನ್ನು ಮುಟ್ಟಲು ವಿಫಲರಾದರು. ಜೋಶ್ ಹ್ಯಾಜಲ್‌ವುಡ್ ಮತ್ತು ಸುಯಶ್ ಶರ್ಮಾ ಅವರ ಶಿಸ್ತಿನ ಬೌಲಿಂಗ್ ಆರ್‌ಸಿಬಿಗೆ ಗೆಲುವಿನ ಹಾದಿಯನ್ನು ಸುಗಮಗೊಳಿಸಿತು.

    ತಂಡದ ಶಕ್ತಿ:

    ಈ ಋತುವಿನಲ್ಲಿ ಆರ್‌ಸಿಬಿ ಅತ್ಯಂತ ಸಮತೋಲಿತ ತಂಡವಾಗಿತ್ತು. ಫಿಲ್ ಸಾಲ್ಟ್‌ರ ಆಕ್ರಮಣಕಾರಿ ಆರಂಭ, ವಿರಾಟ್ ಕೊಹ್ಲಿಯ ಸ್ಥಿರತೆ, ಮತ್ತು ಜಿತೇಶ್ ಶರ್ಮಾ ಅವರ ವಿಧ್ವಂಸಕ ಫಿನಿಶಿಂಗ್ ಆಟದಿಂದ ತಂಡ ಗಮನ ಸೆಳೆಯಿತು. ಬೌಲಿಂಗ್‌ನಲ್ಲಿ ಜೋಶ್ ಹ್ಯಾಜಲ್‌ವುಡ್ ಮತ್ತು ಸುಯಶ್ ಶರ್ಮಾ ಕೀಲಿಕೈ ಆಟಗಾರರಾಗಿದ್ದರು. ತಂಡದ ಒಗ್ಗಟ್ಟು ಮತ್ತು ರಾಜತ್ ಪಾಟಿದಾರ್‌ರ ಚಾಣಾಕ್ಷ ನಾಯಕತ್ವವು ಆರ್‌ಸಿಬಿಯನ್ನು ಈ ಗೆಲುವಿಗೆ ಕೊಂಡೊಯಿತು ಎಂದು ಮಾಜಿ ಆಟಗಾರ ಸುರೇಶ್ ರೈನಾ ತಿಳಿಸಿದ್ದಾರೆ.

    ವಿರಾಟ್ ಕೊಹ್ಲಿಯ ಕನಸು ನನಸು:

    ವಿರಾಟ್ ಕೊಹ್ಲಿಗೆ ಐಪಿಎಲ್ ಟ್ರೋಫಿಯ ಕೊರತೆ ಒಂದು ದೊಡ್ಡ ಕನಸಾಗಿತ್ತು. ಈ ಗೆಲುವಿನೊಂದಿಗೆ, ಅವರ ಟ್ರೋಫಿ ಕ್ಯಾಬಿನೆಟ್ ಪೂರ್ಣಗೊಂಡಿದೆ ಎಂದು ಎಕ್ಸ್‌ನಲ್ಲಿ ಅಭಿಮಾನಿಗಳು ಹೇಳುತ್ತಿದ್ದಾರೆ. “ವಿಜಯೀ ಭವ!” ಎಂಬ ಆರ್‌ಸಿಬಿಯ ಟ್ವೀಟ್ ಈ ಗೆಲುವಿನ ಭಾವನೆಯನ್ನು ಸಾರಿದೆ.

    ತೀರ್ಮಾನ:

    ಆರ್‌ಸಿಬಿಯ ಈ ಗೆಲುವು ಕೇವಲ ಒಂದು ಟ್ರೋಫಿಯಲ್ಲ, ಬದಲಾಗಿ ದಶಕಗಳ ಕಾಲದ ಅಭಿಮಾನಿಗಳ ನಂಬಿಕೆ ಮತ್ತು ಒಗ್ಗಟ್ಟಿನ ಫಲ. “ಈ ಸಾಲ ಕಪ್ ನಮ್ದೇ” ಎಂಬ ಕನ್ನಡ ಘೋಷಣೆ ಈಗ ನಿಜವಾಗಿದೆ, ಮತ್ತು ಬೆಂಗಳೂರು ತಂಡದ ಈ ಐತಿಹಾಸಿಕ ಕ್ಷಣವನ್ನು ರಾಷ್ಟ್ರವ್ಯಾಪಿ ಆಚರಿಸುತ್ತಿದೆ.

  • ದೆಹಲಿ: ಬ್ಯಾಂಕಿಂಗ್ ವಂಚನೆ ಮತ್ತು ಸೆಕ್ಸ್‌ಟಾರ್ಷನ್ ಜಾಲದ ಪಾನ್-ಇಂಡಿಯಾ ಸೈಬರ್ ಕ್ರೈಂ ಸಿಂಡಿಕೇಟ್; 15 ಮಂದಿ ಬಂಧನ

    ದೆಹಲಿ, ಜೂನ್ 03, 2025: ದೆಹಲಿ ಪೊಲೀಸರು ದೇಶಾದ್ಯಂತ ವ್ಯಾಪಿಸಿರುವ ದೊಡ್ಡ ಪ್ರಮಾಣದ ಬ್ಯಾಂಕಿಂಗ್ ವಂಚನೆ ಮತ್ತು ಸೆಕ್ಸ್‌ಟಾರ್ಷನ್ ಜಾಲವನ್ನು ಒಳಗೊಂಡಿರುವ ಪಾನ್-ಇಂಡಿಯಾ ಸೈಬರ್ ಕ್ರೈಂ ಸಿಂಡಿಕೇಟ್‌ನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 15 ಆರೋಪಿಗಳನ್ನು ಬಂಧಿಸಲಾಗಿದೆ. ಈ ಜಾಲವು ನಕಲಿ ಸಾಲ ಕರೆ ಕೇಂದ್ರಗಳು ಮತ್ತು ಸೂಕ್ಷ್ಮವಾಗಿ ಯೋಜಿಸಲಾದ ಸೆಕ್ಸ್‌ಟಾರ್ಷನ್ ರಾಕೆಟ್ ಸೇರಿದಂತೆ ಬಹುವಿಧದ ರಚನೆಯ ಮೂಲಕ ಕಾರ್ಯನಿರ್ವಹಿಸುತ್ತಿತ್ತು.

    ದೆಹಲಿ ಪೊಲೀಸರ ಕ್ರೈಂ ಬ್ರಾಂಚ್ ತಂಡವು ಈ ಸಿಂಡಿಕೇಟ್‌ನ ವಿರುದ್ಧ ದಾಳಿ ನಡೆಸಿ, ರಾಜಸ್ಥಾನ, ದೆಹಲಿ, ಮತ್ತು ಉತ್ತರ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿತು. ಈ ಕಾರ್ಯಾಚರಣೆಯಲ್ಲಿ ಒಟ್ಟು 5 ಕೋಟಿ ರೂಪಾಯಿಗಳ ನಗದು ವಶಪಡಿಸಿಕೊಳ್ಳಲಾಗಿದ್ದು, ಬ್ಯಾಂಕಿಂಗ್ ವಂಚನೆ ಮತ್ತು ಸೆಕ್ಸ್‌ಟಾರ್ಷನ್‌ಗೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಸಾರ್ವಜನಿಕರನ್ನು ಗೊಂದಲಕ್ಕೀಡು ಮಾಡಿ, ಭಯೋತ್ಪಾದಕ ಕರೆಗಳ ಮೂಲಕ ಹಣವನ್ನು ಕಿತ್ತುಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ.

    ಡಿಸಿಪಿ ಕ್ರೈಂ ಅಡಿತ್ಯ ಗೌತಮ್ ಮಾತನಾಡಿ, “ನಕಲಿ ಸಾಲ ಕರೆ ಕೇಂದ್ರಗಳ ಮೂಲಕ ಆರೋಪಿಗಳು ಜನರಿಗೆ ಆಕರ್ಷಕ ಕೊಡುಗೆಗಳನ್ನು ನೀಡಿ, ವಂಚನೆಗೆ ಒಳಪಡಿಸುತ್ತಿದ್ದರು. ಇದರ ಜೊತೆಗೆ, ಸೆಕ್ಸ್‌ಟಾರ್ಷನ್ ರಾಕೆಟ್‌ನಲ್ಲಿ ಆರೋಪಿಗಳು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪ್ರೊಫೈಲ್‌ಗಳನ್ನು ರಚಿಸಿ, ಬಲೆಗೆ ಬೀಳಿಸಿ ಹಣ ಕಿತ್ತುಕೊಳ್ಳುತ್ತಿದ್ದರು,” ಎಂದು ತಿಳಿಸಿದ್ದಾರೆ. ಈ ಜಾಲವು ದೇಶಾದ್ಯಂತ ಹಲವಾರು ಸೈಬರ್ ಕ್ರೈಂ ದೂರುಗಳಿಗೆ ಸಂಬಂಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ತನಿಖೆಯ ಸಂದರ್ಭದಲ್ಲಿ, ಆರೋಪಿಗಳಿಂದ ಮೊಬೈಲ್ ಫೋನ್‌ಗಳು, ಎಟಿಎಂ ಕಾರ್ಡ್‌ಗಳು, ಮತ್ತು ಇತರ ಡಿಜಿಟಲ್ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಜಾಲವು ರಾಜ್ಯಗಳ ಗಡಿಯಾಚೆಗಿನ ಸಂಘಟಿತ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ. ಪೊಲೀಸರು ಈ ಜಾಲದ ಮೂಲ ಕೇಂದ್ರವನ್ನು ಗುರುತಿಸಲು ಮತ್ತು ಇತರ ಆರೋಪಿಗಳನ್ನು ಬಂಧಿಸಲು ತನಿಖೆಯನ್ನು ಮುಂದುವರೆಸಿದ್ದಾರೆ.

  • ತೋಟಗಾರಿಕೆ ಇಲಾಖೆಯ ಯೋಜನೆಯಡಿ ಸಹಾಯಧನ : ಅರ್ಜಿ ಆಹ್ವಾನ

    ಉಡುಪಿ, ಜೂನ್ 02 : ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕುಂದಾಪುರ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ ಲಭ್ಯವಿದ್ದು, ಆಸಕ್ತ ರೈತರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಪ್ರಸಕ್ತ ಸಾಲಿನ ವಿವಿಧ ಯೋಜನೆಗಳಡಿ ರೈತರಿಗೆ ಕಾಳುಮೆಣಸು, ಅನಾನಸ್ಸು, ಅಂಗಾಂಶಬಾಳೆ, ಅಪ್ರಧಾನ ಹಣ್ಣುಗಳಾದ ರಾಂಬೂಟಾನ್, ಮ್ಯಾಂಗೋಸ್ಟೀನ್ ಮತ್ತು ಡ್ರಾ್ಯಗನ್ ಫ್ರೂಟ್ ತೋಟಗಳ ಸ್ಥಾಪನೆಗೆ ಶೇ. 40 ರ ಸಹಾಯಧನ, ನೀರು ಸಂಗ್ರಹಣ ಘಟಕ ನಿರ್ಮಾಣಕ್ಕೆ, ಗರಿಷ್ಠ 0.75 ಲಕ್ಷ ರೂ.ಗಳ ಸಹಾಯಧನ, ವಿವಿಧ ತೋಟಗಾರಿಕೆ ಬೆಳೆಗಳಿಗೆ ಹಾನಿಯುಂಟು ಮಾಡುವ ರೋಗ/ಕೀಟಗಳ ನಿಯಂತ್ರಣಕ್ಕಾಗಿ ಸಸ್ಯ ಸಂರಕ್ಷಣಾ ಔಷಧಿಗಳಿಗೆ ಪ್ರತಿ ಹೆಕ್ಟೇರಿಗೆ 1,500 ಹಾಗೂ ಅಡಿಕೆ ತೋಟ ಹೊಂದಿರುವ ರೈತರಿಗೆ ಅಡಿಕೆ ಸಂರಕ್ಷಣೆ/ ಒಣಗಿಸಲು ಸೋಲಾರ್ ಶೀಟ್ ಖರೀದಿಗೆ ಶೇ.40 ರ ಸಹಾಯಧನ ಲಭ್ಯವಿದೆ.

    ತೋಟಗಾರಿಕೆ ಬೆಳೆಗಳ ಪ್ರಾಥಮಿಕ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಶೇ.40 ರ ದರದಲ್ಲಿ (ಗರಿಷ್ಠ 12.25 ಲಕ್ಷಗಳವರೆಗೆ), ಪ್ಯಾಕ್ ಹೌಸ್ಗಳ ನಿರ್ಮಾಣಕ್ಕೆ ಗರಿಷ್ಠ 2.40 ಲಕ್ಷಗಳವರೆಗೆ ಶೇ.50 ರ ವರೆಗೆ ಹಾಗೂ ರೈತರ ಯಾಂತ್ರೀಕರಣ ಅವಶ್ಯಕತೆಗೆ 20 hಠಿ ಗಿಂತ ಕಡಿಮೆ ಸಾಮರ್ಥ್ಯದ ಟ್ರ್ಯಾಕ್ಟರ್ ಖರೀದಿಗೆ ರೂ. 1.6 ರಿಂದ 2.45 ಲಕ್ಷ ರೂ. ವರೆಗೆ ಸಹಾಯಧನ ಲಭ್ಯವಿದೆ.

    ಕೃಷಿ ಯಾಂತ್ರೀಕರಣ ಉಪಅಭಿಯಾನ ಹಾಗೂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಗಳಡಿ ತೋಟಗಾರಿಕೆ ಯಾಂತ್ರಿಕರಣ ಕಾರ್ಯಕ್ರಮದಡಿ ಅನುಮೋದಿತ ವಿವಿಧ ಯಂತ್ರೋಪಕರಣಗಳಿಗೆ ಶೇ. 40/50 ರ ಸಹಾಯಧನ ಹಾಗೂ ದೊಡ್ಡ ಗಾತ್ರದ ನೀರು ಸಂಗ್ರಹಣಾ ಘಟಕ, ಪ್ಯಾಕಿಂಗ್ ಮತ್ತು ಸಂಗ್ರಹಣಾ ಘಟಕಗಳ ನಿರ್ಮಾಣಕ್ಕೆ ಹಾಗೂ ನೀರಿನಲ್ಲಿ ಕರಗುವ ರಸಗೊಬ್ಬರ ಮತ್ತು ಲಘುಪೋಷಕಾಂಶಗಳ ಖರೀದಿಗೆ ಸಹಾಯಧನ ಪಡೆಯಲು ಅವಕಾಶವಿದೆ.

    ತೋಟಗಾರಿಕೆ ಬೆಳೆಗಳಲ್ಲಿ ನೀರಿನ ಸಮರ್ಪಕ ಬಳಕೆಗಾಗಿ ಹನಿ ನೀರಾವರಿ /ತುಂತುರು ನೀರಾವರಿ ಅಳವಡಿಕೆಗೆ ರೈತರಿಗೆ ಶೇ.90 ರಷ್ಟು ಸಹಾಯಧನ, ಭವಿಷ್ಯದ ಬೆಳೆಯಾದ ತಾಳೆ ಬೆಳೆಗಾಗಿ ತಾಳೆಬೆಳೆ ಯೋಜನೆಯಡಿ ಹೊಸದಾಗಿ ತಾಳೆಬೆಳೆ ಪ್ರದೇಶ ವಿಸ್ತರಣೆಗೆ ಹಾಗೂ ತಾಳೆ ಬೆಳೆ ಬೆಳೆಯುವ ರೈತರಿಗೆ ಬೋರ್ವೆಲ್, ಬಾವಿ ನಿರ್ಮಿಸಿಕೊಳ್ಳಲು, ವಿದ್ಯುತ್/ಡೀಸೆಲ್ ಪಂಪ್ ಮತ್ತು ಯಂತ್ರೋಪಕರಣ ಖರೀದಿಗೆ ಸಹಾಯಧನ ಮತ್ತು ಜೇನು ಸಾಕಾಣಿಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ 2 ದಿನಗಳ ತರಬೇತಿಯೊಂದಿಗೆ ಜೇನು ಕುಟುಂಬ ಸಹಿತ ಗರಿಷ್ಠ 4 ಪೆಟ್ಟಿಗೆ ಖರೀದಿಗೆ ಶೇ.75 ರಿಂದ 90 ರ ಸಹಾಯಧನ ಪಡೆಯಬಹುದಾಗಿದೆ.

    ಮಹಾತ್ಮಾಗಾಂಧೀ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಹಾಗೂ ಪೌಷ್ಠಿಕ ತೋಟಗಳ ನಿರ್ಮಾಣಕ್ಕೆ ಅವಕಾಶವಿದ್ದು, ಈ ಯೋಜನೆಯ ಪ್ರಯೋಜನೆ ಪಡೆಯಲಿಚ್ಚಿಸುವವರು ಕೂಡಲೆ ಅರ್ಜಿ ಸಲ್ಲಿಸಿ, ಯೋಜನೆಯ ಫಲಾನುಭವಿಯಾಗಬಹುದಾಗಿದೆ.

    ಈ ಎಲ್ಲಾ ಯೋಜನೆಗಳ ಪ್ರಯೋಜನೆ ಪಡೆಯಲು ಆಸಕ್ತ ರೈತರು ಪ್ರಥಮ ಹಂತದಲ್ಲಿ ನೋಂದಣಿ ಅರ್ಜಿಯೊಂದಿಗೆ ಬೆಳೆ ನಮೂದಿಸಿರುವ ಇತ್ತೀಚಿನ ಪಹಣಿ ಪತ್ರ ಮತ್ತು ಅಗತ್ಯ ಪ್ರಮಾಣ ಪತ್ರಗಳೊಂದಿಗೆ ಇಲಾಖೆಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಇಲಾಖಾ ಮಾರ್ಗಸೂಚಿಯನುಸಾರ ಅರ್ಜಿಗಳನ್ನು ಜೇಷ್ಠತೆಯ ಆಧಾರದಲ್ಲಿ ಇಲಾಖೆ ನಿಗಧಿಪಡಿಸಿದ ಗುರಿಗೆ ಅನುಗುಣವಾಗಿ ಸಹಾಯಧನಕ್ಕೆ ಪರಿಗಣಿಸಲಾಗುವುದು ಎಂದು ಕುಂದಾಪುರ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ ರಕಟಣೆ ತಿಳಿಸಿದೆ.

  • ಕೆನರಾ ಬ್ಯಾಂಕ್‌ ನಲ್ಲಿ ಕಳ್ಳತನ: 53.31 ಕೋಟಿ ರೂ ಮೌಲ್ಯದ ಚಿನ್ನಾಭರಣ ಕಳವು..!

    ವಿಜಯಪುರ: ಕೆನರಾ ಬ್ಯಾಂಕ್‌ ನ ಸೇಫ್‌ ಲಾಕರ್‌ ಗೆ ಕನ್ನ ಹಾಕಿ ಸುಮಾರು 53.31 ಕೋಟಿ ರೂ ಮೌಲ್ಯದ ಚಿನ್ನಾಭರಣ ಮತ್ತು 5.20 ಲಕ್ಷ ರೂ. ನಗದು ಕಳ್ಳತನ ಮಾಡಿರುವ ಘಟನೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಶಾಖೆಯಲ್ಲಿ ಮೇ.24ರ ಶನಿವಾರದಂದು ನಡೆದಿದೆ.
    ಮೇ. ತಿಂಗಳಿನ ನಾಲ್ಕನೇ ವಾರದಲ್ಲಿ ಈ ಕಳ್ಳತನ ನಡೆದಿದ್ದು, ಈ ಬಗ್ಗೆ ಮೇ.26ರಂದು ಬ್ಯಾಂಕ್‌ ನ ಹಿರಿಯ ಮ್ಯಾನೇಜರ್‌ ದೂರು ದಾಖಲಿಸಿದ್ದರು. ತನಿಖೆಗೆ ಎಂಟು ಪೊಲೀಸ್‌ ತಂಡಗಳನ್ನು ರಚಿಸಲಾಗಿದ್ದು, ಕಳ್ಳತನ ನಡೆದ ಬಳಿಕ ಕಳವಾದ ಚಿನ್ನಾಭರಣ ಹಾಗೂ ನಗದಿನ ಅಂಕಿ-ಅಂಶಗಳ ಮೊತ್ತವನ್ನು ಪೊಲೀಸ್‌ ಇಲಾಖೆ ಸೋಮವಾರ ಬಹಿರಂಗ ಪಡಿಸಿದ್ದಾರೆ.

  • ಕುಂದಾಪುರ: ಬಕ್ರೀದ್ ಹಬ್ಬಕ್ಕೆ ಮುನ್ನ ಶಾಂತಿ ಸಭೆ; ಸೌಹಾರ್ದತೆಯಿಂದ ಆಚರಿಸಲು ಸೂಚನೆ

    ಕುಂದಾಪುರ, ಜೂನ್ 03, 2025: ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಎಲ್ಲಾ ಧಾರ್ಮಿಕ ಮುಖಂಡರನ್ನು ಕರೆಯಿಸಿ ಶಾಂತಿ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಹಬ್ಬದ ಸಂದರ್ಭದಲ್ಲಿ ಸಾಮರಸ್ಯ, ಸೌಹಾರ್ದತೆ, ಮತ್ತು ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆ ಬಾರದಂತೆ ಬಕ್ರೀದ್ ಹಬ್ಬವನ್ನು ಆಚರಿಸುವಂತೆ ಧಾರ್ಮಿಕ ಮುಖಂಡರಿಗೆ ಪೊಲೀಸ್ ಅಧಿಕಾರಿಗಳು ಸೂಚಿಸಿದರು.

    ಸಭೆಯಲ್ಲಿ ಎಲ್ಲಾ ಸಮುದಾಯದ ಮುಖಂಡರು ಭಾಗವಹಿಸಿ, ಶಾಂತಿಯುತವಾಗಿ ಹಬ್ಬ ಆಚರಿಸುವ ಕುರಿತು ಚರ್ಚಿಸಿದರು. ಕಾನೂನು ಉಲ್ಲಂಘನೆಯಾಗದಂತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸೌಹಾರ್ದತೆ ಕಾಪಾಡಿಕೊಂಡು ಹಬ್ಬವನ್ನು ಆಚರಿಸಲು ಸಹಕರಿಸುವಂತೆ ಪೊಲೀಸರು ಮನವಿ ಮಾಡಿದರು.

    ಉಡುಪಿ: ನಗರ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಧಾರ್ಮಿಕ ಮುಖಂಡರನ್ನು ಠಾಣೆಗೆ ಕರೆಯಿಸಿ ಶಾಂತಿ ಸಭೆ ನಡೆಸಿ ಹಬ್ಬದ ಸಮಯದಲ್ಲಿ ಸಾಮರಸ್ಯ ಹಾಗೂ ಸೌಹಾರ್ದತೆಯಿಂದ ಹಬ್ಬವನ್ನು ಕಾನೂನು ಸುವ್ಯವಸ್ಥೆಗೆ ದಕ್ಕೆ ಬಾರದಂತೆ ಆಚರಣೆ ಮಾಡುವಂತೆ ತಿಳಿಸಲಾಯಿತು.

  • ಗಂಗೊಳ್ಳಿ: ಶ್ರೀ ಜಟ್ಟಿಗೇಶ್ವರ ಯೂತ್ ಕ್ಲಬ್‌ನ 22ನೇ ವರ್ಷದ ಉಚಿತ ಪುಸ್ತಕ ವಿತರಣಾ ಸಮಾರಂಭ

    ಗಂಗೊಳ್ಳಿ, ಜೂನ್ 2, 2025 – ಶ್ರೀ ಜಟ್ಟಿಗೇಶ್ವರ ಯೂತ್ ಕ್ಲಬ್‌ ವತಿಯಿಂದ ಆಯೋಜಿಸಲಾಗಿದ್ದ 22ನೇ ವರ್ಷದ ಉಚಿತ ಪುಸ್ತಕ ವಿತರಣಾ ಸಮಾರಂಭವು ಜೂನ್ 1, 2025ರ ಭಾನುವಾರ ಮಧ್ಯಾಹ್ನ 4:00 ಗಂಟೆಗೆ ಶ್ರೀ ರಾಮ ಮಂದಿರ, ಗಂಗೊಳ್ಳಿಯಲ್ಲಿ ಯಶಸ್ವಿಯಾಗಿ ನೆರವೇರಿತು. 1991ರಲ್ಲಿ ಸ್ಥಾಪನೆಯಾದ ಈ ಸಂಸ್ಥೆಯು ಶೈಕ್ಷಣಿಕ ಪ್ರತಿಭೆಯನ್ನು ಗೌರವಿಸುವ ಮತ್ತು ಶಿಕ್ಷಣದ ಉತ್ಸಾಹವನ್ನು ಉತ್ತೇಜಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಶರತ್‌ಕುಮಾರ್ ರಾವ್ ಮಂಗಳೂರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಸದಾಶಿವ ಖಾರ್ವಿ (ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ), ಶ್ರೀ ಸುಬ್ರಹ್ಮಣ್ಯ ಶೆಟ್ಟಿ (ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ), ಶ್ರೀ ರಾಜೇಂದ್ರ ಸೇರುಗಾರ (ಗ್ರಾಮ ಪಂಚಾಯತ್ ಗಂಗೊಳ್ಳಿ ಸದಸ್ಯ), ಶ್ರೀ ರಾಘವೇಂದ್ರ ಖಾರ್ವಿ (ಬೆಂಗಳೂರಿನ ಉದ್ಯಮಿ), ಶ್ರೀ ನಾಗರಾಜ ಖಾರ್ವಿ (ಶ್ರೀ ಗಣೇಶೋತ್ಸವ ಸಮಿತಿ ಲೈಟ್‌ಹೌಸ್ ಗಂಗೊಳ್ಳಿ ಅಧ್ಯಕ್ಷ), ಶ್ರೀ ಐ. ರಾಘವೇಂದ್ರ ಪೈ (ಗಂಗೊಳ್ಳಿ ಪತ್ರಕರ್ತ), ಶ್ರೀ ನರೇಂದ್ರ ಎಸ್. ಗಂಗೊಳ್ಳಿ (ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು, ಗಂಗೊಳ್ಳಿ ಉಪನ್ಯಾಸಕ), ಶ್ರೀ ಚಂದ್ರ ಕೆ. ಖಾರ್ವಿ (ಶ್ರೀ ಜಟ್ಟಿಗೇಶ್ವರ ಯೂತ್ ಕ್ಲಬ್ ಲೈಟ್‌ಹೌಸ್ ಗಂಗೊಳ್ಳಿ ಅಧ್ಯಕ್ಷ), ಶ್ರೀ ಮಡಿ ಮಾಧವ ಖಾರ್ವಿ (ಶ್ರೀ ಜಟ್ಟಿಗೇಶ್ವರ ಯೂತ್ ಕ್ಲಬ್ ಲೈಟ್‌ಹೌಸ್ ಗಂಗೊಳ್ಳಿ ಸ್ಥಾಪಕ ಅಧ್ಯಕ್ಷ), ಮತ್ತು ಶ್ರೀಮತಿ ಬಯಂತಿ ಜ. ಖಾರ್ವಿ (ಶ್ರೀ ಜಟ್ಟಿಗೇಶ್ವರ ಮಹಿಳಾ ಮಂಡಳಿ ಲೈಟ್‌ಹೌಸ್ ಗಂಗೊಳ್ಳಿ ಅಧ್ಯಕ್ಷ) ಉಪಸ್ಥಿತರಿದ್ದರು.

    ಕಾರ್ಯಕ್ರಮದ ವಿಶೇಷತೆಯಾಗಿ, 2024-25ನೇ ಸಾಲಿನ ಎಸ್‌.ಎಸ್‌.ಎಲ್‌.ಸಿ. ಅಂತಿಮ ಪರೀಕ್ಷೆಯಲ್ಲಿ ಕರ್ನಾಟಕಕ್ಕೆ ದ್ವಿತೀಯ ಸ್ಥಾನ ಪಡೆದ ಕುಮಾರಿ ಸುಶ್ರೀದಾ ಎಸ್‌. ಗಾಣಿಗ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕಗಳನ್ನು ವಿತರಿಸಲಾಯಿತು

  • ಎಸ್ ಡಿ ಪಿ ಐ ಕಾಪು ಕ್ಷೇತ್ರ ಸಮಿತಿ ವತಿಯಿಂದ ಸಾರ್ವಜನಿಕ ರಕ್ತದಾನ ಶಿಬಿರ

    ಕಾಪು, ಜೂನ್ 2, 2025: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾಪು ಕ್ಷೇತ್ರ ಸಮಿತಿ ವತಿಯಿಂದ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಸಂಗ್ರಹ, ಉಡುಪಿ ಇದರ ಸಹಯೋಗದೊಂದಿಗೆ ಮಜೂರು ಪಂಚಾಯತ್ ಸಭಾಂಗಣದಲ್ಲಿ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

    ರಕ್ತದಾನಕ್ಕಿಂತ ಮುಂಚೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕಾಪು ಕ್ಷೇತ್ರ ಸಮಿತಿ ಅಧ್ಯಕ್ಷರಾದ ಸಾಧಿಕ್ ಕೆ ಪಿ ಯವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಜಿಲ್ಲಾಸ್ಪತ್ರೆ ರಕ್ತ ನಿಧಿ ಸಂಗ್ರಹಣಾ ವೈದ್ಯಾಧಿಕಾರಿ ವೀಣಾ ಕುಮಾರಿ ಆಗಮಿಸಿ ಉಡುಪಿ ಜಿಲ್ಲೆಯಲ್ಲಿ ರಕ್ತದ ತೀವ್ರ ಕೊರತೆ ಇದ್ದು ಸಂಘ ಸಂಸ್ಥೆಗಳು ಸ್ವಯಂ ಪ್ರೇರಿತವಾಗಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳುವ ಮೂಲಕ ರಕ್ತದ ಕೊರತೆಯನ್ನು ನೀಗಿಸಲು ಶ್ರಮಿಸಬೇಕು ಎಂದು ಮನವಿ ಮಾಡಿದರು.

    ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಶುದ್ದೀನ್, T.I.Y.A ಮಲ್ಲಾರ್ ಇದರ ಉಪಾಧ್ಯಕ್ಷರಾದ ಅಬ್ದುಲ್ ರಝಾಕ್, ರವಿ ಕರಂದಾಡಿ,ಮಾಲಕರು ಪೂಜಾ ಶಾಮಿಯಾನ, ಮುನೀರ್ ಕಲ್ಮಾಡಿ, ಸಮಾಜ ಸೇವಕರು ಉಡುಪಿ, ಎಸ್ ಡಿ ಪಿ ಐ ಕಾಪು ಪುರಸಭೆ ಸದಸ್ಯರಾದ ನೂರುದ್ದೀನ್, ಎಸ್ ಡಿ ಪಿ ಐ ಮುಖಂಡರಾದ ಅಬೂಬಕ್ಕರ್ ಪಾದೂರ್ ಮತ್ತು ಎಸ್ ಡಿ ಪಿ ಐ ಮಜೂರ್ ಪಂಚಾಯತ್ ಸಮಿತಿ ಅಧ್ಯಕ್ಷರಾದ ಶಂಶುದ್ದೀನ್ ಕರಂದಾಡಿ ಆಗಮಿಸಿದ್ದರು.

    ಈ ಶಿಬಿರದಲ್ಲಿ ಸುಮಾರು 94 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.