ಬೈಂದೂರು, ಮೇ 19: ಬೈಂದೂರು ತಾಲೂಕಿನ ನಂದನವನ ಗ್ರಾಮದ ಪರಿಚಯ ಹೋಟೆಲ್‌ನ ಕೊಠಡಿ ಸಂಖ್ಯೆ 101ರಲ್ಲಿ ವಾಸವಾಗಿದ್ದ ಮಾಲತಿ ಎಂಬ ಮಹಿಳೆಯ 10 ತೊಲೆ (100 ಗ್ರಾಂ) ಚಿನ್ನದ ಕರಿಮಣಿ ಸರವನ್ನು ಕಳ್ಳರು ಕದ್ದಿರುವ ಘಟನೆ ನಡೆದಿದೆ.
ಪಿರ್ಯಾದಿದಾರರಾದ ಉದಯ (36), ಬಿಜೂರು ಗ್ರಾಮ, ಬೈಂದೂರು ಇವರ ಹೆಂಡತಿಯ ಅಕ್ಕ, ಮೇ 8, 2025ರಂದು ಬೆಳಿಗ್ಗೆ 8:30ಕ್ಕೆ ತಮ್ಮ ತಾಯಿಯ ಮನೆಯಾದ ಬಿಜೂರಿನ ಹೊಳೆತೋಟಕ್ಕೆ ತೆರಳಿದ್ದರು. ಆಗ ಕೊಠಡಿಗೆ ಬೀಗ ಹಾಕದೇ ಬಾಗಿಲು ಮಾತ್ರ ಹಾಕಿ ಹೋಗಿದ್ದರು. ಮಧ್ಯಾಹ್ನ 3:30ಕ್ಕೆ ಮರಳಿ ಬಂದಾಗ ಕೊಠಡಿಯ ಬಾಗಿಲು ತೆರೆದಿರುವುದನ್ನು ಕಂಡು, ಒಳಗೆ ಪರಿಶೀಲಿಸಿದಾಗ ಕಪಾಟಿನಲ್ಲಿದ್ದ 100 ಗ್ರಾಂ ಚಿನ್ನದ ಕರಿಮಣಿ ಸರ ಕಾಣೆಯಾಗಿರುವುದು ಗೊತ್ತಾಯಿತು.
ಹೋಟೆಲ್‌ನ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದಾಗ, ಅದೇ ಹೋಟೆಲ್‌ನ 2ನೇ ಮಹಡಿಯ ಕೊಠಡಿ ಸಂಖ್ಯೆ 201ರಲ್ಲಿ ವಾಸವಾಗಿದ್ದ ವ್ಯಕ್ತಿಯೊಬ್ಬರು ಮಧ್ಯಾಹ್ನ 2:20ಕ್ಕೆ ಮಾಲತಿಯವರ ಕೊಠಡಿ ಸಂಖ್ಯೆ 101ಕ್ಕೆ ಪ್ರವೇಶಿಸಿ ಹೊರಬಂದಿರುವ ದೃಶ್ಯ ಕಂಡುಬಂದಿದೆ.
ಈ ಬಗ್ಗೆ ಉದಯಯವರು ನೀಡಿದ ದೂರಿನ ಆಧಾರದ ಮೇಲೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 104/2025, ಕಲಂ 305 BNS ರಂತೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ 72 ಕೋಟಿ ರೂ. ಅನುದಾನದ ಗುಡೇ ದೇವಸ್ಥಾನ ಏತ ನೀರಾವರಿ ಜಾಕ್ವೆಲ್ ಕಾಮಗಾರಿ ವಿರೋಧಿಸಿ ಗುಡೇ ಮಹಾಲಿಂಗೇಶ್ವರ ಏತನೀರಾವರಿ ಸಂತ್ರಸ್ಥ ರೈತರ ಒಕ್ಕೂಟ ಹೆರಂಜಾಲು, ಹಳಗೇರಿ, ನೂಜಾಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಅವೈಜ್ಞಾನಿಕವಾಗಿರುವ ಈ ಕಾಮಗಾರಿಯನ್ನು ಕೂಡಲೇ ಸ್ಥಳಾಂತರ ಮಾಡ ಬೇಕೆಂದು ಆಗ್ರಹಿಸಿ ಗ್ರಾಮಸ್ಥರು ನೀರಿನ ಕೊಡ ಹಿಡಿದುಕೊಂಡು ಬೈಂದೂರಿನ ಸೇನೇಶ್ವರ ದೇವಸ್ಥಾನದಿಂದ ಆಡಳಿತ ಸೌಧದವರೆಗಿನ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬೈಂದೂರು ಆಡಳಿತ ಸೌಧದ ಎದುರು ತಹಶೀಲ್ದಾರ್ ಭೀಮಸೇನ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಲಾಯಿತು
ಮಂಗಳೂರು/ಉಡುಪಿ, ಮೇ. 08: ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತ ’ಆಪರೇಷನ್ ಸಿಂಧೂರ್” ಕಾರ್ಯಾಚರಣೆ ಬೆನ್ನಲ್ಲೇ ರಾಜ್ಯದ ಕರಾವಳಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡ 324 ಕಿಮೀ ಉದ್ದದ ಕರಾವಳಿ ಪ್ರದೇಶದಲ್ಲಿ ಮಂಗಳೂರು, ಮಲ್ಪೆ, ಕಾರವಾರ, ಕುಮಟಾ, ಭಟ್ಕಳ, ಹೆಜಮಾಡಿ, ಹೊನ್ನಾವರ, ಬೇಲೆಕೇರಿ ಮತ್ತು ಗಂಗೊಳ್ಳಿಯಲ್ಲಿ ಸಿಎಸ್‌ಪಿ ಕೇಂದ್ರಗಳು ಸೇರಿವೆ. ಈ ಎಲ್ಲಾ ಕೇಂದ್ರಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಒಂಬತ್ತು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 340 ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಅದರಲ್ಲಿ 180 ಸಿಬ್ಬಂದಿಯನ್ನು ಕರಾವಳಿ ನಿಯಂತ್ರಣ ಪಡೆಗೆ ಸೇರಿಸಲಾಗಿದೆ. 13 ದೋಣಿಗಳು ಮತ್ತು ಜೆಟ್ ಸ್ಕೀ ಗಳನ್ನು ಬಳಸಿಕೊಂಡು 24/7 ಕಣ್ಗಾವಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಕರಾವಳಿ ಭದ್ರತಾ ಎಸ್‌ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.
“ಪಹಲ್ಗಾಮ್ ಘಟನೆಯ ನಂತರ, ನಮ್ಮ ಸಿಬ್ಬಂದಿ ಹೆಚ್ಚಿನ ಎಚ್ಚರಿಕೆಯಲ್ಲಿದ್ದಾರೆ. ಮುನ್ನೆಚ್ಚರಿಕೆ ಕ್ರಮಗಳನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ. ಇಂದು ಕಾರವಾರದಲ್ಲಿ ಅಣಕು ನಾಗರಿಕ ರಕ್ಷಣಾ ಕವಾಯತು ನಡೆಸಲಾಯಿತು. ಸಮುದ್ರದಲ್ಲಿ ಕಾರ್ಯನಿರ್ವಹಿಸುವ ದೋಣಿಗಳನ್ನು ಸಾಮಾನ್ಯ ದಿನಗಳಿಗಿಂತ ಹೆಚ್ಚು ಕಟ್ಟುನಿಟ್ಟಾಗಿ ಪರಿಶೀಲಿಸಲಾಗುತ್ತಿದೆ” ಎಂದು ಅವರು ಹೇಳಿದರು.
ಮೇ 7 ರಂದು, ಸಿಎಸ್‌ಪಿ ಗಸ್ತು ದೋಣಿಗಳು ಮಂಗಳೂರಿನ ಹಳೆಯ ಬಂದರು ಪ್ರದೇಶದಲ್ಲಿ ಕಣ್ಗಾವಲು ನಡೆಸಿದವು. ಇದರ ಜೊತೆಗೆ, ಸುತ್ತಮುತ್ತಲಿನ ದೋಣಿಗಳನ್ನು ಪರಿಶೀಲಿಸಲು ಅಣಕು ಕಾರ್ಯಾಚರಣೆಯನ್ನು ಸಹ ನಡೆಸಲಾಯಿತು. ಭಾರತೀಯ ನೌಕಾಪಡೆ, ಕರಾವಳಿ ಕಾವಲು ಪಡೆ ಮತ್ತು ಕರಾವಳಿ ಭದ್ರತಾ ಪೊಲೀಸರು, ಕರಾವಳಿ ಮತ್ತು ಆಳ ಸಮುದ್ರದಲ್ಲಿನ ಚಟುವಟಿಕೆಗಳ ಮೇಲೆ ನಿಗಾ ಇಡಲಾಗಿದೆ. ಕರಾವಳಿ ಕಾವಲು ಪಡೆ ಹಡಗುಗಳು ಈಗಾಗಲೇ 24×7 ಸಮುದ್ರದಲ್ಲಿ ಗಸ್ತು ತಿರುಗುತ್ತಿದ್ದು, ವಿದೇಶಿ ಹಡಗುಗಳ ಮೇಲೆ ಹೆಚ್ಚಿನ ಕಣ್ಗಾವಲು ನಡೆಸುತ್ತಿವೆ.
ಲಭ್ಯವಿರುವ ದೋಣಿಗಳ ಸಮೂಹವನ್ನು ಬಳಸಿಕೊಂಡು ನಿರಂತರ ಗಸ್ತು ನಡೆಸಲಾಗುತ್ತಿದೆ ಎಂದು ಎಸ್‌ಪಿ ಮಿಥುನ್ ಕುಮಾರ್ ಹೇಳಿದರು. ಇಂದು ಮಲ್ಪೆಯಲ್ಲಿ ಪರಿಶೀಲನಾ ಸಭೆ ನಡೆಸಲಾಯಿತು. ಇತರ ಜಿಲ್ಲೆಗಳಿಂದ ಬರುವ ದೋಣಿಗಳನ್ನು ಪರಿಶೀಲಿಸಲಾಗುತ್ತಿದೆ ಮತ್ತು ಕಳೆದ ನಾಲ್ಕು ದಿನಗಳಲ್ಲಿ ನಾಲ್ಕು ದೋಣಿಗಳಿಗೆ ದಂಡ ವಿಧಿಸಲಾಗಿದೆ. ಅನುಮಾನಾಸ್ಪದವಾಗಿ ಕಂಡುಬಂದ ಯಾರನ್ನಾದರೂ ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ಅವರು ಹೇಳಿದರು.
ಬೈಂದೂರು: ತಾಲೂಕಿನ ಕಿರೀಮಂಜೇಶ್ವರ ಗ್ರಾಮದ ನಾಗುರಿನ ಗೋವಿಂದ ರಾವ್ ರವರ ಜಿ ಏನ್ ಕಾಂಪ್ಲೆಕ್ಸ್ ನ ಹೊರಭಾಗದಲ್ಲಿ ಇರಿಸಿದ್ದ KA 20 MF 3378 ಮಾರುತಿ ಸ್ವಿಫ್ಟ್ ಕಾರು (ಅಂದಾಜು ಮೌಲ್ಯ 8 ಲಕ್ಷ) ದಿನಾಂಕ 01.05.2025 ರಂದು ಬೆಳೆಗಿನ ಜಾವ 4:30 ಗಂಟೆಗೆ ಕಳವಾಗಿದ್ದು. ಈ ಬಗ್ಗೆ ಕಾರು ಮಾಲಕ ಗಣೇಶ್ ಆಚಾರ್ಯ ರವರು ನೀಡಿರುವ ದೂರಿನ ಮೇರೆಗೆ ಬೈಂದುರು ಪೊಲೀಸ್ ಠಾಣೆಯೆಲ್ಲಿ ಅ. ಕ್ರ. 83/2025 ಕಲಂ 303(2) ರಂತೆ ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣದ ಪತ್ತೆಗಾಗಿ ಶ್ರೀ ಹೆಚ್ ಡಿ ಕುಲಕರ್ಣಿ ಪೊಲೀಸ್ ಉಪಾಧೀಕ್ಷಕರು ಕುಂದಾಪುರ ಉಪವಿಭಾಗರವರ ಮಾರ್ಗದರ್ಶನದಲ್ಲಿ ಶ್ರೀ ಸಾವೀತ್ರ ತೇಜ ಪೊಲೀಸ್ ವ್ರತ್ತ ನಿರೀಕ್ಷಿಕರು ಬೈಂದೂರು ರವರ ನೇತೃತ್ವ ದಲ್ಲಿ, ಬೈಂದೂರು ಠಾಣೆಯ ಪಿ ಎಸ್ ಐ ರವರಾದ ತಿಮ್ಮೀಶ್ ಬಿ ಏನ್ ಮತ್ತು ನವೀನ ಪಿ ಬೋರಕರ, ಬೈಂದೂರು ಠಾಣೆಯ ಸಿಬ್ಬಂದಿಯವರಾದ ಚಿದಾನಂದ, ಮಾಳಪ್ಪ, ವ್ರತ್ತ ನಿರೀಕ್ಷಿಕರ ಕಚೇರಿಯ ಸಿಬ್ಬಂದಿಯವರಾದ ರವೀಂದ್ರ ವಿಶೇಷ ತಂಡ ರಚಿಸಲಾಯಿತು.
ವಿಶೇಷ ತಂಡದಲ್ಲಿದ್ದ ಅಧಿಕಾರಿ ಮಟಿಗೂ ಸಿಬ್ಬಂದಿಗಳು ದಿನಾಂಕ 02.05.2025 ರಂದು ಆರೋಪಿ ಪೌಜಾನ್ ಅಹ್ಮದ್ ಸಮೇತ ಕಾರನ್ನು ಪತ್ತೆ ಮಾಡಿ ಕಾರನ್ನು ಸ್ವಧೀನಪಡೆಸಿಕೊಂಡಿದ್ದಾರೆ. ಹಾಗೂ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.
ರಕ್ಷಕ್ ನೆಟ್ವರ್ಕ್ ಅಂಡ್ ಸೆಕ್ಯೂರಿಟಿ ಸೊಲ್ಯೂಷನ್ ಅವರು ಕಾರ್ಯಾಚರಣೆಯಲ್ಲಿ ಸಹಕರಿಸಿರುತ್ತಾರೆ.
ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಾನ್ಯ ಉಡುಪಿ ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಡಾ. ಅರುಣ್ ಕೆ ಐ ಪಿ ಎಸ್. ರವರು ಹಾಗೂ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಶ್ರೀ ಸುಧಾಕರ್ ನಾಯ್ಕ್ ಮತ್ತು ಪರಮೇಶ್ವರ ಹೆಗಡೆ ರವರು ಅಭಿನಂದಿಸಿರುತ್ತಾರೆ.
ಬೈಂದೂರು: ರಸ್ತೆ ದಾಟುಲು ನಿಂತಿದ್ದ ವ್ಯಕ್ತಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪುಂದ ಶಾಲೆಬಾಗಿಲಿನಲ್ಲಿ ಸಂಭವಿಸಿದೆ. ಜಯಶೀಲ ಗಾಯಗೊಂಡ ವ್ಯಕ್ತಿ.
ಉಪ್ಪುಂದ ಕಡೆಯಿಂದ ಬೈಂದೂರು ಕಡೆಗೆ ಬರುತ್ತಿದ್ದ ಕಾರು ರಸ್ತೆಯ ಬದಿಯಲ್ಲಿ ರಸ್ತೆ ದಾಟಲು ನಿಂತಿದ್ದ ಜಯಶೀಲ ಅವರಿಗೆ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದು ಮಣಿಪಾಲ ದಾಖಲಿಸಲಾಗಿದೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಂದೂರು: ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಅವರ ನೇತೃತ್ವದಲ್ಲಿ ಜರುಗಿತು.
ಸಭೆಯ ಅಧ್ಯಕ್ಷತೆ ವಹಿಸಿದ ಮೋಹನ್ ಪೂಜಾರಿ ಮಾತನಾಡಿ, ವಿದ್ಯುತ್ ಲೋಡ್ ಶೆಡ್ಡಿಂಗ್ ಸಮಸ್ಯೆಗೆ ಕಾರಣವಾದ ಮೆಸ್ಕಾಂ ಉಪಕೇಂದ್ರದ ತಾಂತ್ರಿಕ ತೊಂದರೆಯನ್ನು ಸಾರ್ವಜನಿಕರಿಗೆ ಸ್ಪಷ್ಟವಾಗಿ ತಿಳಿಸುವ ಕೆಲಸವಾಗಬೇಕು. ಜನರಿಗೆ ತೊಂದರೆಯಾಗದಂತೆ, ನಿಗದಿತ ಸಮಯದೊಳಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಲು ಶ್ರಮಿಸಬೇಕು. ಇದರಿಂದ ಸರ್ಕಾರದ ಬಗ್ಗೆ ತಪ್ಪು ಗ್ರಹಿಕೆ ಉಂಟಾಗದಂತೆ ಎಚ್ಚರಿಕೆ ವಹಿಸಿ. ಜೊತೆಗೆ, ಜನಪ್ರತಿನಿಧಿಗಳು ವಾಸ್ತವಿಕತೆಯನ್ನು ಅರಿಯದೇ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದರು.
ಈ ವಿಷಯದ ಬಗ್ಗೆ ಸಭೆಯಲ್ಲಿ ಸ್ಪಷ್ಟನೆ ನೀಡಿದ ಬೈಂದೂರು ಮೆಸ್ಕಾಂ ಉಪಕೇಂದ್ರದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹರೀಶ್, ಬೈಂದೂರು ಮತ್ತು ಕೊಲ್ಲೂರು ಮೆಸ್ಕಾಂ ಉಪಕೇಂದ್ರಗಳಿಗೆ ವಿದ್ಯುತ್ ಪೂರೈಸುವ ನಾವುಂದದ 110 ಕೆ.ವಿ. ಸಬ್‌ಸ್ಟೇಷನ್‌ನ 20 ಎಂವಿಎ ಟ್ರಾನ್ಸ್‌ಫಾರ್ಮರ್‌ನಲ್ಲಿ ಕಳೆದ ವಾರ ತಾಂತ್ರಿಕ ದೋಷ ಕಂಡುಬಂದಿತು. ಈ ಕಾರಣದಿಂದ ಕುಂದಾಪುರ ಸಬ್‌ಸ್ಟೇಷನ್‌ನಿಂದ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಹೆಚ್ಚಿನ ಲೋಡ್‌ನಿಂದ ಟ್ರಿಪ್ಪಿಂಗ್ ಸಮಸ್ಯೆ ಉಂಟಾಗಿದ್ದು, ಬೈಂದೂರು ಮತ್ತು ಕೊಲ್ಲೂರು ಪ್ರದೇಶಗಳಲ್ಲಿ ಕೆಲ ದಿನಗಳಿಂದ ವಿದ್ಯುತ್ ವ್ಯತ್ಯಯವಾಗುತ್ತಿದೆ. ಈಗಾಗಲೇ ಟ್ರಾನ್ಸ್‌ಫಾರ್ಮರ್ ದುರಸ್ತಿ ಕಾರ್ಯ ಪ್ರಗತಿಯಲ್ಲಿದ್ದು, ಒಂದೆರಡು ದಿನಗಳಲ್ಲಿ ಸಾಮಾನ್ಯ ಸ್ಥಿತಿಗೆ ಮರಳುವ ಸಂಭವವಿದೆ ಎಂದರು.
ಬೈಂದೂರಿನಲ್ಲಿ ನಿರ್ಮಾಣವಾಗುತ್ತಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಕಾಮಗಾರಿ ಬಹುತೇಕ ಮುಕ್ತಾಯವಾಗಿದ್ದು, ಉಳಿದ ಕೆಲಸವನ್ನು ಪೂರ್ಣಗೊಳಿಸಿ, ಉದ್ಘಾಟನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ, ಗ್ರಾಮೀಣ ಪ್ರದೇಶಗಳಿಗೆ ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯ ಕಲ್ಪಿಸಲು ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿದರು.
ಬೈಂದೂರು ತಾಲೂಕಿನಲ್ಲಿ ಪಂಚ ಗ್ಯಾರಂಟಿಗೆ 182.43 ಕೋಟಿ ರೂ. ವೆಚ್ಚ
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಡಿ ಬೈಂದೂರು ತಾಲೂಕಿಗೆ ಇದುವರೆಗೆ ಸುಮಾರು 182.43 ಕೋಟಿ ರೂ. ವೆಚ್ಚವಾಗಿದೆ. ಗೃಹಲಕ್ಷ್ಮಿ ಯೋಜನೆಯಿಂದ ಜನವರಿವರೆಗೆ 96.61 ಕೋಟಿ ರೂ. ಫಲಾನುಭವಿಗಳ ಖಾತೆಗೆ ಜಮಾ ಆಗಿದೆ. 48 ಫಲಾನುಭವಿಗಳಿಗೆ ಆಧಾರ್ ಬ್ಯಾಂಕಿಂಗ್ ಮ್ಯಾಪಿಂಗ್ ಬಾಕಿಯಿದ್ದು, ತಾಂತ್ರಿಕ ಕಾರಣಗಳಿಂದ 479 ಮತ್ತು 71 ಹೊಸ ನೋಂದಣಿಗಳು ಸೇರಿ ಒಟ್ಟು 616 ಫಲಾನುಭವಿಗಳಿಗೆ ಬಾಕಿಯಿದೆ.
ಗೃಹ ಜ್ಯೋತಿ ಯೋಜನೆಯಿಂದ ಬೈಂದೂರು ಮೆಸ್ಕಾಂ ವ್ಯಾಪ್ತಿಯ 27,942 ಕುಟುಂಬಗಳಿಗೆ 34.54 ಕೋಟಿ ರೂ., ತಲ್ಲೂರು ಮೆಸ್ಕಾಂ ವ್ಯಾಪ್ತಿಯ 1,935 ಕುಟುಂಬಗಳಿಗೆ 2.23 ಕೋಟಿ ರೂ. ಸೇರಿ ಒಟ್ಟು 36.78 ಕೋಟಿ ರೂ. ವೆಚ್ಚವಾಗಿದೆ. ಅನ್ನಭಾಗ್ಯ ಯೋಜನೆಯಡಿ 25,182 ಪಡಿತರ ಚೀಟಿಗಳಿಗೆ 1,89,26,610 ರೂ. ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾವಾಗಿದೆ. ಯುವ ನಿಧಿ ಯೋಜನೆಯಡಿ 340 ಫಲಾನುಭವಿಗಳಿಗೆ 59.34 ಲಕ್ಷ ರೂ. ಜಮಾ ಆಗಿದೆ. ಶಕ್ತಿ ಯೋಜನೆಯಡಿ 1.36 ಕೋಟಿ ಮಹಿಳೆಯರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸಿದ್ದು, 48.44 ಕೋಟಿ ರೂ. ರಿಯಾಯಿತಿ ಪಡೆದಿದ್ದಾರೆ ಎಂದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ರವಿಕುಮಾರ್ ಹುಕ್ಕೇರಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ಮಾಲತಿ ಶಿವಾನಂದ, ರಾಮ ಪೂಜಾರಿ, ಅನೀಶ್ ಪೂಜಾರಿ, ರಾಘವೇಂದ್ರ ಬಿಲ್ಲವ, ಗುಲಾಬಿ, ಸೂರ್ಯಕಾಂತಿ ಡಿ, ಗಣೇಶ ಗಾಣಿಗ, ಅಣ್ಣಪ್ಪ ಶೆಟ್ಟಿ, ದೇವದಾಸ್ ವಿ.ಜೆ., ಬಾಬು ದೇವಾಡಿಗ, ರಾಮಚಂದ್ರ ಖಾರ್ವಿ, ಮುಕ್ರಿ ಮೊಹಮ್ಮದ್ ಅಲ್ತಾಫ್, ಮೆಸ್ಕಾಂ, ಕೆಎಸ್‌ಆರ್‌ಟಿಸಿ, ಮಹಿಳಾ ಮತ್ತು ಮಕ್ಕಳ ಶಿಶು ಅಭಿವೃದ್ಧಿ ಇಲಾಖೆ, ಆಹಾರ ಇಲಾಖೆ ಹಾಗೂ ಯುವ ಸಬಲೀಕರಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೈಂದೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಪ್ರತಿಭಟನೆ ಹಾಗೂ ಸಂತಾಪ ಸಭೆ ಬೈಂದೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಕ್ಷಯ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯಿತು.
ಮಾಜಿ ಶಾಸಕರಾದ ಕೆ. ಗೋಪಾಲ್ ಪೂಜಾರಿ, ಹಿರಿಯ ಕಾಂಗ್ರೆಸ್ ನಾಯಕರಾದ ಪ್ರಕಾಶ್ಚಂದ್ರ ಶೆಟ್ಟಿ, ಬೈಂದೂರು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಮೋಹನ್ ಪೂಜಾರಿ, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೂರಜ್ ಜಿ. ಪೂಜಾರಿ, ಬೈಂದೂರು ಪಪಂ ನಾಮನಿರ್ದೇಶಿತ ಸದಸ್ಯ ನಾಗರಾಜ ಗಾಣಿಗ, ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ವಿಕಾಸ್ ಹೆಗ್ಡೆ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ಬೈಂದೂರು ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಬ್ಬೀರ್ ಬೈಂದೂರು, ಕಿಸಾನ್ ಘಟಕದ ಅಧ್ಯಕ್ಷ ವೀರಭದ್ರ ಗಾಣಿಗ, ಸುಬ್ರಹ್ಮಣ್ಯ ಪೂಜಾರಿ ಯಡ್ತರೆ, ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗ ಉಪಾಧ್ಯಕ್ಷರಾದ ಕೆ. ಚಂದ್ರಶೇಖರ್ ಶೆಟ್ಟಿ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಪ್ರಮೋದ್ ಪೂಜಾರಿ ನಾವುಂದ, ಉಡುಪಿ ಜಿಲ್ಲಾ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ರೋಶನ್ ಶೆಟ್ಟಿ ಹಾಗೂ ವಿವಿಧ ನಾಯಕರು ಉಪಸ್ಥಿತರಿದ್ದರು.
ಬೈಂದೂರು, ಫೆಬ್ರವರಿ 3, 2025: ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ನಾವುಂದ ಅರೆಹೊಳೆಯಲ್ಲಿ ರೈಲ್ವೆ ಹಳಿಯಲ್ಲಿ ಸುಮಾರು 30 ವರ್ಷದ ಯುವಕನ ಶವ ದೊರಕಿದ ಘಟನೆ ನಡೆದಿದೆ. ಶವದ ಅವಶೇಷಗಳು ಸುಮಾರು ಅರ್ಧ ಕಿಲೋಮೀಟರ್ ತನಕ ಚದರಿವೆಯಾಗಿದ್ದವು.
ತಕ್ಷಣ ಸ್ಥಳಕ್ಕೆ ಧಾವಿಸಿದ ಗಂಗೊಳ್ಳಿಯ 24×7 ಆಂಬ್ಯುಲೆನ್ಸ್ ತಂಡದ ಸದಸ್ಯರಾದ ಇಬ್ರಾಹಿಂ, ಮೌಲಾನ ಶಕೀಲ್, ಸಮೀ ಉಲ್ಲಾ ಕಾಝೀ ಮತ್ತು ಮಗ್ದೂಮ್ ಅರೆಹೊಳೆ ಅವರು ಶವದ ಅವಶೇಷಗಳನ್ನು ಗುರುತಿಸಿ, ಸಂಗ್ರಹಿಸಿ ಶವಾಗಾರಕ್ಕೆ ಒಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದರು