Blog

  • ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ಯುವಕರ ಬಂಧನ

    ಮಂಗಳೂರು, ಜುಲೈ 21, 2025: ಇನ್‌ಸ್ಟಾಗ್ರಾಮ್ ಮೂಲಕ ಸ್ನೇಹ ಬೆಳೆಸಿಕೊಂಡಿದ್ದ ಅಪ್ರಾಪ್ತ ಬಾಲಕಿಯನ್ನು ಆಮಿಷವೊಡ್ಡಿ, ಅಪಹರಿಸಿ, ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮುಲ್ಕಿ ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿದ್ದಾರೆ.

    ಆರೋಪಿಗಳನ್ನು ಉಡುಪಿಯ ಬಡಗುಬೆಟ್ಟುವಿನ ಬಸ್ ಕಂಡಕ್ಟರ್ ದೀಪಕ್ (19) ಮತ್ತು ಆತನ ಸ್ನೇಹಿತ ಅತ್ರಾಡಿಯ ಪರ್ಕಳದ ಭಟ್ರಿಪಾಲ್ಕೆ ನಿವಾಸಿ ನವೀನ್ ಶೆಟ್ಟಿ (21) ಎಂದು ಗುರುತಿಸಲಾಗಿದೆ.

    ಪೊಲೀಸರ ಪ್ರಕಾರ, ಆರೋಪಿಗಳು ಜುಲೈ 19 ರಂದು ಬಪ್ಪನಾಡು ಬಳಿಯಿಂದ ಬಾಲಕಿಯನ್ನು ಸ್ಕೂಟರ್‌ನಲ್ಲಿ ಅಪಹರಿಸಿ ಉಡುಪಿಗೆ ಕರೆದೊಯ್ದು, ಅಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ.

    ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

  • Koneru Humpy Makes History, Reaches FIDE Women’s Chess World Cup Semifinals

    Bengaluru, July 21, 2025: Indian Grandmaster Koneru Humpy etched her name in history by becoming the first Indian woman to reach the semi-finals of the FIDE Women’s Chess World Cup. On Sunday, she showcased a brilliant counterattacking game to hold China’s International Master Yuxin Song to a draw, securing her spot in the last four after a closely fought second game. Having won the first game with white pieces, Humpy needed only a draw to advance, a feat she achieved with skill and determination.

    With a guaranteed fourth place, Humpy now has two opportunities to finish in the top three, which would earn her a spot in the next Women’s Candidates’ tournament. The top three qualifiers from this event will advance to that prestigious competition.

    In an all-Indian clash, Grandmaster D Harika and IM Divya Deshmukh ended their quarterfinal match in a draw, setting the stage for a tie-break showdown scheduled for Monday. Meanwhile, Grandmaster R Vaishali faced disappointment, losing to China’s former world women’s champion Zhongyi Tan despite a promising position. Vaishali, who had drawn the first game, couldn’t overcome Tan’s strategic edge.

    China’s top seed Tingjie Lei also advanced to the semifinals, defeating Georgia’s Nana Dzagnidze in a 2-0 sweep. Yuxin Song, needing a win to stay in contention against Humpy, opted for the popular Jobava’s London opening. Humpy quickly equalized but sacrificed two pawns to create opportunities. She then exploited Song’s weakened pawn structure, recovering her pawns and steering the game to a balanced rook-and-pawns endgame. Song fought for 53 moves before agreeing to a draw.

    Vaishali pushed for an advantage in the middlegame but fell to an unforced error, allowing Tan to take control. Despite some computer-suggested chances, Vaishali struggled to find the right moves. Harika played cautiously with white against Deshmukh, leading to another drawn rook-and-pawns endgame, making their match the only one heading to tie-breaks—ensuring two Indians in the semifinals.

    Quarterfinal Results: Koneru Humpy (Ind) beat Yuxin Song (Chn) 1.5-0.5; Nana Dzagnidze (Geo) lost to Tingjie Lei (Chn) 0-2; R Vaishali (Ind) lost to Tan Zhongyi (Chn) 0.5-1.5; Divya Deshmukh (Ind) drew with D Harika (Ind) 1-1 (tiebreaker pending).

  • ಧರ್ಮಸ್ಥಳ ಪ್ರಕರಣ: ಎಸ್‌ಐಟಿ ಸೇರಲು ಇಬ್ಬರು ಅಧಿಕಾರಿಗಳು ಹಿಂದೇಟು?

    ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಆರೋಪ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ವರ್ಗಾಯಿಸಿ ರಾಜ್ಯ ಸರ್ಕಾರ ಶನಿವಾರ (ಜು.19) ಆದೇಶಿಸಿದೆ.

    ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ 39/2025 ಕಲಂ 211(ಎ) ಬಿಎನ್‌ಎಸ್, ಈ ಪ್ರಕರಣದ ಸಮಗ್ರ ತನಿಖೆಯನ್ನು ಕೈಗೊಳ್ಳಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ ಎಂದು ಸರ್ಕಾರದ ಆದೇಶ ತಿಳಿಸಿದೆ.

    ಮೇಲೆ ಉಲ್ಲೇಖಿಸಿದ ಪ್ರಕರಣ ಮಾತ್ರವಲ್ಲದೆ, ಅದಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಎಸ್‌ಐಟಿಗೆ ವರ್ಗಾಯಿಸಲಾಗಿದೆ ಎಂದು ಸರ್ಕಾರ ಹೇಳಿದೆ.

    ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಪ್ರಣವ ಮೊಹಂತಿ ಅವರ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದ್ದು, ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರ್ದೇಶಕ ಎಂ.ಎನ್‌ ಅನುಚೇತ್, ಸಿಎಆರ್ ಕೇಂದ್ರದ ಉಪ ಪೊಲೀಸ್ ಆಯುಕ್ತೆ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ತಂಡದ ಸದಸ್ಯರಾಗಿದ್ದಾರೆ.

    ಈ ನಡುವೆ ಎಸ್‌ಐಟಿಯಿಂದ ಅಧಿಕಾರಿಗಳಾದ ಎಂ.ಎನ್‌ ಅನುಚೇತ್ ಮತ್ತು ಸೌಮ್ಯಲತಾ ಅವರು ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯಲು ಮುಂದಾಗಿದ್ದಾರೆ ಎಂದು ಮಾಧ್ಯಮದಲ್ಲಿ ವರದಿಯಾಗಿತ್ತು.

    ಎಸ್‌ಐಟಿ ತಂಡದಿಂದ ಯಾವ ಅಧಿಕಾರಿಗಳೂ ಹಿಂದೆ ಸರಿದಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ

    ಧರ್ಮ‍ಸ್ಥಳದಲ್ಲಿ ಸರಣಿ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ಎಸ್‌ಐಟಿ ತಂಡದಿಂದ ಯಾವ ಅಧಿಕಾರಿಗಳೂ ಕೂಡ ಹಿಂದೆ ಸರಿದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ.

    ಸೋಮವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

    ಎಸ್‌ಐಟಿ ತಂಡದಿಂದ ಕೆಲವು ಅಧಿಕಾರಿಗಳು ವೈಯಕ್ತಿಕ ಕಾರಣದಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, “ಆ ರೀತಿಯ ಯಾವುದೇ ಬೆಳವಣಿಗೆ ನಡೆದಿಲ್ಲ. ಅವರೆಲ್ಲ ಜಬಾಬ್ದಾರಿಯುತ ಸ್ಥಾನದಲ್ಲಿರುವ ಹಿರಿಯ ಅಧಿಕಾರಿಗಳು, ಅವರು ತಮ್ಮ ಕೆಲಸವನ್ನು ಮಾಡುತ್ತಾರೆ. ನನಗಾಗಲಿ, ಸರಕಾರಕ್ಕಾಗಲಿ ನಾವು ಬರುವುದಿಲ್ಲ ಎಂದು ಅವರು ಹೇಳಿಲ್ಲ” ಎಂದು ಸ್ಪಷ್ಟಪಡಿಸಿದರು.

  • ಅಂಕೋಲಾ: ಭೀಕರ ಬಸ್ ಅಪಘಾತ: ಹಳ್ಳಕ್ಕೆ ಬಿದ್ದ ಬಸ್, ಓರ್ವ ಸಾವು

    ಅಂಕೋಲ, ಜುಲೈ 21, 2025:  ಇಂದು ಬೆಳಗಿನ ಜಾವ ಸುಮಾರು 3 ಗಂಟೆಗೆ ಅಂಕೋಲಾ ತಾಲೂಕಿನ ಅಗಸೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ.

    ಬೆಳಗಾವಿಯಿಂದ ಯಲ್ಲಾಪುರ-ಅಂಕೋಲಾ ಮಾರ್ಗವಾಗಿ ಮಂಗಳೂರು ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿ, ಕಿರು ಸೇತುವೆಗೆ ಡಿಕ್ಕಿ ಹೊಡೆದು ಪಕ್ಕದಲ್ಲೇ ಇದ್ದ ಹಳ್ಳಕ್ಕೆ ಬಿದ್ದಿದೆ.

    ಈ ದುರ್ಘಟನೆಯಲ್ಲಿ 18 ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗಿದೆ ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಐವರು ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರ ಮತ್ತು ಮಂಗಳೂರಿನ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

    ಈ ಅಪಘಾತದಲ್ಲಿ ಪ್ರಯಾಣಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    ಅಪಘಾತ ಸಂಭವಿಸುತ್ತಿದ್ದಂತೆ, ದಿನಪತ್ರಿಕೆ ಸಾಗಾಟ ಮಾಡುವ ಚಾಲಕ ಸೈಯದ್ ಜಾಕಿರ್ ಇನಾಮ್‌ದಾರ, ಆಂಬ್ಯುಲೆನ್ಸ್ ವಾಹನಗಳು ಹಾಗೂ ಸ್ಥಳೀಯರು ಮತ್ತು ದಾರಿಹೋಕರು ತಕ್ಷಣವೇ ನೆರವಿಗೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.

    ಚಾಲಕನ ನಿರ್ಲಕ್ಷ್ಯ ಮತ್ತು ಅತಿ ವೇಗವೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ. ಅನೇಕ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಹಳ್ಳಕ್ಕೆ ಬಿದ್ದರೂ ಬಹುತೇಕ ಪ್ರಯಾಣಿಕರು ಅಪಾಯದಿಂದ ಪಾರಾಗಿರುವುದು ನೆಮ್ಮದಿಯ ಸಂಗತಿಯಾಗಿದೆ. ಘಟನೆ ಕುರಿತು ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ.

  • ರೋಗಿಯ ರಕ್ಷಣೆ: ಸೂಚನೆ. 

    ಉಡುಪಿ, ಜುಲೈ 21, 2025: ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರು ರಕ್ಷಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿರುವ ಘಟನೆ ರವಿವಾರ ನಡೆದಿದೆ. ರಕ್ಷಿಸಲ್ಪಟ್ಟ ರೋಗಿಯು ಹೆಸರು ಸುರೇಶ (49ವ) ತಂದೆ ದುರ್ಗಾ ನಾಯ್ಕ್ ಹಾವೇರಿಯ ನಿವಾಸಿ ಎಂದು‌ ಹೇಳಿಕೊಂಡಿದ್ದಾನೆ. ವಾರಸುದಾರರು ಉಡುಪಿ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ. 

     ಆದರ್ಶ್ ಆಸ್ಪತ್ರೆಯ ಸನಿಹದ ಅಂಗಡಿ ಜಗುಲಿಯಲ್ಲಿ ರೋಗಿಯು ಚಳಿಜ್ವರದಿಂದ ಬಳಲುತ್ತ, ಚಿಕಿತ್ಸೆ ಪಡೆಯಲು ಅಸಹಾಯಕರಾಗಿ ಮಲಗಿಕೊಂಡಿದ್ದರು. ಗಮನಿಸಿದ ನಗರ ಪೋಲಿಸ್ ಠಾಣೆಯ ಗಸ್ತು ವಾಹನದ ಚಾಲಕ ಸಕತೋಷ್‌ರಾವ್ ಒಳಕಾಡುವರ ಗಮನಕ್ಕೆ ತಂದಿದ್ದರು,ಜಗದೀಶ್ ಸಹಕರಿಸಿದರು.

  • ಬಾಗಲಕೋಟೆ: ರೂ. 20,000 ಸಾಲಕ್ಕಾಗಿ ವ್ಯಕ್ತಿಯನ್ನು ಸರಪಳಿಯಿಂದ ಕಟ್ಟಿಹಾಕಿದ ಇಬ್ಬರು ಬಂಧನ

    ಬಾಗಲಕೋಟೆ, ಜುಲೈ 20, 2025: ಬಾಗಲಕೋಟೆ ಜಿಲ್ಲೆಯ ಚಡಚನ ತಾಲೂಕಿನ ಹಟ್ಟಳ್ಳಿ ಗ್ರಾಮದಲ್ಲಿ ರೂ. 20,000 ಸಾಲಕ್ಕಾಗಿ ಒಬ್ಬ ವ್ಯಕ್ತಿಯನ್ನು ಸರಪಳಿಯಿಂದ ಕಟ್ಟಿಹಾಕಿ ಸಾರ್ವಜನಿಕವಾಗಿ ಅವಮಾನಿಸಿದ ಘಟನೆ ನಡೆದಿದ್ದು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಪೊಲೀಸ್ ಮೂಲಗಳ ಪ್ರಕಾರ, ಸ್ಥಳೀಯ ಚಾಲಕನಾದ ಚಂದಾಸಾಬ್ ಅಲಾವುದ್ದೀನ್ ಮುಲ್ಲಾ ಎಂಬಾತ ಕುಮಾರಗೌಡ ಬಿರಾದರ್ ಎಂಬುವವರಿಂದ ರೂ. 20,000 ಸಾಲ ಪಡೆದಿದ್ದ. ಕೆಲಸ ಮಾಡುವ ಭರವಸೆ ನೀಡಿದ್ದ ಚಂದಾಸಾಬ್, ಕೆಲಸಕ್ಕೆ ಹಾಜರಾಗದೆ ಇದ್ದುದಲ್ಲದೆ ಸಾಲದ ಹಣವನ್ನೂ ಮರಳಿಸಿರಲಿಲ್ಲ. ಇದರಿಂದ ಕುಪಿತಗೊಂಡ ಕುಮಾರಗೌಡ ಬಿರಾದರ್, ತನ್ನ ಸಹಚರ ಶ್ರೀಶೈಲ ಬಿರಾದರ್ ಜೊತೆಗೂಡಿ ಚಂದಾಸಾಬ್‌ನನ್ನು ಚಡಚನ ಪಟ್ಟಣದಿಂದ ತಮ್ಮ ಪಲ್ಸರ್ ಬೈಕ್‌ನಲ್ಲಿ ಅಪಹರಿಸಿ ಹಟ್ಟಳ್ಳಿ ಗ್ರಾಮಕ್ಕೆ ಕರೆತಂದಿದ್ದಾರೆ.

    ಅಲ್ಲಿ, ಮಲ್ಲಿಕಾರ್ಜುನ ಬಿರಾದರ್ ಅವರ ಅಂಗಡಿಯ ಮುಂದೆ ಚಂದಾಸಾಬ್‌ನ ಕಾಲುಗಳನ್ನು ಸರಪಳಿಯಿಂದ ಕಟ್ಟಿಹಾಕಿ ಸಾರ್ವಜನಿಕವಾಗಿ ಅವಮಾನಿಸಿ, ಸಾಲದ ಹಣವನ್ನು ಕೂಡಲೇ ಮರಳಿಸುವಂತೆ ಒತ್ತಾಯಿಸಿದ್ದಾರೆ. ಸಂಜೆಯವರೆಗೂ ಚಂದಾಸಾಬ್‌ನನ್ನು ಬಿಡುಗಡೆ ಮಾಡಲಾಗಿಲ್ಲ, ಆದರೆ ಆ ಸಂದರ್ಭದಲ್ಲಿ ವೈದ್ಯಕೀಯ ಸಹಾಯವನ್ನಾಗಲೀ ಅಥವಾ ಪೊಲೀಸ್ ದೂರನ್ನಾಗಲೀ ತಕ್ಷಣ ಸಲ್ಲಿಸಲಾಗಿರಲಿಲ್ಲ.

    ನಾಲ್ಕೈದು ದಿನಗಳ ನಂತರ ಚಂದಾಸಾಬ್ ಧೈರ್ಯ ಗೊಂಗೊಂಡು ಚಡಚನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಕಾರ್ಯಪ್ರವರ್ತಿಸಿದ ಸ್ಥಳೀಯ ಪೊಲೀಸರು ಇಬ್ಬರೂ ಆರೋಪಿಗಳನ್ನು ಬಂಧಿಸಿ ವಿಚಾರಣೆ ಆರಂಭಿಸಿದ್ದಾರೆ.

  • ರಾಜ್ಯದಲ್ಲಿ ಕಳೆದ 6 ತಿಂಗಳಲ್ಲಿ ಸುಮಾರು 2.3 ಲಕ್ಷ ನಾಯಿ ಕಡಿತ ಪ್ರಕರಣ ದಾಖಲು, ರೇಬಿಸ್ ನಿಂದ 19 ಮಂದಿ ಸಾವು! ವರದಿ

    ಬೆಂಗಳೂರು, ಜುಲೈ 20, 2025: ಕಳೆದ ಆರು ತಿಂಗಳಲ್ಲಿ ರಾಜ್ಯದಲ್ಲಿ 2.3 ಲಕ್ಷ ನಾಯಿ ಕಡಿತ ಪ್ರಕರಣಗಳು ದಾಖಲಾಗಿದ್ದು, ರೇಬಿಸ್ ನಿಂದ 19 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಈ ಸಂಬಂಧ ಅಧಿಕೃತ ಮಾಹಿತಿ ಬಿಡುಗಡೆಯಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಹೆಚ್ಚಳವಾಗಿದೆ. 2024ರಲ್ಲಿ 3.6 ಲಕ್ಷ ನಾಯಿ ಕಡಿತ ಪ್ರಕರಣಗಳು ಮತ್ತು 42 ರೇಬಿಸ್ ನಿಂದ ಸಾವಿನ ಪ್ರಕರಣ ವರದಿಯಾಗಿತ್ತು.

    ರಾಜ್ಯ ಆರೋಗ್ಯ ಇಲಾಖೆಯ ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮದ (IDSP)ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈ ವರ್ಷದ ಜನವರಿ 1 ಮತ್ತು ಜೂನ್ 30ರ ನಡುವೆ 2,31, 091 ನಾಯಿ ಕಡಿತ ಪ್ರಕರಣಗಳು ಹಾಗೂ 19 ರೇಬಿಸ್ ಸಾವಿನ ಪ್ರಕರಣ ದಾಖಲಾಗಿದೆ.

    ಅಂಕಿಅಂಶಗಳ ಪ್ರಕಾರ, ವಿಜಯಪುರದಲ್ಲಿ ಅತಿ ಹೆಚ್ಚು ನಾಯಿ ಕಡಿತ ಪ್ರಕರಣಗಳು (15,527) , ನಂತರ ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ವ್ಯಾಪ್ತಿಯಲ್ಲಿ 13,831 ಪ್ರಕರಣಗಳು, ಹಾಸನ (13,388), ದಕ್ಷಿಣ ಕನ್ನಡ (12,524), ಮತ್ತು ಬಾಗಲಕೋಟೆ (12,392) ವರದಿಯಾಗಿವೆ.

    ಕಳೆದ ವರ್ಷ ಇದೇ ಅವಧಿಯಲ್ಲಿ 1,69,672 ನಾಯಿ ಕಡಿತ ಪ್ರಕರಣಗಳು, 18 ರೇಬಿಸ್ ಸಾವು ಪ್ರಕರಣ ದಾಖಲಾಗಿತ್ತು. 2023ರ ಇದೇ ಅವಧಿಗೆ ಹೋಲಿಸಿದರೆ ನಾಯಿ ಕಡಿತ ಪ್ರಕರಣಗಳು ಶೇ. 36.20 ರಷ್ಟು ಹೆಚ್ಚಾಗಿರುವುದು ಮಾಹಿತಿಯಿಂದ ತಿಳಿದುಬರುತ್ತದೆ.

    ಇದೇ ವಾರ ಹುಬ್ಬಳ್ಳಿಯಲ್ಲಿ ಬೀದಿನಾಯಿಗಳು ಮೂರು ವರ್ಷದ ಬಾಲಕಿ ಮೇಲೆ ದಾಳಿ ಮಾಡಿ ಎಳೆದಾಡಿದ್ದ ವಿಡಿಯೋ ವೈರಲ್ ಆಗಿತ್ತು. ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿಲ್ಲ. ನಿಖರ ವರದಿಯಿಂದಾಗಿ ಈಗ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ಕಂಡುಬರುತ್ತಿವೆ. ಹಿಂದೆಯೂ ಕೂಡಾ ಇದೇ ರೀತಿಯ ಘಟನೆಗಳು ನಡೆದಿತ್ತು. ಆದರೆ ನಿಖರವಾಗಿ ವರದಿಯಾಗುತ್ತಿರಲಿಲ್ಲ. ಈಗ ಉತ್ತಮವಾಗಿ ವರದಿಯಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಹೇಳಿದ್ದಾರೆ.

    ಇಂತಹ ಪ್ರಕರಣಗಳ ನಿಯಂತ್ರಣಕ್ಕೆ ಇಲಾಖೆ ಸಾಕಷ್ಟು ಪ್ರಯತ್ನ ಮಾಡುತ್ತಿದ್ದು, ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ನಾಯಿ ಕಡಿತ ಸಂತ್ರಸ್ತರಿಗೆ ಹೇಗೆ ಚಿಕಿತ್ಸೆ ನೀಡಬೇಕು ಎಂದು ಡಾಕ್ಟರ್ ಗೆ ತರಬೇತಿ ನೀಡಲಾಗುತ್ತಿದೆ. ಬೀದಿ ನಾಯಿಗಳಿಗೆ ಕಡಿವಾಣ ಹಾಕುವಂತೆ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹರ್ಷ ಗುಪ್ತಾ ತಿಳಿಸಿದರು.

  • ಬೆಂಗಳೂರು-ಸೇಲಂ ಹೈವೆಯಲ್ಲಿ ಸರಣಿ ಅಪಘಾತ – 7 ವರ್ಷದ ಮಗು ಸೇರಿ ಮೂವರು ಸಾವು

    ಬೆಂಗಳೂರು: ಬೆಂಗಳೂರು-ಸೇಲಂ ಹೆದ್ದಾರಿಯಲ್ಲಿ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿ 7 ವರ್ಷದ ಮಗು ಸೇರಿ ಮೂವರು ಸಾವನ್ನಪ್ಪಿದ್ದಾರೆ.

    ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಬೆಂಗಳೂರು-ಸೇಲಂ ಹೆದ್ದಾರಿಯಲ್ಲಿ ವಾಹನ ದಟ್ಟಣೆಯ ಹಿನ್ನೆಲೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆಗೆ ಮಗು ಸೇರಿ ಮೂವರು ಮೃತಪಟ್ಟಿದ್ದಾರೆ.

    2 ಟ್ರಕ್, 2 ಕಾರು ಹಾಗೂ 1 ಬೈಕ್ ಒಂದಕ್ಕೊಂದು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ 2 ಟ್ರಕ್‌ಗಳ ನಡುವೆ 2 ಕಾರು ಹಾಗೂ ಬೈಕ್ ಸಿಲುಕಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 7 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಸ್ಥಳಕ್ಕಾಗಮಿಸಿದ ಕೃಷ್ಣಗಿರಿ ಪೊಲೀಸರು ಪರಿಶೀಲನೆ ನಡೆಸಿದರು. ಬಳಿಕ ಅಪಘಾತವಾದ ವಾಹನಗಳನ್ನು ತೆರವುಗೊಳಿಸಿ, ಸಂಚಾರಕ್ಕೆ ಅನುವು ಮಾಡಿಕೊಟ್ಟರು.

  • ಪಿಎಸ್‌ಐ ಕೀರಪ್ಪ ಘಟಕಾಂಬ್ಳೆ ಆತ್ಮಹತ್ಯೆ

    ಬಂಟ್ವಾಳ/ಶಿರಸಿ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಉಪನಿರೀಕ್ಷಕರಾಗಿ (ಪಿಎಸ್‌ಐ) ಸೇವೆ ಸಲ್ಲಿಸುತ್ತಿದ್ದ ಕೀರಪ್ಪ ಘಟಕಾಂಬ್ಳೆ ಅವರು ತಾವು ತಂಗಿದ್ದ ವಸತಿಗೃಹದ ಕೊಠಡಿಯಲ್ಲೇ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಅವರ ಈ ದಿಢೀರ್ ನಿರ್ಧಾರಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

    ಮೂಲತಃ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದವರಾದ 45 ವರ್ಷದ ಕೀರಪ್ಪ ಘಟಕಾಂಬ್ಳೆ ಅವರು ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಪೊಲೀಸ್ ಇಲಾಖೆಯಲ್ಲಿ ಸುಮಾರು 20 ವರ್ಷಗಳ ಅನುಭವ ಹೊಂದಿದ್ದ ಅವರು, ಈ ಹಿಂದೆ ಮುಂಡಗೋಡ, ಶಿರಸಿ ಗ್ರಾಮೀಣ ಮತ್ತು ಶಿರಸಿ ಮಾರ್ಕೆಟ್ ಪೊಲೀಸ್ ಠಾಣೆಗಳಲ್ಲಿ ಸಹಾಯಕ ಉಪನಿರೀಕ್ಷಕರಾಗಿ (ಎಎಸ್‌ಐ) ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದರು.

    ಕಳೆದ ಎಂಟು ತಿಂಗಳ ಹಿಂದಷ್ಟೇ ಅವರಿಗೆ ಪಿಎಸ್‌ಐ ಆಗಿ ಪದೋನ್ನತಿ ದೊರೆತಿತ್ತು. ಪದೋನ್ನತಿಗೊಂಡ ನಂತರ ಅವರು ಬಂಟ್ವಾಳ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು. ತಮ್ಮ ಕುಟುಂಬವನ್ನು ಶಿರಸಿಯಲ್ಲಿಯೇ ಬಿಟ್ಟು, ಘಟಕಾಂಬ್ಳೆ ಅವರು ಬಂಟ್ವಾಳದಲ್ಲಿ ವಾಸವಾಗಿದ್ದರು.

    ಅವರ ಆತ್ಮಹ*ತ್ಯೆಯ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸ್ ಇಲಾಖೆ ಸೇರಿದಂತೆ ಅವರ ಕುಟುಂಬಸ್ಥರು, ಸಹೋದ್ಯೋಗಿಗಳು ಮತ್ತು ಹಳಿಯಾಳ ಹಾಗೂ ಶಿರಸಿಯಲ್ಲಿರುವ ಸ್ನೇಹಿತರ ವಲಯದಲ್ಲಿ ತೀವ್ರ ಆಘಾತ ಮತ್ತು ಶೋಕ ಮನೆ ಮಾಡಿದೆ. ಅವರು ಪತ್ನಿ, ಇಬ್ಬರು ಮಕ್ಕಳು ಮತ್ತು ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

    ಬಂಟ್ವಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತೀವ್ರ ತನಿಖೆ ಆರಂಭಿಸಿದ್ದಾರೆ

  • Vadodara teacher gets six months in jail for slapping student, fined Rs 1 lakh

    Gujarat, 20 July 2025: A Vadodara court has sentenced a private tuition teacher to six months of imprisonment and imposed a fine of ₹1 lakh for physically assaulting a Class 10 student. The judgment came nearly five years after the incident, which left the 15-year-old with serious injuries to his ears, a TOI report stated.

    The Judicial Magistrate First Class (JMFC) court in Vadodara delivered its verdict on Thursday against Jasbirsinh Chauhan, who ran a coaching centre and tutored the boy in English and Social Science. Chauhan was found guilty of subjecting the student to corporal punishment on December 23, 2019.

    Student’s parents witnessed assault at coaching centre

    According to the complaint filed by the student’s father, Tejas Bhatt, the student had gone for tuition as usual that evening. Later, he called his father and asked him to bring an exam form to the coaching centre. When Bhatt and his wife arrived, they allegedly heard sounds of someone being beaten inside the premises.

    Bhatt entered the classroom and saw Chauhan repeatedly slapping his son on the face and ears. Upon being confronted, Chauhan began apologising and said, “He had missed two days of class, during which important topics were taught.”

    Past abuse, medical injuries, and police action

    After the incident, the boy told his parents that this was not the first time Chauhan had hit him. A relative of the family then contacted the child helpline, and a formal police complaint was lodged. Medical tests confirmed that the student had sustained serious injuries, both eardrums were torn and bleeding.

    Despite repeated apologies from Chauhan following the incident, he was arrested in January 2020. After lengthy legal proceedings, the court convicted him and issued the sentence on Thursday.